ರಾಯಚೂರು | ಆಶ್ರಯ ಕಾಲೋನಿ ನಿವಾಸಿಗಳಿಗೆ ಮನೆ ಹಕ್ಕುಪತ್ರ ನೀಡುವಂತೆ ಒತ್ತಾಯ

Date:

ರಾಯಚೂರು ನಗರದ ಚಂದ್ರಬಂಡಾ ರಸ್ತೆಯಲ್ಲಿರುವ ಆಶ್ರಯ ಕಾಲೋನಿಯ ಸರ್ವೇ ನಂಬರ್ 572, 573 ಮತ್ತು 574ರಲ್ಲಿ ವಾಸವಾಗಿರುವ ನಿವಾಸಿಗಳಿಗೆ ಮನೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಆಶ್ರಯ ಕಾಲೊನಿ ನಿವಾಸಿಗಳ ಸಂಘದಿಂದ ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

“199-92ನೇ ಸಾಲಿನಲ್ಲಿ ಆಶ್ರಯ ಕಾಲೋನಿ ಯೋಜನೆ ವತಿಯಿಂದ ಮನೆಗಳನ್ನು ನಿರ್ಮಿಸಿದ್ದು, ಯಾವುದೇ ಫಲಾನುಭವಿಗಳು ವಾಸವಿರಲಿಲ್ಲ. ಮನೆಗಳನ್ನು ದುರಸ್ತಿ ಮಾಡಿಕೊಂಡು ಜೀವನ ನಡೆಸುತ್ತಿದ್ದೇವೆ. ನೀರು ವಿದ್ಯುತ್, ರಸ್ತೆ, ಒಳಚರಂಡಿ, ಯಾವುದೇ ಮೂಲಸೌಲಭ್ಯವಿಲ್ಲ. ಈ ಹಿನ್ನೆಲೆಯಲ್ಲಿ ಮೂಲಸೌಲಭ್ಯ ಹಾಗೂ ಹಕ್ಕುಪತ್ರಕ್ಕಾಗಿ ಮನವಿ ಮಾಡಿದರೂ ಈವರೆಗೆ ಹಕ್ಕುಪತ್ರ ನೀಡಿಲ್ಲ” ಎಂದು ನಿವಾಸಿಗಳು ದೂರಿದರು.

“ಮನೆಯ ವಿದ್ಯುತ್ ರಶೀದಿ, ಆಧಾರ್ ಕಾರ್ಡ್, ಚುನಾವಣಾ ಐಡಿಕಾರ್ಡ್, ಬ್ಯಾಂಕ್, ರೇಷನ್ ಕಾ‌ರ್ಡ್‌ನಲ್ಲಿಯೂ ಮನೆಗಳ ನಂಬರ್, ವಿಳಾಸ ಸೇರ್ಪಡೆಯಾಗಿವೆ. ಚುನಾವಣೆಯಲ್ಲಿ ಮತ ಚಲಾಯಿಸಿಕೊಂಡು ಬೇಡಿಕೆ ಈಡೇರಿಸುತ್ತಿಲ್ಲ. ಹಕ್ಕುಪತ್ರ ನೀಡಬೇಕೆಂದು 2014-15ರಲ್ಲಿ ಸುತ್ತೋಲೆ ಹೊರಡಿಸಿದೆ, 2015-16ರಲ್ಲಿ ಶಾಸಕರು ಸಮಿತಿ ಮಾಡಿ ಸಭೆ ನಡೆಸಿದ್ದರು. ಆದರೆ ಇತ್ತೀಚೆಗೆ ಕೆಲವು ಗೂಂಡಾಗಳು ಹಕ್ಕುಪತ್ರ ತಂದು ಮನೆ ಖಾಲಿಮಾಡುವಂತೆ ದೌರ್ಜನ್ಯ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಬೀದಿನಾಯಿಗಳ ದಾಳಿಗೆ ಯುವತಿ ಬಲಿ; ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡುವಂತೆ ಪ್ರತಿಭಟನೆ

“600 ಮನೆಗಳಲ್ಲಿ ವಾಸಿಸುತ್ತಿರುವ 600 ಅರ್ಹ ಫಲಾನುಭವಿಗಳಿಗೆ ಕೂಡಲೇ ಹಕ್ಕುಪತ್ರ ನೀಡಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನಿವಾಸಿಗಳಾದ ಗೋವಿಂದ ನಾಯಕ, ಆಶಪ್ಪ, ನಾಗೇಂದ್ರ, ಮೌನೇಶ, ಕೆ ಬಸವರಾಜ, ಕೆ ಮಲ್ಲೇಶ, ಅನ್ವರ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...