ರಾಯಚೂರು | ಬಿಹಾರದ ಬೋಧ್ ಗಯಾವನ್ನು ಸಂಪೂರ್ಣ ಬೌದ್ಧರಿಗೆ ನೀಡಬೇಕು: ಬೌದ್ಧ ಮಹಾಸಭಾ ಸಂಘ

Date:

ಸಂವಿಧಾನದ ದಿನಾಚರಣೆ ಪ್ರಯುಕ್ತ ಬೌದ್ಧರ ಧಾರ್ಮಿಕ ಹಕ್ಕುಗಳಿಗಾಗಿ ಬಿಹಾರದ ಬೋಧ್ ಗಯಾದ ಮಹಾಭೋದಿ, ಮಹಾವಿಹಾರದ ಆಡಳಿತವನ್ನು ಸಂಪೂರ್ಣವಾಗಿ ಬೌದ್ಧರಿಗೆ ನೀಡಬೇಕು ಎಂದು ಒತ್ತಾಯಿಸಿ ರಾಯಚೂರು ಬೌದ್ಧ ಮಹಾಸಭಾ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

“ಬಿಹಾರದ ಬುದ್ದಗಯಾದ ಮಹಾಭೋದಿ, ಮಹಾವಿಹಾರವನ್ನು ಸಂಪೂರ್ಣ ಬೌದ್ಧರಿಗೆ ನೀಡಬೇಕು ಹಾಗೂ ಬಿಟಿ ಕಾಯ್ದೆ 1949ನ್ನು ರದ್ದುಗೊಳಿಸಬೇಕು” ಎಂದು ಆಗ್ರಹಿಸಿದರು.

ಎಲ್ಲ ಧರ್ಮೀಯರಿಗೆ ಧಾರ್ಮಿಕ ಕೇಂದ್ರಗಳ ಆಡಳಿತವನ್ನು ನಿರ್ವಹಿಸು ಸಂವಿಧಾನದಲ್ಲಿ ಅವಕಾಶ ನೀಡಲಾಗಿದೆ. ಗುರುದ್ವಾರವನ್ನು ಸಿಖ್‌ ಧರ್ಮೀಯರು, ದರ್ಗಾಗಳನ್ನು ಮುಸ್ಲಿಮರು ಹಾಗೂ ಓರಿಸ್ಸಾದ ಜಗನ್ನಾಥ ಮಂದಿರ, ಕೇರಳದ ಗುರುವಾಯುರ್ ದೇವಸ್ಥಾನ, ಮಧ್ಯಪ್ರದೇಶದ ಮಹಾಕಾಲೇಶ್ವರ, ಉತ್ತರ ಪ್ರದೇಶದ ಕಾಶಿ, ಶ್ರೀಶೈಲ, ತಿರುಪತಿ, ಕಾಶ್ಮೀರ ವೈಷ್ಣವಿದೇವಿ ದೇವಾಲಯಗಳನ್ನು ಹಿಂದುಗಳಿಗೆ ಪೂಜೆ ಹಾಗೂ ಆಡಳಿತ ಮಂಡಳಿ ನಿರ್ವಹಣೆ ಮಾಡಲು ಅಧಿಕಾರ ನೀಡಲಾಗಿದೆ. ಆದರೆ ಬೌದ್ದರು ಆರಾಧಿಸುವ ಬುದ್ದಗಯಾವನ್ನು ಬೌದ್ದ ಧರ್ಮಿಯರಿಗೆ ನೀಡುತ್ತಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು ನಗರದ 31ನೇ ವಾರ್ಡ್‌ ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಗೆಲುವು

“ಬುದ್ದಗಯಾ ಹಿಂದುಗಳ ನಿಯಂತ್ರಣದಲ್ಲಿದ್ದು, ಬೌದ್ದ ಧರ್ಮಿಯರಿಗೆ ನೀಡಲು ಅವಕಾಶ ಕೊಡಬೇಕು. ಸಂವಿಧಾನ ದಿನಾಚರಣೆಯನ್ನು ಆಚರಿಸುತ್ತಿರುವಾಗ ಸಂವಿಧಾನ ಬದ್ದವಾದ ಧಾರ್ಮಿಕ ಅವಕಾಶಗಳಿಂದ ಬೌದ್ದರನ್ನು ವಂಚಿಸುವುದನ್ನು ನಿಲ್ಲಿಸಬೇಕು” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ರವೀಂದ್ರನಾಥ ಪಟ್ಟಿ, ಮಹಾಸಭಾ ಅದ್ಯಕ್ಷ ಶಿವರಾಜ ಜಾನೇಕಲ್, ಬಸವರಾಜ, ವಿಶ್ವನಾಥ ಪಟ್ಟಿ, ಮಹೇಶ, ನರಸಿಂಹಲು, ರವಿ ರಾಂಪುರು, ಮಾರೆಪ್ಪ ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...