ರಾಯಚೂರು | ಸ್ವಾತಂತ್ರ್ಯ ದಿನದಂದು ‘ಬರೀ ಹೊಟ್ಟೆ ಸತ್ಯಾಗ್ರಹ’

Date:

ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್ ದೊರೆಸ್ವಾಮಿ ಅವರ ನೇತೃತ್ವದಲ್ಲಿ ಭೂಮಿ ಮತ್ತು ವಸತಿ ಹಕ್ಕಿಗಾಗಿ ನಡೆದ ಹೋರಾಟಕ್ಕೆ ಮಣಿಸಿದ್ದ ಅಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿತ್ತು. ನಂತರ ಬಂದ ಸರ್ಕಾರಗಳ ನಿರ್ಲಕ್ಷ್ಯದಿಂದ ಸಮಿತಿಯೂ ಮೂಲೆ ಗುಂಪಾಯಿತು. ಈಗ ಸಮಿತಿ ಮತ್ತೆ ಜೀವ ತುಂಬಬೇಕು. ಅದಕ್ಕಾಗಿ ಸರ್ಕಾರವನ್ನು ಒತ್ತಾಯಿಸಿ ಆಗಸ್ಟ್‌ 14-15 ನಡುವಿನ ರಾತ್ರಿ ಭೂಮಿ ಮತ್ತು ವಸತಿ ಹಕ್ಕು ಹೋರಾಟ ಸಮಿತಿಯು ‘ಬರೀ ಹೊಟ್ಟೆ ಸತ್ಯಾಗ್ರಹ’ ಆಯೋಜಿಸಿದೆ ಎಂದು ಹೋರಾಟ ಸಮಿತಿ ಸಂಚಾಲಕ ಮಾರೆಪ್ಪ ಹರವಿ ಹೇಳಿದರು.

ರಾಯಚೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಈ ಹಿಂದೆ ಇದ್ದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ದೊರೆಸ್ವಾಮಿ ಅವರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಕೆಗಾಗಿ ಮತ್ತೊಮ್ಮೆ ಹೋರಾಟಗಾರರನ್ನೊಳಗೊಂಡ ಉನ್ನತ ಮಟ್ಟದ ಸಮಿತಿ ರಚಿಸಬೇಕು” ಎಂದರು.

“ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಂದು ಫಾರಂ 57 ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದರು. ಆದರೆ, ನಂತರ ಅದು ನಿಂತು ಹೋಯಿತು. ಸುಮಾರು ವರ್ಷಗಳಿಂದ ಭೂಮಿ, ವಸತಿ ಇಲ್ಲದವರು ಹೋರಾಟ ನಡೆಯುತ್ತಿದ್ದರೂ ಸರ್ಕಾರಗಳು ನಿರ್ಲಕ್ಷಿಸುತ್ತಾ ಬಂದಿವೆ. ಇಲ್ಲಿಯವರಗೆ ಕಾದು ಸಾಕಾಗಿದೆ. ಈಗ ‘ಮಾಡು ಇಲ್ಲವೇ ಮಡಿ’ ಹೋರಾಟಕ್ಕೆ ಮುಂದಾಗಿದ್ದೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೋರಾಟ ಸಮಿತಿಯ ಮುಖಂಡ ಎಂ.ಆರ್ ಭೇರಿ ಮಾತನಾಡಿ, “ಕಳೆದ 45 ವರ್ಷಗಳಿಂದ ಸರ್ಕಾರಿ ಭೂಮಿ ಉಳುಮೆ ಮಾಡುತ್ತಿರುವ ರೈತರಿಗೆ ಭೂಮಿ ಹಕ್ಕು ನೀಡದೇ ಸರ್ಕಾರಗಳು ಕಡೆಗಣಿಸುತ್ತಲೇ ಬಂದಿವೆ. ಗ್ರಾಮೀಣ ಪ್ರದೇಶಗಳಲ್ಲಿ ಅರಣ್ಯ ಹಾಗೂ ಸರ್ಕಾರ ಭೂಮಿ ಉಳುಮೆ ಮಾಡುವರರಿಗೆ ಭೂಮಿ ಹಕ್ಕು ನೀಡಬೇಕು. ನಗರ ಪ್ರದೇಶದಲ್ಲಿ 94 ಸಿಸಿ ಅರ್ಜಿ ಹಾಕಿದವರಿಗೆ ನಿವೇಶನ ನೀಡುವ ಸೇರಿ ಹಸಿದವರಿಗೆ ಅನ್ನಭಾಗ್ಯ ನೀಡಿದಂತೆ, ಭೂಮಿ ಇಲ್ಲದವರಿಗೆ ಭೂಮಿ ಗ್ಯಾರಂಟಿ ನೀಡಬೇಕು” ಎಂದರು.

ಸುದ್ದಿಗೋಷ್ಠಿಯಲ್ಲಿ ಹಿರಿಯ ಹೋರಾಟಗಾರ ಭೀಮಣ್ಣ ನಗನೂರು, ಖಾಜಾ ಅಸ್ಲಂ ಪಾಷಾ, ಆಂಜಿನೇಯ್ಯ ಕುರುಬದೊಡ್ಡಿ, ಹನುಮಂತಪ್ಪ, ನರಸಿಂಹಲು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...