ರಾಯಚೂರು | ಮೃತ ಲೈನ್‌ಮ್ಯಾನ್‌ ಕುಟುಂಬಕ್ಕೆ ಪರಿಹಾರ ಒದಗಿಸುವಂತೆ ಆಗ್ರಹ

Date:

ವಿದ್ಯುತ್‌ ತಂತಿ ತೆಗೆಯಲು ಹೋಗಿ ಮೃತಪಟ್ಟ ಲೈನ್‌ಮ್ಯಾನ್‌ ವಿರೂಪಾಕ್ಷಪ್ಪ ಕುಟುಂಬಕ್ಕೆ ಪರಿಹಾರ ಕೊಡಬೇಕು ಎಂದು ಆಗ್ರಹಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ವತಿಯಿಂದ ರಾಯಚೂರು ಜಿಲ್ಲೆಯ ದೇವದುರ್ಗ ತಹಶೀಲ್ದಾರ್‌ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದರು.

“ದೇವದುರ್ಗ ತಾಲೂಕಿನ ಬಂಡೆಗುಡ್ಡ ತಾಂಡಾದ ಹತ್ತಿರ ಆಲದಮರ ಬಳಿ ವಿದ್ಯುತ್ ತಂತಿ ತೆಗೆಯಲು ಹೋಗಿ, ವಿದ್ಯುತ್‌ ಕಂಬಕ್ಕೆ ಹತ್ತಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್‌ ಸಂಪರ್ಕದಿಂದ ಲೈನ್‌ಮ್ಯಾನ್ ವಿರೂಪಾಕ್ಷಪ್ಪ ಮೃತಪಟ್ಟಿದ್ದರು. ಜೆಸ್ಕಾಂ ಅಧಿಕಾರಿಗಳ ಬೇಜವಬ್ದಾರಿತನದಿಂದ ಈ ಅವಘಡ ಸಂಭವಿಸಿದೆ. ಹಾಗಾಗಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ಲೈನ್‌ಮ್ಯಾನ್‌ ಮೃತಪಟ್ಟ ವೇಳೆ ದೇವದುರ್ಗ ವಿಧಾನಸಭಾ ಕ್ಷೇತ್ರದ ಶಾಸಕಿ ಕರೆಮ್ಮ ಜಿ ನಾಯಕ್‌ ಅವರು ನೋಡಲು ಹೋದಾಗ ಅವಾಚ್ಯ ಶಬ್ದಗಳಿಂದ ಬೈದಿರುವ ಬಿಜೆಪಿ ಕಾರ್ಯಕರ್ತರನ್ನು ಕೂಡಲೇ ಬಂಧಿಸಬೇಕು. ಜೊತೆಗೆ ಮೃತ ಲೈನ್‌ಮ್ಯಾನ್‌ ಕುಟುಂಬಕ್ಕೆ ಪರಿಹಾರ ಒದಗಿಸಬೇಕು. ಇಲ್ಲವಾದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ವತಿಯಿಂದ ತೀವ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗದಗ | ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಪರಿಹಾರಕ್ಕೆ ಎಸ್‌ಎಫ್‌ಐ ಮನವಿ

ಮಲ್ಲಪ್ಪ ಗೌಡೂರು, ಬಸವರಾಜ ಜಾಲಹಳ್ಳಿ, ಮರೆಪ್ಪ ಬಾಗೂರು, ಮಹಾದೇವಪ್ಪ, ಬಾಳಪ್ಪ ಬಾವಿಮನಿ, ಯಲ್ಲಪ್ಪ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...