ರಾಯಚೂರು | ಬ್ಯಾಂಕ್‌ಗಳಲ್ಲಿ ಸಿಸಿಟಿವಿ, ಅಲಾರ್ಮ್ ಅಳವಡಿಸಬೇಕು: ಎಸ್‌ಪಿ ಪುಟ್ಟಮಾದಯ್ಯ

Date:

ರಾಜ್ಯದಲ್ಲಿ ಹಗಲು ದರೋಡೆ ಕಳ್ಳತನ ಪ್ರಯತ್ನಕ್ಕೆ ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ರಾಯಚೂರು ತಾಲೂಕು ವ್ಯಾಪ್ತಿಯ ಬ್ಯಾಂಕ್ ಅಧಿಕಾರಿಗಳೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಅಧ್ಯಕ್ಷತೆಯಲ್ಲಿ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಿತು.

“ಬೀದರ್ ನಗರದಲ್ಲಿ ಎಟಿಎಂನಲ್ಲಿ ಹಣ ತುಂಬಲು ತೆಗದುಕೊಂಡು ಹೋಗುತ್ತಿರುವಾಗ ದರೋಡೆ ಮಾಡಿ ಒಬ್ಬ ಬ್ಯಾಂಕ್ ಸಿಬ್ಬಂದಿಯನ್ನು ಗುಂಡಿಕ್ಕಿ ಕೊಲೆ ಮಾಡಿದ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಬ್ಯಾಂಕ್‌ನಲ್ಲಿ ಹಗಲು ದರೋಡೆ ಪ್ರಕರಣಗಳು ದಾಖಲಾಗಿದ್ದು, ಸಿಬ್ಬಂದಿಗಳು ಎಚ್ಚೆತ್ತುಕೊಳ್ಳಬೇಕು” ಎಂದರು.

“ಬ್ಯಾಂಕ್‌ನಲ್ಲಿ ಇರುವ ಸಿಸಿಟಿವಿಗಳು ಸುವ್ಯಸ್ಥೆಯಲ್ಲಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಬ್ಯಾಂಕ್‌ನಲ್ಲಿರುವ ಸೆಕ್ಯೂರಿಟಿ ಸಿಬ್ಬಂದಿಗಳಿಗೆ ಬ್ಯಾಂಕ್ ಸೆಕ್ಯೂರಿಟಿಯ ಬಗ್ಗೆ ಸರಿಯಾಗಿ ನಿಗಾವಹಿಸುವಂತೆ ಖಡಕ್ ಸೂಚಿಸುವುದು. ಅನುಮಾನಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಹತ್ತಿರದ ಠಾಣೆಗೆ, ಸರಹದ್ದಿನ ಠಾಣೆಗೆ ಮಾಹಿತಿ ನೀಡಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬ್ಯಾಂಕ್ ಆವರಣದ ಸುತ್ತಮುತ್ತ ಇರುವ ಏರಿಯಾವನ್ನು ಸೆರೆಹಿಡಿಯುವ ಹಾಗೆ ಒಳ್ಳೆಯ ಗುಣಮಟ್ಟದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಬ್ಯಾಂಕ್‌ನಲ್ಲಿ ಹೆಚ್ಚಿನ ಮೊತ್ತದ ಹಣ, ಚಿನ್ನವನ್ನು ಡ್ರಾ ಮಾಡಿಕೊಂಡು ಹೋಗುವ ಗ್ರಾಹಕರಿಗೆ ಕಳ್ಳರಿಂದ, ಅಪರಿಚಿತರಿಂದ ಜಾಗೃತತೆಯಿಂದ ಇರಲು ತಿಳಿಸಬೇಕು. ಬ್ಯಾಂಕ್‌ನಲ್ಲಿ ಹತ್ತಿರದ ಪೊಲೀಸ್ ಠಾಣೆಯ, ಪೊಲೀಸ್ ಅಧಿಕಾರಿಗಳ ಫೋನ್ ನಂಬರ್‌ಗಳನ್ನು ಬ್ಯಾಂಕ್‌ನಲ್ಲಿ ಕಾಣುವಂತೆ ಹಾಕಬೇಕು” ಎಂದು ಹೇಳಿದರು.

“ಎಟಿಎಂಗಳಲ್ಲಿ ಸಿಸಿಟಿವಿ, ಅಲಾರ್ಮ್‌ ಹಾಗೂ 24ಗಂಟೆಯೂ ಸೆಕ್ಯೂರಿಟಿ ಗಾರ್ಡ್ ವ್ಯವಸ್ಥೆಯನ್ನು ಮಾಡುವುದು. ಒಂದು ಲಕ್ಷ ಅಥವಾ ಅದಕ್ಕಿಂತ ಹೆಚ್ಚಿನ ಹಣವನ್ನು ಬ್ಯಾಂಕ್‌ನಿಂದ ವಿತ್ ಡ್ರಾ ಹಿಂತೆಗೆದುಕೊಳ್ಳುವಾಗ ಮಾಡುವ ಗ್ರಾಹಕರೊಂದಿಗೆ ಅವರ ಸುರಕ್ಷತೆಗಾಗಿ ಜತೆಗೆ ಇನ್ನೊಬ್ಬರನ್ನು ಕರೆದುಕೊಂಡು ಬರುವಂತೆ ಬ್ಯಾಂಕ್ ಸಿಬ್ಬಂದಿಗಳು ತಿಳಿಸಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವೆಲ್ಫೇರ್ ಪಾರ್ಟಿ ಮೌಲ್ಯಾಧಾರಿತ ವಿಚಾರಗಳ ಮೇಲೆ ಶ್ರಮಿಸುತ್ತಿದೆ: ತಾಹೇರ್ ಹುಸೇನ್

“ಬ್ಯಾಂಕ್‌ನಲ್ಲಿ ಹಣವಿಡುವ ಭದ್ರತಾ ಕೋಣೆಗೆ ಸಿಸಟಿವಿ ವ್ಯವಸ್ಥೆ ಮಾಡುವುದು. ಪ್ರೈವೇಟ್ ಏಜೆನ್ಸಿಯವರು ಬ್ಯಾಂಕ್‌ನಿಂದ ಹಣವನ್ನು ವಾಹನದಲ್ಲಿ ತೆಗೆದುಕೊಂಡು ಹೋಗುವಾಗ ಸೂಕ್ತ ಭದ್ರತೆ ಬಗ್ಗೆ ದೃಢಪಡಿಸಿಕೊಳ್ಳುವುದು. ಒಂದು ವೇಳೆ ಇಲ್ಲದೇ ಇದ್ದಲ್ಲಿ ಹೆಚ್ಚಿನ ಭದ್ರತೆ ನೇಮಿಸುವುದು. ಬ್ಯಾಂಕ್‌ಗಳ ಭದ್ರತೆಗಾಗಿ ಅಧಿಕಾರಿ/ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವಾಗ ನಿವೃತ್ತ ಸೈನಿಕರು, ನಿವೃತ್ತ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಅದ್ಯತೆ ನೀಡಬೇಕು” ಎಂಬುದು ಸೇರಿದಂತೆ ಇತರೆ ಭದ್ರತಾ ವಿಚಾರಗಳ ಕುರಿತು ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಮುಂಜಾಗೃತಾ ಕ್ರಮಗಳನ್ನು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ, ಡಿವೈಎಸ್‌ಪಿ ಸತ್ಯನಾರಾಯಣರಾವ್ ಸೇರಿದಂತೆ ಇತರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...