ರಾಯಚೂರು | ರಸ್ತೆ ನಿರ್ಮಾಣದ ಹೆಸರಲ್ಲಿ ಅಕ್ರಮವಾಗಿ ಭೂಸ್ವಾಧೀನ: ಚಾಮರಾಜ ಮಾಲಿಪಾಟೀಲ್ ಆರೋಪ

Date:

ರಾಯಚೂರು ಗಿಣಗೇರಾ ಹೆದ್ದಾರಿ ರಸ್ತೆ ನಿರ್ಮಾಣದ ಹೆಸರಿನಲ್ಲಿ ರೈತರಿಗೆ ಮಾಹಿತಿ ನೀಡದೆ ಭೂ-ಸ್ವಾಧೀನ ಪ್ರಕ್ರಿಯೆ ನಡೆಸದೇ ಅಕ್ರಮವಾಗಿ ಒತ್ತುವರಿ ಮಾಡುತ್ತಿರುವ ವಿರುದ್ಧ ಸಂಘಟಿತ ಹೋರಾಟ ನಡೆಸಲು ನೀರಮಾನವಿ ಶ್ರೀ ಯಲ್ಲಮ್ಮದೇವಿ ದೇವಸ್ಥಾನದ ಕಲ್ಯಾಣಮಂಟಪದಲ್ಲಿ ಏಪ್ರಿಲ್‌ 13ರಂದು ಭೂ ಸಂತ್ರಸ್ಥರ ರೈತರ ಸಮಾಲೋಚನಾ ಸಭೆ ಕರೆಯಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಹೇಳಿದರು.

ರಾಯಚೂರಿನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “90 ಕಿಮೀ ಉದ್ದದ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ₹1600 ಕೋಟಿ ವೆಚ್ಚ ಕಾಮಗಾರಿ ಪ್ರಾರಂಭಿಸಲಾಗಿದೆ. ಸಾಥ್ ಮೈಲ್ ಕ್ರಾಸ್‌ನಿಂದ ಸಿಂಧನೂರುವರೆಗೆ ಹೋಗುವ ರಸ್ತೆಯ ಇಕ್ಕೆಲ್ಲಗಳಲ್ಲಿ 75 ಅಡಿ ಭೂಮಿಯನ್ನು ಪಡೆಯಲಾಗುತ್ತಿದೆ. ರೈತರಿಗೆ ಪರಿಹಾರ ನೀಡದೆ ಭೂಮಿ ಪಡೆಯತ್ತಿರುವುದು ರೈತರಿಗೆ ಮಾಡುತ್ತಿರುವ ದ್ರೋಹವಾಗಿದೆ” ಎಂದು ಆರೋಪಿಸಿದರು.

“1990ರಿಂದ ರಸ್ತೆಗೆ ಯಾವುದೇ ಭೂಮಿ ಸ್ವಾಧೀನಪಡಿಸಿಕೊಂಡಿಲ್ಲವೆಂದು ಲೋಕೊಪಯೋಗಿ ಇಲಾಖೆ ದಾಖಲೆ ನೀಡಿದೆ. ಹೆದ್ದಾರಿ ಕಾಮಗಾರಿಯನ್ನು ಕೆಶಿಪ್ ಮೂಲಕ ನಿರ್ವಹಿಸಲಾಗುತ್ತಿದೆ. ರೈತರಿಗೆ ಯಾವುದೇ ರೀತಿ ಮಾಹಿತಿ ಇಲ್ಲದೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. 2002ರ ಏಪ್ರಿಲ್‌ನಲ್ಲಿ 75 ಅಡಿ ಭೂಮಿ ರಸ್ತೆ ನಿರ್ಮಾಣಕ್ಕೆ ಭೂಸ್ವಾಧೀನ ಪಡಿಸಿಕೊಳ್ಳುವುದಾಗಿ ಹೇಳಲಾಗಿತ್ತು. ಅಲ್ಲಿಂದ ಈವರೆಗೆ ಯಾವುದೇ ಕಾಮಗಾರಿ ನಡೆಸಿಲ್ಲ. ಈಗ ಏಕಾಏಕಿ ಎರಡು ಇಕ್ಕೆಲಗಳಿಗೆ ನೂರು ಅಡಿ ಜಾಗ ಪಡೆಯಲಾಗುತ್ತಿರುವುದಾಗಿ ಹೇಳಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲಾಧಿಕಾರಿಯವರು ಕೂಡಲೇ ಮಧ್ಯಪ್ರವೇಶಿಸಿ ರೈತರ ಸಮಸ್ಯೆ ಬಗೆಹರಿಸಬೇಕು. ಚುನಾಯಿತ ಜನಪ್ರತಿನಿಧಿಗಳು ನೀತಿ ಸಂಹಿತೆ ನೆಪ ಹೇಳದೆ ರೈತರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು. ಇಲ್ಲದಿದ್ದಲ್ಲಿ ಹಂತ ಹಂತವಾಗಿ ಹೋರಾಟ ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಮತದಾನ ಜಾಗೃತಿ ಮೂಡಿಸಲು ವಿಕಲಚೇತನರ ಬೈಕ್ ರ್‍ಯಾಲಿ

ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್ ಇಂಗಳದಾ, ಬೂದೆಯ್ಯಸ್ವಾಮಿ, ಶರಣಬಸವ ಬೆಟ್ಟದೂರು, ದೇವರಾಜನಾಯಕ, ಭೀಮಣ್ಣ ಇದ್ದರು.

ವರದಿ : ಹಫೀಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...