ರಾಯಚೂರು | ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಿದ್ದ ಮೊಬೈಲ್ ಹಿಂಪಡೆಯಲು ಒತ್ತಾಯ

Date:

ದೇಶದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಕನಿಷ್ಠ ವೇತನ ನಿಗದಿ ಮಾಡಿ, ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ (ಸಿಐಟಿಯು ಸಂಯೋಜಿತ) ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ರಾಯಚೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದರು.

“ರಾಜ್ಯ ಸರ್ಕಾರ ಪೋಷಣ್ ಟ್ರಾಕ್ ಕಾರ್ಯಕ್ರಮದಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಿರುವ ಮೊಬೈಲ್ ಫೋನ್‌ಗಳು ಹ್ಯಾಂಗ್ ಆಗುತ್ತಿದ್ದು, ಕೆಲಸ ಮಾಡಲು ಉಪಯೋಗವಾಗುತ್ತಿಲ್ಲ.‌ ಹಳೆ ಮೊಬೈಲ್‌ಗಳನ್ನು ಹಿಂಪಡೆದು, ಹೊಸ ಮಾದರಿ 4 ಅಥವಾ 6ಜಿಬಿ ರ್‍ಯಾಮ್ ಹೊಂದಿರುವ ಮೊಬೈಲ್‌ ನೀಡಿದರೆ ಅನುಕೂಲವಾಗುತ್ತದೆ” ಎಂದು ಒತ್ತಾಯಿಸಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಇಎಸ್‍ಐ, ಪಿಎಫ್, ಎಕ್ಸ್‌ಗ್ರೇಷಿಯಾ ಸೇರಿದಂತೆ ಇತರ ಸೌಲಭ್ಯಗಳನ್ನು ನೀಡಿ ಸಾಮಾಜಿಕ ಭದ್ರತೆ ಒದಗಿಸಬೇಕು. 45 ಮತ್ತು 46ನೇ ಇಂಡಿಯನ್ ಲೇಬರ್ ಕಾನ್ಫರೆನ್ಸ್‌ಗಳ ಶಿಫಾರಸುಗಳನ್ನು ಜಾರಿ ಮಾಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾಸನ | ಅಂಗನವಾಡಿ ಕಾರ್ಯಕರ್ತೆಯರ ಅಗತ್ಯತೆ ಪೂರೈಕೆಗೆ ಆಗ್ರಹ

“ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯೂಟಿ ನೀಡುವ ಕುರಿತು ಕೋರ್ಟ್ ನೀಡಿರುವ ತೀರ್ಪುನ್ನು ಜಾರಿಗೊಳಿಸಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷೆ ಎಚ್ ಪದ್ಮಾ, ತಾಲೂಕು ಕಾರ್ಯದರ್ಶಿ ನರ್ಮದಾ, ಖಜಾಂಚಿ ಎಸ್ ರಂಗಮ್ಮ ಸಿಐಟಿಯು ಮುಖಂಡರುಗಳಾದ ಡಿ ಎಸ್ ಶರಣಬಸವ, ಕೆ ಜಿ ವೀರೇಶ ಹಾಗೂ ಅಂಗನವಾಡಿ ಕಾರ್ಯಕರ್ತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...