ರಾಯಚೂರು | ವಿಶೇಷ ಚೇತನರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

Date:

ವಿಶೇಷ ಚೇತನರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಆರ್‌ಪಿಡಿ ಟಾಸ್ಕ್ ಪೋರ್ಸ್ ವತಿಯಿಂದ ರಾಯಚೂರು ಅಪರ ಜಿಲ್ಲಾಧಿಕಾರಿ ಶಿವಪ್ಪ ಭಜಂತ್ರಿ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯ ಬಹುತೇಕ ಸರ್ಕಾರಿ ಕಚೇರಿಗಳಿಗೆ ಯಾವುದೇ ಮಾನದಂಡವಿಲ್ಲದೆ ಅವೈಜ್ಞಾನಿಕವಾಗಿ ರ‍್ಯಾಂಪ್‌ಗಳನ್ನು ನಿರ್ಮಾಣ ಮಾಡಲಾಗಿದ್ದು, ತೆರವುಗೊಳಿಸಿ ಮರು ನಿರ್ಮಾಣ ಮಾಡಬೇಕು ಮತ್ತು ಎಲ್ಲ ಸರ್ಕಾರಿ ಇಲಾಖೆಯಲ್ಲಿ ವೀಲ್ ಚೇರ್ ಸೌಲಭ್ಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

ವಿಶೇಷ ಚೇತನರ ಹಕ್ಕುಗಳ ಕಾಯ್ದೆ 2006 ರ ಸೆಕ್ಷನ್ 72 ರ ಅಡಿಯಲ್ಲಿ ರಚನೆಯಾದ ಜಿಲ್ಲಾ ಅನುಷ್ಟಾನ ಸಮಿತಿ ಹಾಗೂ ಜಿಲ್ಲಾ ಮಟ್ಟದವಿಶೇಷ ಚೇತನರ ಕುಂದುಕೊರತೆಗಳ ಸಭೆಗಳನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಹಮ್ಮಿಕೊಳ್ಳಬೇಕು. ಪ್ರತಿ ತಾಲೂಕುಗಳಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ವಿಶೇಷ ಚೇತನರ ಕುಂದುಕೊರತೆಗಳ ಸಭೆಗಳನ್ನು ಹಮ್ಮಿಕೊಳ್ಳಲು ಆದೇಶ ನೀಡಬೇಕೆಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯ ಎಲ್ಲ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್‌ಗಳ ಸ್ವಂತ ನಿಧಿ, ಎಸ್. ಎಫ್. ಸಿ, ಅನುದಾನ ಹಾಗೂ 2002-03ನೇ ಸಾಲಿನಲ್ಲಿ ಬಿಡುಗಡೆಯಾದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ ಹಂತ 4 ರ ಅಡಿ ಮಂಜೂರಾದ ಅನುದಾನಗಳಲ್ಲಿ ವಿಶೇಷ ಚೇತನ ವ್ಯಕ್ತಿಗಳಿಗೆ ಮೀಸಲಿರುವ ಶೇ.5 ರಷ್ಟರ ಅನುದಾನವನ್ನು 2024-25 ನೇ ಸಾಲಿನ ಒಳಗಾಗಿ ಸಂಪೂರ್ಣ ಬಳಕೆಯಾಗಬೇಕು ಎಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಉಡುಪಿ | ಲಂಡನ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದ ಆರ್ ಮನೋಹರ್ ಅಭಿವೃದ್ಧಿಪಡಿಸಿದ ಬೈನಾಕ್ಯುಲರ್

ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ ಗಳಿಗೆ ನಿಗದಿಪಡಿಸಿರುವ ಹಾಗೂ ಸ್ವಂತ ಸಂಪನ್ಮೂಲಗಳಿಂದ ಬರುವ ಅನುದಾನ ಸೇರಿಸಿ ಒಟ್ಟು ಅನುದಾನದಲ್ಲಿ ಶೇ. 5 ರಷ್ಟು ಅನುದಾನ ವನ್ನು ವಿಶೇಷ ಚೇತನರ ಸರ್ವತೋಮುಖ ಅಭಿವೃದ್ಧಿಗಾಗಿ ಬಳಕೆ ಮತ್ತು ವಿವಿಧ ಇಲಾಖೆಗಳ ಹಾಗೂ ಇಲಾಖೇತರರ ಸಮನ್ವಯತೆಯಿಂದ ವಿಶೇಷ ಚೇತನರ ಸಮಗ್ರ ಅಭಿವೃದ್ಧಿಗಾಗಿ ಹೊರಡಿಸಿದ ಸುತ್ತೋಲೆ ಅನುಷ್ಠಾನ ಗೊಳಿಸಲು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಎಂಡಿ ಜಾಫರ್ ಮಾನ್ವಿ, ಪ್ರಧಾನ ಕಾರ್ಯದರ್ಶಿ ಸುರೇಶ ಭಂಡಾರಿ ಮುದಗಲ್, ಮಹಮದ್ ಅನ್ವರ್, ಅಸ್ಕಿಹಾಳ ನಾಗರಾಜ, ಅಜಮಲ್, ಹನುಮೇಶ ಕಾತರಕಿ, ರಾಯಪ್ಪ ಮಸ್ಕಿ, ಗುಂಡಪ್ಪಗೌಡ ಸಿರವಾರ ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...