ರಾಯಚೂರು | ಮತ್ತೊಬ್ಬ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿ ಬಂಧನ

Date:

ಚಾಕಲೇಟ್ ಕೊಡುವೆ ಎಂದು ಪುಸಲಾಯಿಸಿ ಬುದ್ದಿಮಾಂದ್ಯ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಪಟ್ಟಣದಲ್ಲಿ ನಡೆದಿದೆ.

ಅತ್ಯಾಚಾರಿ ಆರೋಪಿ ಚಂದ್ರು ಎಂಬಾತನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಬಾಲಕಿಯು ಪಟ್ಟಣದ ಬಸವ ಸಮಿತಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದಳು. ಮಧ್ಯಾಹ್ನದ ಊಟ ಸೇವಿಸಿದ ಬಳಿಕ ಚಾಕೊಲೇಟ್ ತೆಗೆದುಕೊಂಡು ಬರಲು ಬಾಲಕಿ ಅಂಗಡಿಗೆ ಹೋದಾಗ ಆರೋಪಿಯು ನಾನು ಚಾಕೊಲೇಟ್ ಕೊಡುವೆನೆಂದು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಲು ಯತ್ನಿಸಿದ್ದಾನೆ.

ಆರೋಪಿಯು ಬಾಲಕಿಯನ್ನು ಕರೆದುಕೊಂಡು ಹೋಗಿ ಮಗುವಿನ ಜತೆ ಅಶ್ಲೀಲವಾಗಿ ಮಾತನಾಡುತ್ತಿರುವುದನ್ನು ಗಮನಿಸಿ ಪಕ್ಕದ ಮನೆಯವರು ಸಂಶಯಪಟ್ಟು ಹೊರಗೆ ಹೋಗಿ ನೋಡಿದ್ದಾರೆ. ಅತ್ಯಾಚಾರಕ್ಕೆ ಯತ್ನಿಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕೂಗಾಡಿದ ಬಳಿಕ ಜನ ಸೇರಿದ್ದು, ಮಾಹಿತಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಮಗುವನ್ನು ರಕ್ಷಿಸಿ, ಆರೋಪಿಯನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾಸನ | ಜೀತ ಕಾರ್ಮಿಕ ಪ‌ದ್ದತಿ ಆಚರಣೆ ಶಿಕ್ಷಾರ್ಹ ಅಪರಾಧ: ಪಿಡಿಒ ಆರ್‌ ಪ್ರಭಾ

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದ ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ ನಡೆದ ಘಟನೆ ಮಾಸುವ ಮುನ್ನವೇ ಇನ್ನೊಂದು ಪೈಶಾಚಿಕ ಘಟನೆ ನಡೆದಿದೆ. ಆದರೂ ಪೊಲೀಸರು ಕಠಿಣ ಕ್ರಮ ಜರುಗಿಸುತ್ತಿಲ್ಲ. ಇಂತಹ ಆರೋಪಿಗಳಿಗೆ ಗಲ್ಲುಶಿಕ್ಷೆ ನೀಡಬೇಕು. ಇಲ್ಲದಿದ್ದರೆ ಇನ್ನೆಷ್ಟು ಮಕ್ಕಳ ಜೀವ ಹೋಗುವುದೋ ಕಳೆ ಯಬೇಕು ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...