ರಾಯಚೂರು | ಒಳ ಮೀಸಲಾತಿ ಸಮೀಕ್ಷೆ: ತರಬೇತಿ ಕಾರ್ಯಗಾರಕ್ಕೆ ಚಾಲನೆ

Date:

ನ್ಯಾಯಮೂರ್ತಿಗಳಾದ ಹೆಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಸಮೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮಾಸ್ಟರ್ ಟ್ರೆನರ್‌ಗಳಿಂದ ತಾಲೂಕಾ ಮಟ್ಟದ ಮಾಸ್ಟರ್ ಟ್ರೆನರ್‌ಗಳಿಗೆ ತರಬೇತಿ ಕಾರ್ಯಾಗಾರಕ್ಕೆ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಚಾಲನೆ ನೀಡಿದರು.

ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮಾತನಾಡಿ ಟ್ರೆನರ್‌ಗಳು ಸಮೀಕ್ಷಾ ವ್ಯಾಪ್ತಿಯಲ್ಲಿರುವ ಮನೆಗಳಿಗೆ ಮತದಾರರ ಪಟ್ಟಿಯಲ್ಲಿರುವ ಮನೆ ಸಂಖ್ಯೆಗಳ ಆಧಾರದ ಮೇಲೆ ಭೇಟಿ ನೀಡಬೇಕು. ಮತ್ತು ಪರಿಶಿಷ್ಟ ಜಾತಿಯ ಕುಟುಂಬಗಳನ್ನು ಗುರುತಿಸಬೇಕು. ಯಾವ ದಿನದಂದು, ಯಾವ ಯಾವ ಮನೆಗಳನ್ನು ಸಮೀಕ್ಷೆಗೆ ಒಳಪಡಿಸಲಾಗುವುದು ಎಂಬ ಮಾಹಿತಿಯನ್ನು ಆದಷ್ಟು ಮಟ್ಟಿಗೆ ಮುಂಚಿತವಾಗಿಯೆ ಗೊತ್ತುಪಡಿಸಿಕೊಳ್ಳಬೇಕು ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಪರಿಶಿಷ್ಟ ಜಾತಿಗಳ ಸಮೀಕ್ಷೆ ; ಮಾದಿಗ ನಮೂದಿಸಲು ಮನವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮೀಕ್ಷೆಯಲ್ಲಿ ಪರಿಶಿಷ್ಟ ಜಾತಿಯವರ ಯಾವುದೇ ಮನೆಯನ್ನು ಬಿಡದೆ, ಪ್ರತಿಯೊಂದು ಮನೆಗೆ ಭೇಟಿ ನೀಡಿ ಅಲ್ಲಿರುವ ಪ್ರತಿಯೊಂದು ಕುಟುಂಬದ ಎಲ್ಲ ಸದಸ್ಯರ ಮಾಹಿತಿಯನ್ನು ಮೊಬೈಲ್ ಆ್ಯಫ್‌ನಲ್ಲಿ ಭರ್ತಿ ಮಾಡಬೇಕು. ಸಮೀಕ್ಷೆ ನಡೆಸುವಾಗ ಸಮೀಕ್ಷೆ ಬ್ಲಾಕಿನ ಅಧಿಕೃತ ಭಾಗವಾಗಿರುವ ಯಾವುದೇ ಮನೆಯನ್ನು ಬಿಡಬೇಡಿ. ಅಲ್ಲದೆ ಕುಟುಂಬವನ್ನು ಭೇಟಿ ಮಾಡಿದಾಗ, ಪ್ರಶ್ನಾವಳಿಯನ್ನು ತುಂಬಲು ಆತುರಪಡಬೇಡಿ. ನಿಮ್ಮ ಭೇಟಿಯ ಉದ್ದೇಶದ ಬಗ್ಗೆ ಮಾಹಿತಿ ನೀಡುವವರಿಗೆ ಸಂಕ್ಷಿಪ್ತವಾಗಿ ತಿಳಿಸಿ ನಿಮ್ಮ ಪರಿಚಯವನ್ನು ಮಾಡಿಕೊಳ್ಳಬೇಕೆಂದರು.

ಅಪರ ಜಿಲ್ಲಾಧಿಕಾರಿ ಮಾತನಾಡಿ ಶಿವಾನಂದ ಅವರು ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀ ಹೆಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಸಮೀಕ್ಷೆಗೆ ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿರುವ ಜನರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ, ಔದ್ಯೋಗಿಕ ಪ್ರಾತಿನಿಧ್ಯತೆ ಇತ್ಯಾದಿ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ಮಾಡುವುದು ಆಯೋಗದ ಉದ್ದೇಶವಾಗಿದ್ದು, ಸಮೀಕ್ಷೆದಾರರು ನಿಯಮಗಳ ಅನುಸಾರ ಸಮೀಕ್ಷೆ ಮಾಡಬೇಕೆಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಲಿಂಗಸುಗೂರು ಸಹಾಯಕ ಆಯುಕ್ತರಾದ ಬಸವಣೆಪ್ಪಾ ಕಲಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಚಿದಾನಂದಪ್ಪ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಬಿ.ಬಡಿಗೇರ, ತರಬೇತಿದಾರರಾದ ಸದಾಶಿವಪ್ಪ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನ ತಹಶೀಲ್ದಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...