ರಾಯಚೂರು | ಏಮ್ಸ್‌ ಮಂಜೂರು ಮಾಡುವಂತೆ ಕೇಂದ್ರಕ್ಕೆ ಒತ್ತಾಯಿಸಲು ಸಿಎಂಗೆ ಮನವಿ

Date:

ಮುಂಬರುವ ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ರಾಯಚೂರಿಗೆ ಏಮ್ಸ್ ಮಂಜೂರು ಮಾಡಿ ಘೋಷಿಸಲು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತರಾಮನ್ ಅವರಿಗೆ ಒತ್ತಡ ಹಾಕುವಂತೆ ಕಾಂಗ್ರೆಸ್ ರಾಜ್ಯ ಯುವ ಮುಖಂಡ ರವಿ ಬೋಸರಾಜು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ಅವರು, ಜಿಲ್ಲೆಯಲ್ಲಿ ಏಮ್ಸ್ ಹೋರಾಟ ಸಮಿತಿ ಸುಮಾರು 625 ದಿನಗಳಿಂದ ಅಮರಣಾಂತರ ಸತ್ಯಾಗ್ರಹವನ್ನು ನಡೆಸುತ್ತಿದೆ. ಅಲ್ಲದೆ, ಜಿಲ್ಲೆಯಲ್ಲಿ ಏಮ್ಸ್ ಸ್ಥಾಪಿಸುವಂತೆ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ಮನಸುಖ್ ಎಲ್. ಮಾಂಡವೀಯ ಅವರನ್ನು ಭೇಟಿ ಮಾಡಿ ಮಾತನಾಡಲಾಗಿತ್ತು. ಈ ಕುರಿತು ಹಣದ ಕೊರತೆಯಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಬಾರಿಯ ಬಜೆಟ್‌ನಲ್ಲಿ ಜಿಲ್ಲೆಗೆ ಏಮ್ಸ್ ಘೋಷಿಸಬೇಕೆಂದು ಒತ್ತಡ ಹೇರುವಂತೆ ಆಗ್ರಹಿಸಿದ್ದಾರೆ.

ರಾಯಚೂರು ಜಿಲ್ಲೆ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಜಿಲ್ಲೆಯಾಗಿದೆ ಅಲ್ಲದೆ ಭಾರತೀಯ ಸಂವಿಧಾನದ 371 (ಜೆ) ವಿಶೇಷ ನಿಬಂಧನೆಯ ಅಡಿಯಲ್ಲಿಯೂ ಸಹ ಒಳಗೊಂಡಿದೆ. ಹಿಂದುಳಿದ ಜಿಲ್ಲೆಯಾಗಿರುವ ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವ ಮೂಲಕ ಆರೋಗ್ಯ, ಉದ್ಯೋಗ, ವೈದ್ಯಕೀಯ ಶಿಕ್ಷಣದ ಬಲವರ್ಧನೆಗಾಗಿ ಹಾಗೂ ಹಿಂದುಳಿದ ಹಣೆಪಟ್ಟಿ ಕಳಚಲು ಮಂಜೂರು ಮಾಡಬೇಕಾಗಿದೆ ಎಂದು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...