ರಾಯಚೂರು | ವ್ಯಾಪಾರ, ಕೈಗಾರಿಕೆ ಅಭಿವೃದ್ಧಿಗೆ ವೈಬ್‌ಪೇಜ್ ತಯಾರಿ: ವಾಣಿಜ್ಯೋಧ್ಯಮ ಸಂಘದ ಅಧ್ಯಕ್ಷ್ಯ

Date:

ವ್ಯಾಪಾರ, ಕೈಗಾರಿಕೆ ಸೇರಿದಂತೆ ಪೂರ್ಣ ಪ್ರಮಾಣ ಮಾಹಿತಿ ಸಂಗ್ರಹಿಸಲು ರಾಯಚೂರು ವಾಣಿಜ್ಯೋಧ್ಯಮ ಸಂಘದಿಂದ ವೈಬ್‌ಪೇಜ್ ಸಿದ್ದಪಡಿಸಲಾಗುತ್ತಿದೆ ಎಂದು ಸಂಘದ ನೂತನ ಅಧ್ಯಕ್ಷ ಎಸ್ ಕಮಲಕುಮಾರ ಜೈನ್ ಹೇಳಿದರು.

ರಾಯಚೂರು ನಗರದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಿರಾಣಿ ಸೇರಿದಂತೆ ಎಲ್ಲ ವ್ಯಾಪಾರಸ್ಥರ ಮಾಹಿತಿ ದಾಖಲೀಕರಣ ಮಾಡುವುದರಿಂದ ಗ್ರಾಹಕರು ಹಾಗೂ ಕೈಗಾರಿಕೆಗಳಿಗೆ, ವ್ಯಾಪಾರಸ್ಥರಿಗೂ ವಹಿವಾಟು ನಡೆಸಲು ಸಹಕಾರಿಯಾಗಲಿದೆ. ವೈಬ್ ಡೈರಕ್ಟರಿಗೆ ವೀಕ್ಷಿಸುವವರಿಗೆ ಎಲ್ಲ ರೀತಿ ಮಾಹಿತಿ ಒಂದೇ ವೇದಿಕೆಯಲ್ಲಿ ದೊರೆಯುವಂತೆ ಮಾಡಲು ಉದ್ದೇಶಿಸಲಾಗಿದೆ” ಎಂದು ತಿಳಿಸಿದರು.

“ಬಿಕಾಂ ಮತ್ತು ಎಂಬಿಗೆ ವಿದ್ಯಾರ್ಥಿಗಳನ್ನು ಬಳಸಿಕೊಂಡು ಮಾಹಿತಿ ಸಂಗ್ರಹಿಸಲಾಗುತ್ತದೆ. ದಾಖಲೀಕರಣ ಮಾಡುವ ವಿದ್ಯಾರ್ಥಿಗಳಿಗೆ ಗೌರವಧನದ ಜೊತೆಗೆ ಪ್ರಮಾಣ ಪತ್ರ ನೀಡಲಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಯಚೂರಿನಲ್ಲಿ ಬಂಡವಾಳ ಹೂಡಿಕೆ ಉತ್ತೇಜಿಸುವುದು ಅಗತ್ಯವಾಗಿರುವ ಹಿನ್ನಲೆಯಲ್ಲಿ ಇತ್ತೀಚೆಗೆ ಕೈಗಾರಿಕಾ ಸಚಿವರನ್ನು ಭೇಟಿ ಮಾಡಿ ಕೃಷಿ ಆಧಾರಿತ ಹಾಗೂ ಔಷಧಿ ಉತ್ಪಾದನಾ ವಲಯ ಕೈಗಾರಿಕೆಗಳ ಸ್ಥಾಪನೆಗೆ ಒತ್ತನೀಡಬೇಕೆಂದು ಮನವಿ ಮಾಡಲಾಗಿದೆ” ಎಂದರು.

“ಕೈಗಾರಿಕಾ ವಲಯ ಸ್ಥಾಪನೆಗೆ 1500 ಎಕರೆ ಭೂಮಿಯ ಸ್ವಾಧೀನ, ಕೈಗಾರಿಕೆ ಪ್ರದೇಶಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ದೇವದುರ್ಗ ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಒತ್ತು ನೀಡುವದು, ಗ್ರಾಮ ಪಂಚಾಯಿತಿಗಳಲ್ಲಿ 9ಎ ಮತ್ತು 11ಎ ಫಾರಂ ನೀಡುವುದು ವಿಳಂಬವಾಗುತ್ತಿದೆ. ಟ್ರಕ್ ಟರ್ಮಿನಲ್ ಸ್ಥಾಪಿಸಲು, ಟೆಕ್ಸ್‌ಟೈಲ್ಸ್‌ ಪಾರ್ಕ್‌ ಸ್ಥಾಪಿಸಲು ಹಾಗೂ ವಾಟರ್‌ ಟ್ರೀಟ್‌ಮೆಂಟ್‌ ಟ್ಯಾಂಕ್ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಗುತ್ತಿಗೆದಾರರ ಬಾಕಿ ಹಣ ಪಾವತಿಸದೇ ಇದ್ದರೆ ಹೋರಾಟ; ನಾಗಪ್ಪ ಗಿರಣಿ ಎಚ್ಚರಿಕೆ

“ಕೈಗಾರಿಕಾ ಪ್ರದೇಶದಲ್ಲಿ ಅಭಿವೃದ್ಧಿ, ಮೂಲಭೂತ ಸೌಕರ್ಯಗಳಿಲ್ಲದೇ ಹೊಸ ಕೈಗಾರಿಕೆಗಳು ಬಾರದಂತಾಗಿವೆ. ಇದನ್ನು ಸರ್ಕಾರದ ಗಮನಕ್ಕೆ ತರಲಾಗಿದ್ದು, ಕ್ರಮವಹಿಸುವುದಾಗಿ ಕೈಗಾರಿಕಾ ಸಚಿವರು ಭರವಸೆ ನೀಡಿದ್ದಾರೆ” ಎಂದರು.

ತ್ರಿವಿಕ್ರಮ ಜೋಷಿ, ಮಲ್ಲಿಕಾರ್ಜುನ ದೋತರಬಂಡಿ, ಕೆ ಎಂ ಪಾಟೀಲ್, ಜಂಬಣ್ಣ ಯಕ್ಲಾಸಪುರು, ಕೆ ವಿ ಮನೋಹರ, ಜಗದೀಶ ಗುಪ್ತಾ, ನಾಗನಗೌಡ ಹರವಿ, ಉದಯಕಿರಣ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...