ರಾಯಚೂರು | ಕಾಂತರಾಜ ವರದಿ ಜಾರಿಗೆ ಆಗ್ರಹಿಸಿ ಡಿ.18ರಂದು ಬೆಳಗಾವಿಯಲ್ಲಿ ಪ್ರತಿಭಟನೆ

Date:

ಕಾಂತರಾಜ ವರದಿ ಜಾರಿಗೊಳಿಸುವುದು ಸೇರಿದಂತೆ ಹಿಂದುಳಿದ ಜಾತಿಗಳ ನಾನಾ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಡಿಸೆಂಬರ್ 18ರಂದು ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಯಚೂರು ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ ಶಾಂತಪ್ಪ ತಿಳಿಸಿದರು.

ರಾಯಚೂರು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, “ಹಿಂದುಳಿದ ಜಾತಿಗಳಿಗೆ ಸಮುದಾಯಭವನ ವಿದ್ಯಾರ್ಥಿನಿಲಯ ಕಟ್ಟಿಕೊಳ್ಳಲು ಅನುದಾನ ಬಿಡುಗಡೆ ಮಾಡಿ ಹಿಂದುಳಿದ ಜಾತಿಗಳಿಗೆ ಸೇರಿದ ಅಭಿವೃದ್ಧಿ ನಿಗಮಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು. ಕಾಂತರಾಜ ಆಯೋಗದ ವರದಿಯನ್ನು ಸ್ವೀಕರಿಸಿ ಆರು ತಿಂಗಳಾದರೂ, ವರದಿ ಬಹಿರಂಗಗೊಳಿಸಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕಾಂತರಾಜ ವರದಿ ಸ್ವೀಕರಿಸಿ, ಶಿಫಾರಸುಗಳನ್ನು ಜಾರಿಗೊಳಿಸುವುದಾಗಿ ಹೇಳಿದ್ದಿರಿ. ಅಹಿಂದ ಮತಗಳು ಕಾಂಗ್ರೆಸ್ ಪಕ್ಷಕ್ಕೆ ಬಂದಿರುವುದರಿಂದ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿ ಸರ್ಕಾರ ರಚಿಸಲಾಯಿತು ಹಾಗೂ ಮತ್ತೆ ಉಪಚುನಾವಣೆಯಲ್ಲಿಯೂ ಅಭೂತಪೂರ್ವ ಗೆಲವು ಸಾಧಿಸಲಾಗಿದೆ. ಹಲವಾರು ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಅಹಿಂದ ಮತಗಳೇ ಮುಖ್ಯಕಾರಣವೆಂದು ಚುನಾವಣೆ ತಜ್ಞರು ವಿಶ್ಲೇಸಿದ್ದಾರೆ. ಸರ್ಕಾರ ರಚಿಸಿ ಸುಮಾರು 2 ವರ್ಷಗಳು ಕಳೆದಿವೆ. ಕೊಟ್ಟ ಭರವಸೆಯಂತೆ ಕಾಂತರಾಜ ವರದಿ ಶಿಫಾರಸುಗಳು ಜಾರಿಗೆ ಬಂದಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣೆ ಸಂದರ್ಭಗಳಲ್ಲಿ ಕೊಟ್ಟ ಭರವಸೆಗಳಿಗೆ ಚ್ಯುತಿ ಬರುತ್ತಿದೆ. ಹಿಂದಿನ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಸರ್ಕಾರಗಳಲ್ಲಿ ಹಿಂದುಳಿದ ಜಾತಿಗಳಿಗೆ ಸಮುದಾಯಭವನ, ವಿದ್ಯಾರ್ಥಿನಿಲಯ ಕಟ್ಟಿಕೊಳ್ಳಲು ಅನುದಾನ ನೀಡಲಾಗುತ್ತಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಬಂದು ಸುಮಾರು 2 ವರ್ಷಗಳು ಕಳೆದರೂ ಹಿಂದುಳಿದ ಜಾತಿಗಳ ಸಂಘ ಸಂಸ್ಥೆಗಳಿಗೆ ಅನುದಾನ ಮಂಜೂರು ಮಾಡಿಲ್ಲ. ಹಿಂದುಳಿದ ಜಾತಿಗಳಿಗೆ ಸೇರಿದ ಅಭಿವೃದ್ಧಿ ನಿಗಮಗಳಿಗೂ ನಿರೀಕ್ಷೆಯಂತೆ ಅನುದಾನ ಬಿಡುಗಡೆ ಮಾಡಿಲ್ಲ. ಬಿಜೆಪಿ ಸರ್ಕಾರದಿಂದ ಹಿಂದುಳಿದ ಜಾತಿಗಳಿಗೆ ಸಾಮಾಜಿಕ ನ್ಯಾಯ ಸಿಗುವುದಿಲ್ಲವೆಂದು ಅಹಿಂದ ಜನ ಕಾಂಗ್ರೆಸ್ ಪ್ರಕ್ಷವನ್ನು ಬೆಂಬಲಿಸಿದ್ದಾರೆ. ಆದರೂ ಕಾಂಗ್ರೆಸ್‌ ತಾರತಮ್ಯ ಧೋರಣೆ ತೋರುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬೀದಿನಾಯಿಗಳ ದಾಳಿಗೆ ಯುವತಿ ಬಲಿ; ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡುವಂತೆ ಪ್ರತಿಭಟನೆ

“ಕಾಂಗ್ರೆಸ್ ಕೊಟ್ಟ ಮಾತಿನಂತೆ ಕಾಂತರಾಜ ವರದಿ ಬಹಿರಂಗಗೊಳಿಸಿ, ಆಯೋಗದ ಶಿಫಾರಸುಗಳನ್ನು ಜಾರಿಗೆ ತರಬೇಕು. ಹಿಂದುಳಿದ ಜಾತಿಗಳಿಗೆ, ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳ ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ಗೆ ಹಿಂದುಳಿದ ಜಾತಿಗಳ ಬೆಂಬಲ ತಪ್ಪುತ್ತದೆ” ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಕೆ ಹನುಮಂತಪ್ಪ ಯಾದವ್, ವಿಜಯ ಭಾಸ್ಕರ್ ಇಟಗಿ, ಜಿ ಸುರೇಶ್, ಜಂಬಣ್ಣ ಯಾಕ್ಲಾಸಪುರ, ಉದಯ, ಈರಪ್ಪಗೌಡ, ಅಂಜಿನೇಯ ಯಾದವ್, ಸುರೇಖಾ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...