ರಾಯಚೂರು | ವಿದ್ಯಾರ್ಥಿನಿಯರ ಶೌಚಾಲಯದ ಹಿಂಭಾಗ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಪ್ರಯತ್ನ; ಪೊಲೀಸರಿಗೆ ದೂರು

Date:

ಹಿಂದುಳಿದ ವರ್ಗದ ಮೊರಾರ್ಜಿ ದೇಸಾಯಿ ವಸತಿ ನಿಲಯದ ವಿದ್ಯಾರ್ಥಿನಿಯರ ಶೌಚಾಲಯದ ಹಿಂಭಾಗದಲ್ಲಿ ಮೂಬೈಲ್ ಇಟ್ಟು ವಿದ್ಯಾರ್ಥಿನಿಯರು ಶೌಚ ಮಾಡುವ ಚಿತ್ರೀಕರಣ ಸೆರೆ ಹಿಡಿಯಲು ಯತ್ನಿಸಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ.

ಮಾನ್ವಿ ತಾಲೂಕಿನ ರಾಜಲಬಂಡಾ ಮೊರಾರ್ಜಿ ದೇಸಾಯಿ ಹಿಂದುಳಿದ ವರ್ಗ ವಸತಿನಿಲಯದ ಶೌಚಾಲಯದ ಹಿಂಭಾಗದಲ್ಲಿ ಚಿತ್ರೀಕರಣ ಮಾಡಲು ಡಿಸೆಂಬರ್‌ 19 ರಂದು ರಾತ್ರಿ 10ಕ್ಕೆ ಮೊಬೈಲ್‌ನಲ್ಲಿ ಸೆರೆ ಹಿಡಿಯಲು ಕಿಡಿಗೇಡಿಗಳು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ಘಟನೆಯ ದಿನ ಶುಕ್ರವಾರ ರಾತ್ರಿ ವಾರ್ಡನ್‌ ಶಂಕ್ರಪ್ಪ ಅವರು ದೂರವಾಣಿ ಮೂಲಕ ಸಂಪರ್ಕಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ 112 ವಾಹನ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದು, ಇದು ಹೆಣ್ಣುಮಕ್ಕಳ ವಸತಿನಿಲಯ. ಈ ಕಡೆ ಯಾರೂ ಬರುವಂತಿಲ್ಲ ಎಂದು ಸುತ್ತಮುತ್ತ ಇರುವಂತಹ ಜನರಿಗೆ, ಯುವಕರಿಗೆ ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಟ್ಟಣದ ಕರಡಿಗುಡ್ಡ ರಸ್ತೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಬಾಲಕಿಯರು ಹಾಗೂ ಬಾಲಕರು ಇರುವಂತಹ ಹಾಸ್ಟೆಲ್ ಎಂದಿನಂತೆ ಬಾಲಕಿಯರು ರಾತ್ರಿ ತಮ್ಮ ದಿನನಿತ್ಯದ ಕಾರ್ಯ ಮುಗಿಸಲು ಶೌಚಾಲಯಕ್ಕೆ ಹೋಗಿರುವಾಗ ಶೌಚಾಲಯದ ಕಿಟಕಿಯ ಭಾಗದಲ್ಲಿ ಮೊಬೈಲ್ ಇಟ್ಟಿರುವುದನ್ನು ಗಮನಿಸಿದ ವಿದ್ಯಾರ್ಥಿನಿ ತಕ್ಷಣ ತರಗತಿ ವಿದ್ಯಾರ್ಥಿನಿಯರಿಗೆ ಮಾಹಿತಿ ತಿಳಿಸಿದರು. ವಿಷಯ ತಿಳಿಯುತ್ತಿದ್ದಂತೆ ವಸತಿ ಬಾಲಕರು, ವಾರ್ಡನ್ ಹಾಗೂ ಪ್ರಾಂಶುಪಾಲರು ಹಾಸ್ಟೆಲ್ ಕಾಂಪೌಂಡ್ ಹೊರಗೆ ತೆರಳಿ ಮೂಬೈಲ್ ಇಟ್ಟಿದ್ದ ಯುವಕನನ್ನು ಕಂಡುಹಿಡಿಯುವ ಪ್ರಯತ್ನ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಕೇಂದ್ರ ಗೃಹಸಚಿವ ಅಮಿತ್‌ ಶಾ ವಜಾಕ್ಕೆ ದಸಂಸ ಆಗ್ರಹ

ಮರುದಿನ ಶನಿವಾರ ರಾತ್ರಿ ಮೊರಾರ್ಜಿ ದೇಸಾಯಿ ವಸತಿ ನಿಲಯಕ್ಕೆ ಪಿ ಐ ವೀರಭದ್ರಯ್ಯ ಹಿರೇಮಠ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ವಾರ್ಡನ್‌ ಶಂಕ್ರಪ್ಪ ನೀಡಿದ ದೂರಿನ ಆಧಾರದ ಮೇಲೆ ಅನುಮಾನಾಸ್ಪದ ವ್ಯಕ್ತಿ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...