ರಾಯಚೂರು | ಅಂಗನವಾಡಿ ಕಾರ್ಯಕರ್ತರನ್ನು ಖಾಯಂಗೊಳಿಸಲು ಅಹೋ ರಾತ್ರಿ ಧರಣಿ

Date:

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಕಾಯಂಗೊಳಿಸಬೇಕು ಹಾಗೂ ಅಂಗನವಾಡಿ ಕಟ್ಟಡಗಳ ಬಾಕಿಯಿರುವ ಬಾಡಿಗೆ ಪಾವತಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿಯಿಂದ ಮಂಗಳವಾರ ಅಹೋರಾತ್ರಿ ಧರಣಿ ಆರಂಭಿಸಲಾಯಿತು.

ಸಿಐಟಿಯು ರಾಜ್ಯ ಘಟಕದ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಬಳಿ ನಡೆಯುತ್ತಿರುವ ಹೋರಾಟದ ಭಾಗವಾಗಿ ಎರಡು ದಿನಗಳ ಹೋರಾಟಕ್ಕೆ ಬೆಂಬಲಿಸಿ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರು ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಧರಣಿ ನಡೆಸಿದರು.

ಗುಜರಾತ್ ಹೈಕೊರ್ಟ್ ತೀರ್ಪಿನಂತೆ ಅಂಗನವಾಡಿ ಕಾರ್ಯಕರ್ತೆರು ಹಾಗೂ ಸಹಾಯಕಿಯರನ್ನು ವರ್ಗ 3 ಮತ್ತು 4 ಎಂದು ಪರಿಗಣಿಸಿ ಕಾಯಂ ಮಾಡಬೇಕು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 14 ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆ (ಐಸಿಡಿಸಿ) 2023ರ ಆದೇಶದ ಪ್ರಕಾರ ಕೂಡಲೇ ಗ್ರಾಚ್ಯೂಟಿ ಹಣ ಬಿಡುಗಡೆ ಮಾಡಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಲ್ಲರಿಗೂ ಅನ್ವಯಿಸಿ 2018ರಿಂದ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರ ಗೌರವಧನ ಹೆಚ್ಚಳ ಮಾಡದ ಕಾರಣ ಕುಟುಂಬ ನಿರ್ವಹಣೆಗೆ ಸಮಸ್ಯೆಯಾಗಿದೆ. ಕೂಡಲೇ ₹26,000 ಗೌರವ ಧನ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.

2025ರ ವಿಧಾನಸಭೆ ಚುನಾವಣೆಯಲ್ಲಿ ಘೋಷಣೆ ಮಾಡಿದ ₹15 ಸಾವಿರ ಗೌರವಧನ ಹೆಚ್ಚಿಸಬೇಕು. ನಿವೃತ್ತಿಯಾದ ವರಿಗೆ ಇಡಿಗಂಟು ಅಥವಾ ಒಪಿಎಸ್ ಹಣವನ್ನು ಹಾಗೂ ₹10 ಸಾವಿರ ಮಾಸಿಕ ಪಿಂಚಣಿಯನ್ನು ನೀಡಬೇಕು. ಶಿಕ್ಷಣ ಇಲಾಖೆ ಮತ್ತು ಎಡಿಎಂಸಿ ಗಳಿಂದ ಪ್ರಾರಂಭ ಮಾಡಿರುವ ಎಲ್‌ಕೆಜಿ, ಯುಕೆಜಿ ನಿಲ್ಲಿಸಿ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್‌ಕೆಜಿ, ಯುಕೆಜಿ ಪ್ರಾರಂಭಿ ಸಬೇಕು ಎಂದು ಆಗ್ರಹಿಸಿದರು.

ಐಸಿಡಿಎಸ್ ಯೋಜನೆಗೆ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪಿಸಬೇಕು. ನಗರಸಭೆ, ನಗರ ಪಾಲಿಕೆ, ಮಹಾನಗರ ಪಾಲಿಕೆ, ವಿಧಾನಸಭೆ, ಲೋಕಸಭಾ ಚುನಾವಣೆಗಳು ಹಾಗೂ ಉಪಚುನಾವಣೆಗಳಲ್ಲಿ ಮತದಾರರನ್ನು ಗುರುತಿಸುವುದು, ಚುನಾವಣಾ ಸಂದಭದಲ್ಲಿ ಚೀಟಿ ಹಂಚುವುದು, ಬೂತ್‌ಗಳಲ್ಲಿ ಕೆಲಸಕ್ಕೆ ನಿಯೋಜಿಸುವುದರಿಂದ ದಿನನಿತ್ಯದ ಕೆಲಸಕ್ಕೆ ಸಮಸ್ಯೆಯಾಗುತ್ತಿದ್ದು ಚುನಾವಣೆ ಕಾರ್ಯಗಳಿಂದ ಮುಕ್ತಗೊಳಿಸಬೇಕು ಎಂದು ಮನವಿ ಮಾಡಿದರು.

ಇಲಾಖೆ ಸಚಿವರು ಒಪ್ಪಿಕೊಂಡಂತೆ ಸಾಮೂಹಿಕ ಆರೋಗ್ಯ ವಿಮೆಯನ್ನು ಕೂಡಲೇ ಜಾರಿಗೊಳಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಕೊಡುವ ಪೂರಕ ಪೌಷ್ಟಿಕ ಆಹಾರಕ್ಕೆ ಜಿಎಸ್‌ಟಿಯಿಂದ ಹೊರಗಿಡಬೇಕು. ಘಟಕ ವೆಚ್ಚ ಹೆಚ್ಚಳ ಮಾಡಿ ಹಿಂದಿನಂತೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಮೆನು ಅಂತಿಮಗೊಳ್ಳವ ವ್ಯವಸ್ಥೆ ಜಾರಿಯಾಗಬೇಕು. ಅಂಗನವಾಡಿ ಕೇಂದ್ರಗಳಿಗೆ ಮೂಲಸೌಕರ್ಯ ಒದಗಿಸಬೇಕು.

ಖಾಲಿ ಹುದ್ದೆಗಳಿಗೆ 3 ತಿಂಗಳೊಳಗೆ ನೇಮಕಾತಿ ಮಾಡಬೇಕು ಸಾಧ್ಯವಾಗದಿದ್ದಲ್ಲಿ ಹೆಚ್ಚಿನ ಸೇವೆಗೆ ಹೆಚ್ಚುವರಿ ವೇತನ ಪಾವತಿಸಬೇಕು ಎಂದು ಆಗ್ರಹಿಸಿದರು. ಖಾಲಿ ಇರುವ ಮತ್ತು ಹೊಸ ಕೇಂದ್ರಗಳಿಗೆ ಸರ್ಕಾರಿ ಆದೇಶದಂತೆ ಮುಂಬಡ್ತಿ, ವರ್ಗಾವಣೆಗಳನ್ನೂ ನೀಡಿ ನಂತರ ಹೊಸ ಆಯ್ಕೆ ಮಾಡಬೇಕು. ರಾಜಕೀಯ ಒತ್ತಡಕ್ಕೆ ಮಣಿದು ಅವಕಾಶದಿಂದ ವಂಚಿಸಬಾರದು.

ಮಿನಿ ಅಂಗನವಾಡಿ ಕೇಂದ್ರಗಳನ್ನು ಪೂರ್ಣ ಕೇಂದ್ರಗಳನ್ನಾಗಿ ಪರಿವರ್ತಿಸುವವರೆಗೆ ಸಹಾಯಕಿಯರಿಗೆ ಜವಾಬ್ದಾರಿ ನೀಡಬೇಕು ಹಾಗೂ ಗೌರವಧನ ಹೆಚ್ಚಳ ಮಾಡಬೇಕು. ಕರ್ತವ್ಯದ ವೇಳೆ ಉಂಟಾಗುವ ತಾಂತ್ರಿಕ ಅಡಚಣೆ ಸರಿಪಡಿಸಿ ಸುಧಾರಿಸಬೇಕು ಎಂದು ಒತ್ತಾಯಿಸಿದರು.

ಧರಣಿಯಲ್ಲಿ ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷೆ ಎಚ್.ಪದ್ಮಾ, ಕಾರ್ಯದರ್ಶಿ ರಂಗಮ್ಮ ಅನ್ವರ, ವರಲಕ್ಷ್ಮಿ, ಗೋಕರಮ್ಮ, ರಮಾದೇವಿ, ಸರಸ್ವತಿ, ಮಹೇಶ್ವರಿ,ಸುಜಾತಾ, ರೂಪಾ, ಲಕ್ಷ್ಮಿ, ಶರಣಬಸವ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...