ರಾಯಚೂರು | ಚಿಕಿತ್ಸೆಗೆ ದಾಖಲಾಗಿದ್ದ ಬಾಲಕ ಜಿಲ್ಲಾಸ್ಪತ್ರೆಯಿಂದ ನಾಪತ್ತೆ; ದೂರು ದಾಖಲು

Date:

ಕೈ ಬೆರಳು ಸುಟ್ಟ ಹಿನ್ನಲೆಯಲ್ಲಿ ರಾಯಚೂರು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದ 9 ವರ್ಷದ ಬಾಲಕ ನಾಪತ್ತೆಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ನಾಪತ್ತೆಯಾದ ಬಾಲಕ ರಾಯಚೂರು ತಾಲ್ಲೂಕಿನ ಜುಲಮಗೇರಾ ತಾಂಡದ ನಾಗಲಕ್ಷ್ಮಿ ಅವರ ಪುತ್ರ 9 ವರ್ಷದ ವಿಷ್ಣುನಾಯಕ ಎಂದು ತಿಳಿದು ಬಂದಿದೆ.

ಮನೆಯಲ್ಲಿ ಮೊಬೈಲ್‌ ಚಾರ್ಜಿಂಗ್‌ ಇಟ್ಟು ನೋಡುತ್ತಿದ್ದ ಸಮಯದಲ್ಲಿ ವಿದ್ಯುತ್‌ ಸ್ಪರ್ಶಗೊಂಡ ಕಾರಣ ಕೈ ಬೆರಳು ಸುಟ್ಟು ಗಾಯಗೊಂಡಿದ್ದರಿಂದ ಕಳೆದ ಜೂ.17 ರಂದು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ.

ಜೂನ್ 21 ರಂದು ರಾತ್ರಿ ಆಸ್ಪತ್ರೆ ಮಂಚದ ಮೇಲೆ ಮಲಗಿದ್ದ ಬಾಲಕ 22 ರಂದು ಬೆಳಗಿನ ಜಾವದ ವೇಳೆಗೆ ನಾಪತ್ತೆಯಾಗಿದ್ದಾನೆ. ಇದರಿಂದ ಆತಂಕಗೊಂಡ ಬಾಲಕನ ತಾಯಿ ಸ್ಥಳೀಯ ಮಾರ್ಕೆಟ್‌ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಿಸಿದ್ದಾರೆ.

ದೂರು ದಾಖಲಿಸಿ ವಾರ ಕಳೆದರೂ ಬಾಲಕನ ಪತ್ತೆಯಾಗದೇ ಇರುವುದು ತಾಯಿಯನ್ನು ಇನ್ನಷ್ಟು ಆತಂಕಕ್ಕೆ ದೂಡಿದ್ದು, ತಾಯಿ ಮಗನ ಫೋಟೋ ಹಿಡಿದು ಹುಡುಕಾಟ ನಡೆಸಿದ್ದಾರೆ.

ಮಗನನ್ನ ದಾಖಲಿಸಿದ್ದ ರಿಮ್ಸ್ ಆಸ್ಪತ್ರೆಯ ವಾರ್ಡ್‌ಗೆ ಆಗಾಗ ಬಂದು ಮಗನನ್ನ ಹುಡುಕುತ್ತಲೇ ಇದ್ದಾರೆ. ಜಿಲ್ಲಾಸ್ಪತ್ರೆ ಅಧಿಕಾರಿ, ಸಿಬ್ಬಂದಿ ನಿರ್ಲಕ್ಷ್ಯವೇ ಮಗ ಕಾಣೆಯಾಗಲು ಕಾರಣ ಎಂದು ತಾಯಿ ಆರೋಪಿಸಿದ್ದಾರೆ. ಆಸ್ಪತ್ರೆ ಸಿಸಿ ಕ್ಯಾಮೆರಾಗಳು ಹಾಳಾಗಿದ್ದು ಬಾಲಕನ ಚಲನವಲನ ಸೆರೆಯಾಗಿಲ್ಲ. ಪೊಲೀಸರು ಹುಡುಕಾಟ ಮುಂದುವರೆಸಿರುವುದಾಗಿ ಹೇಳುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಜಿಲ್ಲೆಯ 23 ಗ್ರಾಮಗಳಲ್ಲಿ ಮೊಹರಂ ಆಚರಣೆ ನಿಷೇಧ: ಜಿಲ್ಲಾಧಿಕಾರಿ ಆದೇಶ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...