ರಾಯಚೂರು | ಕಾರ್ಮಿಕರ ಮೇಲೆ ಹಲ್ಲೆ: ಕಠಿಣ ಕ್ರಮಕ್ಕೆ ಆಗ್ರಹ

Date:

ವಿಜಯಪುರ ನಗರದಲ್ಲಿ ಕಾರ್ಮಿಕರ ಮೇಲೆ ನಡೆದ ದೌರ್ಜನ್ಯ ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಹದ್ದು. ಘಟನೆಗೆ ಕಾರಣರಾದ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸಿ ಗಡಿಪಾರು ಮಾಡಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ದೇವದುರ್ಗ ತಹಶೀಲ್ದಾರ್ ಮುಖಾಂತರ ಗೃಹ ಸಚಿವ ಪರಮೇಶ್ವರ್ ಅವರಿಗೆ ಹಕ್ಕೊತ್ತಾಯ ಸಲ್ಲಿಸಲಾಯಿತು.

ಜಿಲ್ಲೆಯ ಗಾಂಧಿನಗರ ಬಳಿ ಇರುವ ಇಟ್ಟಿಗೆ ಭಟ್ಟಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮೂವರು ಅಮಾಯಕ ಕಾರ್ಮಿಕರನ್ನು ಮನಬಂದಂತೆ ಕಟ್ಟಿಹಾಕಿ ಥಳಿಸಲಾಗಿದೆ. ಭಟ್ಟಿ ಮಾಲೀಕ ಖೇಮು ರಾಠೋಡ ಹಾಗೂ ಆತನ ಬೆಂಬಲಿಗರಿಂದ ಈ ಕೃತ್ಯ ಎಸಗಲಾಗಿದೆ. ಕೂಡಲೇ ಸರ್ಕಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ ಕಾರ್ಮಿಕರಿಗೆ ಭದ್ರತೆ ಒದಗಿಸಬೇಕು ಎಂದು ಸಮಿತಿಯ ಮುಖಂಡರು ಒತ್ತಾಯಿಸಿದರು.

ಸದಾಶಿವ ಮಾದರ, ಸದಾಶಿವ ಬಬಲಾದಿ, ಉಮೇಶ ಮಾದರ ಎಂಬ ಮೂವರು ಕಾರ್ಮಿಕರು ಸಂಕ್ರಾಂತಿ ಹಬ್ಬಕ್ಕೆ ಊರಿಗೆ ಹೋಗಿ ವಾಪಸ್ ಬರುವುದು ವಿಳಂಬವಾದ ಹಿನ್ನಲೆ ಮಾಲೀಕ ಕೋಪಗೊಂಡು ಕಾರ್ಮಿಕರ ಕಾಲುಗಳನ್ನು ಕಟ್ಟಿಹಾಕಿ ಪೈಪ್‌ನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ ವಿಡಿಯೋ ನೋಡಿ ಇಡೀ ರಾಜ್ಯವೇ ಬೆಚ್ಚಿ ಬಿದ್ದರೂ ಜಿಲ್ಲೆಯ ಸಂಸದ‌ ರಮೇಶ್ ಜಿಗಜಿಣಿಗಿ ‌ಪ್ರಕರಣ ಕುರಿತು ಹೇಳಿಕೆ ನೀಡದಿರುವುದು ಖಂಡನೀಯ. ಬಿಜಾಪುರ ಜಿಲ್ಲೆ ಉಸ್ತುವಾರಿ ಸಚಿವ ಎಮ್ ಬಿ ಪಾಟೀಲ್ ಈ ಘಟನೆ ಬಗ್ಗೆ ಕ್ರಮ ವಹಿಸಬೇಕು ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 78 ವರ್ಷ ಗತಿಸಿದರೂ ಇನ್ನುವರೆಗೆ ಶೋಷಿತರ ಮೇಲೆ ದೌರ್ಜನ್ಯ ದಬ್ಬಾಳಿಕೆ ನಡೆಯುತ್ತಾಲೇ ಇವೆ. ತಕ್ಷಣ ಕಾರ್ಮಿಕರನ್ನು ಭೇಟಿ ಮಾಡಿ ಆರೋಪಿಗಳಿಗೆ ಕಾನೂನು ಶಿಕ್ಷೆ ವಿಧಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಆದಾಗ ಆ ವ್ಯಾಪ್ತಿಗೆ ಬರುವ ಸಿ ಪಿ ಐ ಮಲ್ಲಯ್ಯ ಕ್ರಮ ಕೈಗೊಳ್ಳದೆ ಬೇಜವಾಬ್ದಾರಿ ತೋರಿದ್ದು ಅವರನ್ನು ತಕ್ಷಣ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಟೈರ್ ಸ್ಪೋಟದಿಂದ ಕ್ರೂಸರ್ ಪಲ್ಟಿ : ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರ ಸಾವು

ಈ ವೇಳೆ ಎಂಆರ್‌ಎಚ್‌ಎಸ್ ಜಿಲ್ಲಾಧ್ಯಕ್ಷ ಹನುಮಂತ ಮನ್ನಾಪುರಿ, ಲಿಂಗಪ್ಪ ಗೌಡೂರು, ಬಸವರಾಜ್ ಜಯಂ ವೆಂಕಟೇಶ್ ಜಾಲಹಳ್ಳಿ, ಕ್ರಾಂತಿ ಕುಮಾರ್, ಅಬ್ರಹಾಂ ಕಮಲ ದಿನ್ನಿ, ರವಿಚಂದ್ರ ಗುಂಟ್ರಾಳ, ಲಕ್ಷ್ಮಣ್ ಮಸರಕಲ್, ಕರಿಯಪ್ಪ ಮಸರಕಲ್, ಮಹದೇವ್ ಗೋರಂಪೇಟೆ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...