ರಾಯಚೂರು | ಯುದ್ಧ ಪರಿಸ್ಥಿತಿಯಲ್ಲಿ ರಕ್ಷಣೆ ಸಿದ್ದತಾ ಅಣಕು ಕಾರ್ಯಾಚರಣೆ

Date:

ಯುದ್ದ ಸನ್ನಿವೇಶ ಹಾಗೂ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕ್ರಮ ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಶುಕ್ರವಾರ ಸಂಜೆ ಮಾಕ್ ಡ್ರಿಲ್ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.

ನಗರದ ಶಕ್ತಿನಗರ ವಿದ್ಯುತ್ ಶಾಖೋತ್ಪನ್ನ‌ ಕೇಂದ್ರ( ಆರ್ ಟಿಪಿಎಸ್ ) ಹೆಲಿಪ್ಯಾಡ್ ಆವರಣದಲ್ಲಿ ಕೇಂದ್ರ‌ ಗೃಹ ಇಲಾಖೆಯ ನಿರ್ದೇಶನದ ಮೇರೆಗೆ ಕೇಂದ್ರ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಆರೋಗ್ಯ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ ಸೇರಿ 10ಕ್ಕೂ ಅಧಿಕ ಇಲಾಖೆಯ ಸಹಯೋಗದಲ್ಲಿ ಮಾಕ್ ಡ್ರಿಲ್ ನೆರವೇರಿತು.

ನೆರೆಹೊರೆಯ ರಾಷ್ಟ್ರಗಳು ಯುದ್ಧ ಘೋಷಿಸಿ ಬಾಂಬ್ ದಾಳಿ ನಡೆದಾಗ ಆರಂಭದಲ್ಲಿ ಜಿಲ್ಲಾಡಳಿತದ ಮೂಲಕ ಸಂದೇಶ ರವಾನೆಯಾಗುತ್ತದೆ. ಬಳಿಕ ದೇಶದ ಕೆಲ ಭಾಗದಲ್ಲಿ ಬಾಂಬ್ ದಾಳಿ ಆಗಿದೆ ಎಂದು ಪಟಾಕಿ ಸಿಡಿಸಿ ಯುದ್ಧದ ಸನ್ನಿವೇಶ ಸೃಷ್ಟಿ ಮಾಡಲಾಯಿತು. ತಕ್ಷಣ ಯಾವ ರೀತಿ ನಮ್ಮನ್ನು ನಾವು ರಕ್ಷಿಸಿಕೊಳ್ಳಬೇಕು ಎಂಬ ಕಾರ್ಯಚರಣೆ ಮೂಲಕ ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಶಕ್ತಿನಗರ ಶಾಖೋತ್ಪನ್ನ ಘಟಕದಲ್ಲಿ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು

ಬಾಂಬ್ ದಾಳಿಯಾದ ಬಗ್ಗೆ ಪೊಲೀಸ್ ಇಲಾಖೆ ಇಲಾಖೆಯಿಂದ ನಾಗರಿಕರಿಗೆ ಸೂಚನೆ ನೀಡಿ ಭಯ ಪಡದೆ ಧೈರ್ಯವಾಗಿ ಪರಿಸ್ಥಿತಿ ಎದುರಿಸಿ, ಸೇನೆ ನಿಮ್ಮ ಜೊತೆಗಿದೆ ಎಂದು ಸಂದೇಶ ನೀಡಲಾಯಿತು.

1000118644

ಯುದ್ಧ ವೇಳೆ ಬಾಂಬ್ ದಾಳಿಯಾಗಿ ಅನೇಕರು ಗಾಯಗೊಂಡು, ಕೆಲವರು ಪ್ರಾಣ ಕಳೆದುಕೊಂಡ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವುದು ಹಾಗೂ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡು ಅಗ್ನಿಶಾಮಕ ದಳ ಬೆಂಕಿ ನಂದಿ‌ಸಲು ನಾಗರಿಕರನ್ನು ರಕ್ಷಣೆ ಮಾಡುವುದು, ವೈದ್ಯರ ತಂಡ ಸ್ಥಳಕ್ಕೆ ಆಗಮಿಸಿ ತುರ್ತು ಚಿಕಿತ್ಸೆ ನೀಡುವುದು, ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ರವಾನಿಸುವುದು, ನಾಗರಿಕರ ರಕ್ಷಣಾ ಪಡೆಗಳು ಹೇಗೆ ಯುದ್ಧದ ಸಂದರ್ಭದಲ್ಲಿ ಕಾಪಾಡುತ್ತಾರೆ ಎಂದು ಸಾರ್ವಜನಿಕರಿಗೆ ಮನದಟ್ಟಾಗುವಂತೆ ಅಣಕು ಪ್ರದರ್ಶನ ಮಾಡಲಾಯಿತು.

ಅಣಕು ಪ್ರದರ್ಶನ ಬಳಿಕ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಮಾತನಾಡಿ, ‘ಪ್ರತಿಯೊಬ್ಬ ನಾಗರಿಕ ಸೈನಿಕರಂತೆ ಕೆಲಸ ಮಾಡಬೇಕು. ಸಾರ್ವಜನಿಕರು ಭಯಪಡಬಾರದು. ತುರ್ತು ಪರಿಸ್ಥಿತಿ ವೇಳೆ ವಿವಿಧ ಇಲಾಖೆಗಳಿಂದ ಯಾವ ರೀತಿಯಲ್ಲಿ ಕಾರ್ಯನಿರ್ವಹಣೆ ಮಾಡಬೇಕು. ಭದ್ರತಾ ಪಡೆಯ ತಂಡಗಳು ಹೇಗೆ ಕಾರ್ಯನಿರ್ವಹಣೆ ಮಾಡಬೇಕು ಮತ್ತು ಎಂತಹದ್ದೇ ಪರಿಸ್ಥಿತಿ ಎದುರಾದರು ಸಹ ಎಲ್ಲರೂ ಸೇರಿ ಅದನ್ನು ಹೇಗೆ ನಿಭಾಯಿಸಬೇಕು ಎಂಬುದರ ಪೂರ್ವ ತಯಾರಿ ಇದಾಗಿದೆ’ ಎಂದು ತಿಳಿಸಿದರು.

1000118641

‘ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಅಣುಕು ಪ್ರದರ್ಶನ ಮಾಡಬೇಕು. ಸಾರ್ವಜನಿಕರಲ್ಲಿ ಯಾವುದೇ ರೀತಿಯ ಗೊಂದಲ,‌‌ ಭಯ ಇರಬಾರದು. ಜಿಲ್ಲಾಡಳಿತವು ಈಗಾಗಲೇ ಎಲ್ಲಾ ರೀತಿಯ ಸಿದ್ದತೆಯನ್ನು ಮಾಡಿಕೊಂಡಿದೆ. ದೇವಸಗೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಐದಾರು ಹಳ್ಳಿಗಳಲ್ಲಿ ತರಬೇತಿಯನ್ನು ನೀಡಲಾಗುತ್ತದೆ’ ಎಂದರು.

ಮುಂದಿನ ದಿನಗಳಲ್ಲಿ ಜಿಲ್ಲೆಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತರಬೇತಿ ನೀಡಲಾಗುವುದು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯಿಂದ ಕಂಟ್ರೋಲ್ ರೂಮ್ ಆರಂಭಿಸಲಾಗಿದ್ದು, ಸಾರ್ವಜನಿಕರು ಸದುಪಯೋಗ ಪಡೆಯಬೇಕು ಎಂದರು.

1000118653

ಜಿಲ್ಲಾಧಿಕಾರಿಗಳಾದ ನಿತೀಶ್ ಕೆ, ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ತುಕಾರಾಂ ಪಾಂಡ್ವೆ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಪುಟ್ಟಮಾದಯ್ಯ, ಅಪರ ಜಿಲ್ಲಾಧಿಕಾರಿ ಶಿವಾನಂದ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಹರೀಶ್, ರಾಯಚೂರು ಸಹಾಯಕ ಆಯುಕ್ತರಾದ ಗಜಾನನ ಬಾಳೆ,ತಹಶೀಲ್ದಾರ್ ಸುರೇಶ ವರ್ಮ ಸೇರಿದಂತೆ ಇತರರು ಭಾಗಿಯಾಗಿ ಅಣುಕು ಪ್ರದರ್ಶನ ವೀಕ್ಷಣೆ ಮಾಡಿದರು.ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಎನ್‌ಸಿಸಿ ವಿದ್ಯಾರ್ಥಿಗಳು, ಸಾರ್ವಜನಿಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...