ರಾಯಚೂರು | ಸಂವಿಧಾನ ವಿರೋಧಿ ಹೇಳಿಕೆ; ಯತ್ನಾಳ್‌, ಸ್ವಾಮೀಜಿಗಳ ವಿರುದ್ಧ ಕ್ರಮಕ್ಕೆ ಭೀಮ್‌ ಆರ್ಮಿ ಆಗ್ರಹ

Date:

ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮಿ ಮತ್ತು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಮತ್ತು ವಿಶ್ವಗುರು ಬಸವಣ್ಣನವರ ವಿರೋಧಿಸಿ ಹೇಳಿಕೆ ನೀಡಿದ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಭೀಮ್ ಆರ್ಮಿ ಆಗ್ರಹಿಸಿದೆ.

ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದ ಭೀಮ್ ಆರ್ಮಿ ಘಟಕದಿಂದ ತಹಶೀಲ್ದಾರ್ ಮುಖಾಂತರ ಗೃಹ ಸಚಿವ‌ ಜಿ ಪರಮೇಶ್ವರ್‌ ಅವರಿಗೆ ಹಕ್ಕೊತ್ತಾಯ ಸಲ್ಲಿಸಿದರು.

ಮನವಿ ಸಲ್ಲಿಸಿದ ಸಂಘಟನಾಕಾರರು, “ಪೇಜಾವರ ಮಠದ ಸ್ವಾಮೀಜಿ ʼತಮ್ಮನ್ನು ಗೌರವಿಸುವ ಸಂವಿಧಾನ ಬೇಕುʼ ಎಂದು ಹೇಳುವ ಮೂಲಕ ಸಂವಿಧಾನ ವಿರೋಧಿ ಹೇಳಿಕೆಯನ್ನು ನೀಡಿದ್ದಾರೆ. ಚಂದ್ರಶೇಖರ ಸ್ವಾಮೀಜಿ ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ‘ರೈತರ ಜಮೀನು ಉಳಿಸಲು ಎಲ್ಲರೂ ಒಂದಾಗಿ ಹೋರಾಟ ನಡೆಸುವ ತುರ್ತು ಸಂದರ್ಭ ಎದುರಾಗಿದೆ. ಮುಸ್ಲಿಂ ಸಮುದಾಯಕ್ಕೆ ಮತದಾನದ ಹಕ್ಕು ನಿರಾಕರಿಸುವ ಕಾನೂನು ತರಬೇಕೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ವಿಜಯಪುರದ ಶಾಸಕ ಬಸನಗೌಡ ಪಾಟಿಲ್ ಯತ್ನಾಳ್ ವಿಶ್ವಗುರು ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ ಹೇಳಿದ್ದಾರೆ.‌ ಹಾಗಾಗಿ ಸರ್ಕಾರ ಕೂಡಲೇ ಈ ಮೂವರ ಮೇಲೆ ಕಾನೂನು ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮಕ್ಕಳ ಮೇಲೆ ದೌರ್ಜನ್ಯ, ಹಲ್ಲೆ; ಕಾನ್‌ಸ್ಟೆಬಲ್ ವಿರುದ್ಧ ಪ್ರಕರಣ ದಾಖಲು

“ಪದೇಪದೆ ಸಂವಿಧಾನ ವಿರೋಧಿ ಹೇಳಿಕೆಯಿಂದ ದೇಶದ ಸಮಸ್ತ ದಲಿತರು, ಹಿಂದುಳಿದವರು, ಶೋಷಿತರು, ದಮನಿತರು, ಅಲ್ಪಸಂಖ್ಯಾತರು, ಮಹಿಳೆಯರು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದಾರೆ. ಇಂತಹ ಹೇಳಿಕೆಗಳು ಮುಂದುವರೆದಲ್ಲಿ ರಾಜ್ಯಾದ್ಯಂತ ತೀವ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಎಂಆರ್‌ಎಚ್‌ಎಚ್‌ಎಸ್ ಜಿಲ್ಲಾಧ್ಯಕ್ಷ ಹನುಮಂತ ಮನ್ನಾಪೂರಿ, ಭೀಮ್‌ ಆರ್ಮಿ ಗೌರವಾಧ್ಯಕ್ಷ ಬಸವರಾಜ ಎಮ್ ಪಾಟೀಲ, ಗುಂಡಪ್ಪ ನಾಯಕ, ವಿಶ್ವನಾಥ ಬಲ್ಲಿದೇವ, ಮೌನೇಶ್ ಗಾಣದಾಳ, ಶಬ್ಬೀರ್ ಭುವಾಜಿ, ಸದ್ದಾಂ ಹುಸೇನ್, ಆಸೀಫ್ ಖುರೇಷಿ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...