ರಾಯಚೂರು | ಎಸ್‌ಸಿ ಸಮುದಾಯಕ್ಕೆ ರುದ್ರಭೂಮಿ ಮಂಜೂರು; ಜಿಲ್ಲಾಧಿಕಾರಿ ಸೂಚನೆ

Date:

ಪರಿಶಿಷ್ಟ ಜಾತಿ(ಎಸ್‌ಸಿ) ಸಮುದಾಯಕ್ಕೆ ರುದ್ರಭೂಮಿ ಮಂಜೂರು ಮಾಡುವಂತೆ ರಾಯಚೂರು ಜಿಲ್ಲಾಧಿಕಾರಿ ಸಂಬಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ(ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಮೇಲ್ವಿಚಾರಣಾ ಸಮಿತಿ ಸದಸ್ಯ ರವೀಂದ್ರ ಜಲ್ದಾರ್ ಮಾತನಾಡಿ, “ಸದರಿ ಸ್ಮಶಾನ ಭೂಮಿ ಈಗಾಗಲೇ ಭೂಮಾಪಕರು ಸಲ್ಲಿಸಿದ ವರದಿಯಂತೆ ಅರಣ್ಯ ಇಲಾಖೆಗೆ ಸೇರಿದ್ದು, ಪರಿಶಿಷ್ಟ ಜಾತಿ ಸಮುದಾಯದ ರುದ್ರಭೂಮಿ ಉಪಯೋಗಕ್ಕಾಗಿ ಸರ್ವೆ ನಂ 1167ರಲ್ಲಿನ 6 ಗುಂಟೆ ಹಾಗೂ ಅದಕ್ಕೆ ಹೊಂದಿಕೊಂಡ ಅರಣ್ಯ ಇಲಾಖೆಗೆ ಸೇರಿದ 15 ಎಕರೆ ಭೂಮಿಯನ್ನು ಅರಣ್ಯ ಇಲಾಖೆಯಿಂದ ಪಡೆದು ಮಂಜೂರು ಮಾಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ವೆ ನಂ 1167ರಲ್ಲಿನ ರುದ್ರಭೂಮಿಗೆ ತೆರಳಲು ಪ್ರಸ್ತುತ ಸಂಪರ್ಕ ರಸ್ತೆ ಇಲ್ಲದಿರುವುದರಿಂದ 80 ಅಡಿ ರಸ್ತೆ ನಿರ್ಮಾಣ ಮಾಡಬೇಕು” ಎಂದು ಮನವಿ ಮಾಡಿದರು.

ಈ ವೇಳೆ ಜಿಲ್ಲಾಧಿಕಾರಿ ಮಾತನಾಡಿ, “ಸದರಿ ಅರಣ್ಯ ಇಲಾಖೆಗೆ ಸೇರಿದ 01 ಎಕರೆ 05 ಗುಂಟೆ ಜಮೀನನ್ನು ಪರಿಶಿಷ್ಟ ಜಾತಿ ಜನಾಂಗದವರಿಗೆ ರುದ್ರಭೂಮಿ ಉಪಯೋಗಕ್ಕಾಗಿ ಅರಣ್ಯ ಹಕ್ಕು ಕಾಯ್ದೆಯಡಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಮಂಜೂರು ಮಾಡಬೇಕು” ಎಂದು ಸೂಚಿಸಿದರು.

ಸರ್ವೆ ನಂ.1220ರಲ್ಲಿನ ಸತ್ಯನಾಥ ಕಾಲೋನಿ ಕೋ-ಆಪರೇಟಿವ್ ಸೊಸೈಟಿಯಿಂದ ಈಗಾಗಲೇ ಹಂಚಿಕೆ ಮಾಡಲಾದ ನಿವೇಶನಗಳ ಮೂಲಕ 80 ಅಡಿ ರಸ್ತೆ ನಿರ್ಮಾಣ ಮಾಡುವ ಬಗ್ಗೆ ಸದರಿ ನಿವೇಶನ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವುದರಿಂದ ನಿವೇಶನಗಳ ನಕ್ಷೆಯನ್ನು ಅಂತಿಮ ಬದಲಾವಣೆ ಮಾಡಲು ಅಲ್ಲಿನ ಭೂ ಮಾಲೀಕರು ಸಮಾಜದ ಮುಖಂಡರುಗಳೊಂದಿಗೆ ಒಪ್ಪಿಗೆ ಪಡೆದು ಅಂತಿಮ ಅನುಮೋದನೆ ನೀಡಿ ಮಾರ್ಪಾಡು ನಕ್ಷೆ ತಯಾರಿಸುವಂತೆ ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತರಿಗೆ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಕೊಟಗೇರಾ ಅಂಬೇಡ್ಕರ್ ವಸತಿ ಶಾಲೆಯ ವಾರ್ಡನ್‌, ಪ್ರಾಂಶುಪಾಲರ ಅಮಾನತಿಗೆ ದಸಂಸ ಆಗ್ರಹ

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ
ಸದಸ್ಯರಾದ ಕೆ ಇ ಕುಮಾರ್, ಹೇಮರಾಜ್ ಅಸ್ಕಿಹಾಳ್‌, ಎನ್ ರಘುವೀರ್ ನಾಯಕ, ರವಿಕುಮಾ‌ರ್ ಅಸ್ಕಿಹಾಳ್‌, ಪವನ್ ಕಿಶೋರ್ ಪಾಟೀಲ್, ಬಸವರಾಜ ನಕ್ಕುಂದಿ, ಟಿ ಸುಧಾಮ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...