ರಾಯಚೂರು | ಅತಿಕ್ರಮಣ ತೆರವುಗೊಳಿಸಿ, ಶಾಲಾ ಕೊಠಡಿ ನಿರ್ಮಿಸಲು ಮನವಿ

Date:

ಸರ್ಕಾರಿ ಶಾಲೆಗೆ ಮೀಸಲಿರಿಸಿದ ಖಾಲಿ ನಿವೇಶನವನ್ನು ಅತಿಕ್ರಮಣ ಮಾಡಿಕೊಂಡಿರುವವರ ವಿರುದ್ಧ ಕ್ರಮ ಕೈಗೊಂಡು ಅತಿಕ್ರಮಣ ತೆರವುಗೊಳಿಸಿ ಶಾಲಾ ಕೊಠಡಿ ನಿರ್ಮಿಸಬೇಕು ಎಂದ ಸರ್ಕಾರಿ ಪ್ರೌಢಶಾಲೆ ಎಲ್‌ಬಿಎಸ್ ನಗರದ ಎಸ್‌ಡಿಎಂಸಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು.

ರಾಯಚೂರು ನಗರದ ಚಂದ್ರಬಂಡಾ ರಸ್ತೆಯಲ್ಲಿ ಬರುವ ಸರ್ವೆ ನಂ. 384/1ಎ ಸಂತೋಷ ನಗರದ ವಾರ್ಡ್ 28ರಲ್ಲಿ ಬರುತ್ತಿದೆ, 1017.45 ಚದರ ಮೀಟರ್ ನಿವೇಶನ ಜಾಗ ಶೈಕ್ಷಣಿಕ ಉದ್ದೇಶಕ್ಕಾಗಿ ಮೀಸಲಿಟ್ಟು ಆ ಸ್ಥಳದಲ್ಲಿ ಎಲ್‌ಬಿಎಸ್ ನಗರದ ಪ್ರೌಢಶಾಲಾ ನಿರ್ಮಾಣಕ್ಕೆ ಈಗಾಗಲೇ ಮಂಜೂರಾತಿ ಆಗಿದೆ. ಆದರೆ, ಈ ಬಡಾವಣೆಯ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಕುತಂತ್ರ ಮಾಡಿ ದೇವರು ಮತ್ತು ದೇವಸ್ಥಾನ ಹೆಸರಿನಲ್ಲಿ ನಿವೇಶನವನ್ನು ಕಬಳಿಸುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.

ಸಣ್ಣದಾಗಿ ತಾತ್ಕಾಲಿಕ ಟಿನ್ ಶೆಡ್ಡು ನಿರ್ಮಾಣ ಮಾಡಿಕೊಂಡಿದ್ದು, ಈಗ ಅದೇ ಟಿನ್ ಶೆಡ್ಡನ್ನು ಮಾರ್ಪಾಡು ಮಾಡುವ ಮೂಲಕ ಸರ್ಕಾರಿ ಶಾಲೆಯ ಜಾಗವನ್ನು ಕಬಳಿಸಿ ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡಲು ಹೊರಟಿದ್ದಾರೆ. ಅದೇ ಬಡಾವಣೆಯಲ್ಲಿ ಈಗಾಗಲೇ ಧಾರ್ಮಿಕ ಉದ್ದೇಶದ ಅಡಿಯಲ್ಲಿ ದೇವಸ್ಥಾನಕ್ಕಾಗಿ ಬೇರೆ ಜಾಗ ಮೀಸಲಿದ್ದು, ಅಲ್ಲಿ ದೇವಸ್ಥಾನ ನಿರ್ಮಾಣವಾಗಿದೆ. ಕನ್ನಡ ಶಾಲೆ ನಿರ್ಮಾಣವಾಗುತ್ತಿದ್ದರೂ ಉರ್ದು ಶಾಲೆ ನಿರ್ಮಾಣ ಮಾಡುತ್ತಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಿ ಜಾಗ ಕಬಳಿಸುವ ಕುತಂತ್ರ ನಡೆಸಿದ್ದಾರೆ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ನಗರಸಭೆಗೆ ಮನವಿ ಸಲ್ಲಿಸಿದೆ, ಯಾವುದೇ ಪ್ರಯೋಜನವಾಗಿಲ್ಲ, ಪ್ರಸ್ತುತ ಸಾಲಿನಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ವಂತ ಕಟ್ಟಡವಿಲ್ಲದೆ ಬೇರೆ ಕಡೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕೂಡಲೆ ಟೀನ್ ಶೆಡ್ ತೆರವುಗೊಳಿಸಿ ಶಾಲಾ ಕಟ್ಟಡ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಸದಸ್ಯರಾದ ಅನ್ವರ್ ಪಾಷ, ಕಾಸಿಂ ನಾಯಕ್, ಮಧುಸೂದನ್, ನರಸಿಂಹಲು.ಕೆ, ನರಸಿಂಹಲು ಸೇರಿದಂತೆ ಅನೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...