ರಾಯಚೂರು | ಹುಟ್ಟು ಹಬ್ಬದ ವೇಳೆ ನವಿಲಿನ ಗರಿಯಿಂದ ತಯಾರಿಸಿದ ಹಾರ ಹಾಕಿಕೊಂಡ ಮಾಜಿ ಶಾಸಕ: ದೂರು

Date:

ಮಾಜಿ ಸಚಿವ ಶಿವನಗೌಡ ನಾಯಕ್ ಕೆ. ಅವರು 45 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಾಗ ನವಿಲು ಗರಿಯಿಂದ ತಯಾರಿಸಿದ ಹಾರವನ್ನು ಸಾರ್ವಜನಿಕವಾಗಿ ಧರಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಕಾರಣ ಅವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972ರ ಉಲ್ಲಂಘನೆಯ ಹಿನ್ನೆಲೆಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕನಕಪುರ ತಾಲ್ಲೂಕಿನ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅರಣ್ಯ ಇಲಾಖೆಗೆ ದೂರು‌ ನೀಡಿದ್ದಾರೆ.

ಬೆಂಗಳೂರಿನ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ವನ್ಯಜೀವಿ) ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ದೂರು ನೀಡಿದ ಅವರು, ಶಿವನಗೌಡ ನಾಯಕ್ ಕೆ. ಅವರು ನವಿಲು ಗರಿಯಿಂದ ತಯಾರಿಸಲಾದ ಹಾರವನ್ನು ಧರಿಸಿ, ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಛಾಯಾಚಿತ್ರಗಳ ಮೂಲಕ ಸ್ಪಷ್ಟವಾಗಿ ದೃಢಪಟ್ಟಿದೆ. ಈ ಕೃತ್ಯವು ಭಾರತದ ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972ರ ನಿಯಮಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ.

ನವಿಲು ಭಾರತದ ರಾಷ್ಟ್ರೀಯ ಪಕ್ಷಿ ಆಗಿದ್ದು, ಇದರ ಸಾಂಸ್ಕೃತಿಕ, ಪಾವಿತ್ರ್ಯ ಹಾಗೂ ಜೀವವೈವಿಧ್ಯದಲ್ಲಿ ಮಹತ್ವಪೂರ್ಣ ಸ್ಥಾನವಿದೆ. ನವಿಲು ಮತ್ತು ಇದರ ಎಲ್ಲಾ ಅಂಗಾಂಶಗಳು, ವಿಶೇಷವಾಗಿ ನವಿಲು ಗರಿಗಳು, Indian Wildlife (Protection) Act, 1972ರ ಅನ್ವಯ Schedule-l species , ಪಕ್ಷಿಯನ್ನು ಅಥವಾ ಇದರ ಅಂಗಾಂಶಗಳನ್ನು ಸಂಗ್ರಹಿಸುವುದು, ಉಳಿಸಿಕೊಳ್ಳುವುದು, ಪ್ರದರ್ಶಿಸುವುದು, ವ್ಯಾಪಾರ ಮಾಡುವುದು, ಅಥವಾ ಉಡುಗೊರೆ ರೂಪದಲ್ಲಿ ನೀಡುವುದು ಕಾನೂನಾತ್ಮಕವಾಗಿ ಸಂಪೂರ್ಣ ನಿಷಿದ್ಧವಾಗಿದೆ. ನವಿಲು ಗರಿಯನ್ನು ಯಾವುದೇ ರೀತಿಯ ಅನಧಿಕೃತ ಉಪಯೋಗ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಅನ್ವಯ ಅತ್ಯಂತ ಗಂಭೀರ ಅಧಿಕೃತ ಕ್ರಿಮಿನಲ್ ಅಪರಾಧವಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯಮಟ್ಟದಲ್ಲಿ ಗೌರವಾನ್ವಿತ ಸ್ಥಾನದಲ್ಲಿದ್ದ ಮಾಜಿ ಶಾಸಕರಾದ ಶ್ರೀ ಶಿವನಗೌಡ ನಾಯಕ್ ಕೆ. ಅವರಿಗೆ ನವಿಲು ಗರಿಯಿಂದ ತಯಾರಿಸಲಾದ ಹಾರವನ್ನು ಕಾರ್ಯಕ್ರಮವೊಂದರಲ್ಲಿ ಹಾಕಿದ ದೃಶ್ಯಗಳು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಬಹಳ ವೇಗವಾಗಿ ಹರಡುತ್ತಿದ್ದು, ಸಾರ್ವಜನಿಕ ಮತ್ತು ವನ್ಯಜೀವಿ ಸಂರಕ್ಷಣಾ ಕಾರ್ಯಕರ್ತರ ನಡುವೆ ತೀವ್ರ ಆತಂಕ ಮೂಡಿಸಿರುವಂತಹ ಘಟನೆಯಾಗಿದೆ. ಈ ದೃಶ್ಯಗಳಲ್ಲಿ ನವಿಲು ಗರಿಯನ್ನು ಹಾರವಾಗಿ ವಿನ್ಯಾಸಗೊಳಿಸಿ. ಅದನ್ನು ಮಾಜಿ ಶಾಸಕರಿಗೆ ಗೌರವ ಸೂಚಕವಾಗಿ ಧರಿಸುತ್ತಿರುವುದನ್ನು ಸ್ಪಷ್ಟವಾಗಿ ಕಾಣಬಹುದು.

ಈ ಕೃತ್ಯವು ಕೇವಲ ನೈತಿಕ ದೋಷವಷ್ಟೇ ಅಲ್ಲ, ಬದಲಾಗಿ ನವಿಲು ಎಂಬ ರಾಷ್ಟ್ರಪಕ್ಷಿಯ ಅಂಗವನ್ನು ಸಾರ್ವಜನಿಕವಾಗಿ ಪ್ರದರ್ಶಿಸುವ ಮೂಲಕ ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972′ ರ many ‘Scheduled-l ನಿಯಮ provisions ಅನ್ನು ಉಲ್ಲಂಘಿಸಿರುವ ಗಂಭೀರ ಅಪರಾಧವಾಗಿದೆ. ಇಂತಹ ಕಾರ್ಯಗಳು ಸಾರ್ವಜನಿಕರಲ್ಲಿ ತಪ್ಪು ಸಂದೇಶವನ್ನು ಹರಡುತ್ತದ್ದಲ್ಲದೆ. ಇತರರು ಕೂಡಾ ಇದೇ ರೀತಿಯ ಕೃತ್ಯಗಳಿಗೆ ಪ್ರೇರಿತರಾಗುವ ಅಪಾಯವಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ‘ಕೆಸರಲ್ಲಿ ಶಾಲೆಯೋ, ಶಾಲೆಯಲ್ಲಿ ಕೇಸರೋʼ

ತಕ್ಷಣ ತನಿಖೆ ಆರಂಭಿಸಿ. ನವಿಲು ಗರಿಯ ಮೂಲವನ್ನು ಪತ್ತೆಹಚ್ಚಿ. ಮಾದರಿ ವಶಪಡಿಸಿಕೊಳ್ಳಲು ಕ್ರಮ ಕೈಗೊಳ್ಳಬೇಕು. ಸಂಬಂಧಪಟ್ಟ ಎಲ್ಲಾ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿ, ಕ್ರಮಬದ್ಧವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ. ಮತ್ತು ಈ ಅಪರಾಧಕ್ಕೆ ತಕ್ಕಂತೆ ವೈಜ್ಞಾನಿಕ ಹಾಗೂ ಕಾನೂನಾತ್ಮಕ ದೃಷ್ಟಿಯಿಂದ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...