ರಾಯಚೂರು | ಬಸ್-ಟ್ರಾಕ್ಟರ್ ಮುಖಾಮುಖಿ; ಓರ್ವ ಮಹಿಳೆ ಸಾವು, 18 ಮಂದಿಗೆ ಗಾಯ

Date:

ಸಾರಿಗೆ ಬಸ್-ಟ್ರಾಕ್ಟರ್ ಮುಖಾಮುಖಿ ಉಂಟಾಗಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದು, 18 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದ ಬನ್ನಿಗೋಳದ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಶ್ರೀದೇವಿ(19) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ 18 ಮಂದಿ ಗಾಯಾಳುಗಳನ್ನು ಲಿಂಗಸೂಗೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬನ್ನಿಗೋಳ ಗ್ರಾಮದ ಕೂಲಿಕಾರ್ಮಿಕರು ಕೆಲಸಕ್ಕಾಗಿ ಟ್ರ‍್ಯಾಕ್ಟರ್‌ನಲ್ಲಿ ತೆರಳುತ್ತಿದ್ದರು. ಅಂಕಲಿಮಠದಿಂದ ಮುದಗಲ್ ಪಟ್ಟಣದ ಕಡೆಗೆ ಬಸ್ ಬರುತ್ತಿತ್ತು. ಈ ವೇಳೆ ಮಾರ್ಗಮಧ್ಯೆ ಘಟನೆ ಜರುಗಿದೆ ಎಂದು ತಿಳಿದುಬಂದಿದೆ. ಮೃತಪಟ್ಟಿರುವ ಮಹಿಳೆಗೆ ಇತ್ತೀಚಿಗೆ ಮದುವೆಯಾಗಿತ್ತು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕಾವಾಡಿಗರಹಟ್ಟಿಗೆ ಉಪಲೋಕಾಯುಕ್ತ ನ್ಯಾ. ಫಣೀಂದ್ರ ಭೇಟಿ

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ನಾಲ್ವರನ್ನು ಬಾಗಲಕೋಟೆಯ ಆಸ್ಪತ್ರೆಗೆ ಸಾಗಿಸಲಾಗಿದೆ. ಸಾರಿಗೆ ಬಸ್ ಚಾಲಕನಿಗೂ ಗಾಯಗೊಂಡಿದ್ದು, ಪ್ರಯಾಣಿಕರಿಗೆ ಕೆಲವೊಂದು ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಮುದಗಲ್ ಠಾಣೆ ಪಿಎಸ್‌ಐ ವೆಂಕಟೇಶ ಮಡಿಕೇರಿ, ಪಿಎಸ್‌ಐ ಛತ್ರಪ್ಪ ರಾಥೋಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಬನ್ನಿಗೋಳ ಗ್ರಾಮಸ್ಥರು ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಿದರು. ಘಟನೆಯಿಂದ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...