ರಾಯಚೂರು | ಹಾವು ಕಚ್ಚಿ ಬಾಲಕ ಸಾವು: ‘ಬೀದಿ ದೀಪ ಇಲ್ಲದ್ದೇ ಕಾರಣ’ ಎಂದ ಗ್ರಾಮಸ್ಥರು

Date:

ರಾತ್ರಿ ವೇಳೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಾವು ಕಚ್ಚಿ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ರಾಯಚೂರು ತಾಲೂಕಿನ ರಘುನಾಥಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತಪಟ್ಟ ಬಾಲಕನನ್ನು ಶ್ರೀಕಾಂತ (10) ಎಂದು ಗುರುತಿಸಲಾಗಿದೆ.

ಕಳೆದ ಶನಿವಾರ ರಾತ್ರಿ ವೇಳೆ ಹಾವು ಕಚ್ಚಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಭಾನುವಾರ ರಾತ್ರಿ ಮೃತಪಟ್ಟಿದ್ದಾನೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮದ ರಸ್ತೆ ಪಕ್ಕದಲ್ಲಿ ಬೀದಿ ದೀಪಗಳು ಇಲ್ಲದ ಕಾರಣ ವಿಷಜಂತುಗಳು ಮನೆಗಳಿಗೆ ಸೇರುತ್ತಿವೆ. ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಗೆ ಹಾಗೂ ಅಧ್ಯಕ್ಷರಿಗೆ ಬೀದಿ ದೀಪಗಳನ್ನು ಅಳವಡಿಸುವಂತೆ ಅನೇಕ ಬಾರಿ ಗ್ರಾಮಸ್ಥರು ಒತ್ತಾಯಿಸಿದ್ದರೂ ಸ್ಪಂದಿಸಿಲ್ಲ.‌ ಇದರಿಂದಾಗಿಯೇ ಬಾಲಕ ಸಾವನ್ನಪ್ಪಿದ್ದಾನೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಶಿರೂರು ದುರಂತ | ಡ್ರೆಜ್ಜಿಂಗ್ ಕಾರ್ಯಾಚರಣೆಯ ವೇಳೆ ಮೂಳೆ ಪತ್ತೆ: ಡಿಎನ್‌ಎ ಪರೀಕ್ಷೆ ನಡೆಸಲು ರವಾನೆ

ಬಾಲಕನ ಸಾವಿಗೆ ಪಂಚಾಯಿತಿ ಆಡಳಿತ ಮಂಡಳಿಯೇ ಕಾರಣ ಎಂದು ಗ್ರಾಮಸ್ಥರು ದೂರಿದ್ದು, ಮೃತ ಬಾಲಕನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೇ, ಮುಂದೆ ಹೀಗಾಗದಂತೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಕೂಡಲೇ ಬೀದಿ ದೀಪಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...