ರಾಯಚೂರು | ವಕ್ಫ್ ಮಂಡಳಿಯಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಲು ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

Date:

ರಾಜ್ಯ ಸರ್ಕಾರ ವಕ್ಫ್ ಮಂಡಳಿ ಹೆಸರಿನಲ್ಲಿ ರೈತರ ಪಹಣಿಗಳಲ್ಲಿ ಗೊಂದಲ ಸೃಷ್ಟಿಸಿ ಕಬಳಿಕೆ ಮಾಡುವ ಹುನ್ನಾರ‌ ಮಾಡುತ್ತಿದೆ. ವಕ್ಫ್ ಮಂಡಳಿಯಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ರಾಯಚೂರು ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

“ಕಾಂಗ್ರೆಸ್‌ ಸರ್ಕಾರ ವಕ್ಫ್ ಹೆಸರಿನಲ್ಲಿ ದೇಗುಲಗಳ ಆಸ್ತಿಗೆ ಕೈ ಹಾಕುವ, ಶಾಂತಿ, ಸೌಹಾರ್ದತೆ, ಸಾಮರಸ್ಯದ ನಾಡನ್ನು ಆತಂಕದ ಸ್ಥಿತಿಗೆ ತಳ್ಳುತ್ತಿದೆ. ರೈತರ, ಮಠ ಮಂದಿರದ ಆಸ್ತಿಯನ್ನು ವಕ್ಫ್ ಆಸ್ತಿಯೆಂದು ದಾಖಲೆಗಳಲ್ಲಿ ಸೇರ್ಪಡೆ ಮಾಡಲಾಗುತ್ತಿದೆ. ವಕ್ಫ್ ಕಾಯ್ದೆಯನ್ನು ಕೇಂದ್ರ ಸರ್ಕಾರ ತಿದ್ದುಪಡಿ ಮಾಡಲು ಮುಂದಾಗಿದ್ದೇ ತಡ ರಾಜ್ಯದ ಕಾಂಗ್ರೆಸ್ ಸರ್ಕಾರ ದೇಶದ ಆಸ್ತಿಯನ್ನು ಕಬಳಿಸಲು ಹುನ್ನಾರ ನಡೆಸಿದೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾನಿರತ ವಿಧಾನಪರಿಷತ್ ಮಾಜಿ ಸದಸ್ಯ ಎನ್ ಶಂಕ್ರಪ್ಪ ಮಾತನಾಡಿ, “ಸಚಿವ ಜಮೀರ್ ಅಹ್ಮದ್ ರಾಜ್ಯದ ಹಲವೆಡೆ ಭೇಟಿ ನೀಡಿ ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಿ, ಸರ್ಕಾರ ರೈತರ ಆಸ್ತಿಯನ್ನು ವಕ್ಫ್ ಹೆಸರಿಗೆ ಮಾಡಿಕೊಳ್ಳುತ್ತಿದೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಸಮುದಾಯವನ್ನು ಓಲೈಕೆ ಮಾಡಲು ಓಟ್ ಬ್ಯಾಂಕ್ ರಾಜಕಾರಣಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಪೌತಿಖಾತೆ ಮಾಡಿಕೊಡಲು ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

“ವಕ್ಫ್ ಮಂಡಳಿಯಿಂದ ಆಗುತ್ತಿರುವ ಗೊಂದಲ ಸರಿಪಡಿಸಲು ರಾಜ್ಯ ಸರ್ಕಾರ ಮುಂದಾಗದೇ ಅಧಿಕಾರಿಗಳ ಸಭೆ ನಡೆಸಿ ಪಹಣಿಗಳಲ್ಲಿ ವಕ್ಫ್ ಆಸ್ತಿಯೆಂದು ನಮೂದು ಮಾಡದಂತೆ ತಾತ್ಕಾಲಿಕ ತಡೆ ನೀಡಿದ್ದಾರೆ. ಇದು ಕೇವಲ ಚುನಾವಣೆಯ ತಂತ್ರಗಾರಿಕೆಯಾಗಿದೆ. ಮುಂದೊಂದು‌ ದಿನ ರೈತರಿಗೆ‌ ಮರಣ ಶಾಸನವಾಗಲಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಮುಖಂಡರಾದ ರಾಜಕುಮಾರ, ಶಿವಬಸಪ್ಪ ಮಾಲಿ ಪಾಟೀಲ, ಸುಮಾ ಅಶೋಕ ಗಸ್ತಿ, ಡಾ.ನಾಗರಾಜ ಬಾಲ್ಕಿ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...