ರಾಯಚೂರು | ವಸತಿ ನಿಲಯಗಳಲ್ಲಿ ಅವ್ಯವಸ್ಥೆ; ವಾರ್ಡನ್, ಅಧಿಕಾರಿಗಳ ಬೇಜವಾಬ್ದಾರಿ ಆರೋಪ

Date:

ರಾಯಚೂರು ನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಇಲಾಖೆ ವ್ಯಾಪ್ತಿಯ ವಸತಿ ನಿಲಯಗಳಲ್ಲಿ ಮೂಲಸೌಕರ್ಯವಿಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದು, ಅವ್ಯವಸ್ಥೆ ತಾಂಡವವಾಡುತ್ತಿದೆ. ಇಲಾಖೆವಾರು ಬೇಜವಾಬ್ದಾರಿ ಅಧಿಕಾರಿಗಳು ಹಾಗೂ ವಾರ್ಡನ್‌ಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆರ್‌ವೈಎಫ್‌ಐ ಕಾರ್ಯಕರ್ತರು ಆಗ್ರಹಿಸಿದರು.

ರಾಯಚೂರು ತಹಶೀಲ್ದಾರ್ ಗ್ರೇಡ್ 2 ಪರಶುರಾಮ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ, “ವಸತಿ ನಿಲಯಗಳಲ್ಲಿ ಮೆನು ಚಾಟ್ ಪ್ರಕಾರ ರುಚಿಯಾಗಿ ಅಡುಗೆ ತಯಾರಿಸುತ್ತಿಲ್ಲ. ವಸತಿ ನಿಲಯಗಳ ಅಶುದ್ಧತೆಯಿಂದ ಸೊಳ್ಳೆ, ನೊಣಗಳ ಕಾಟ ಹೆಚ್ಚಾಗಿದ್ದು, ಮಕ್ಕಳು ರೋಗಗಳಿಗೆ ತುತ್ತಾಗುವಂತಾಗಿದೆ. ಗ್ರಂಥಾಲಯವಿದ್ದರೂ ಸಾಕಷ್ಟು ಪುಸ್ತಕಗಳಿಲ್ಲ. ಇದರಿಂದಾಗಿ ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿಯಿಂದ ವಂಚಿತರಾಗಿದ್ದಾರೆ” ಎಂದು ಆರೋಪಿಸಿದರು.

“ವಸತಿ ನಿಲಯಗಳಲ್ಲಿ ಹಳೆಯ ವಿದ್ಯಾರ್ಥಿಗಳು ಈಗಲೂ ಕೂಡಾ ಅನಧಿಕೃತವಾಗಿ ಪ್ರವೇಶ ಪಡೆದಿದ್ದು, ಈಗಿರುವ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯವನ್ನೂ ನಡೆಸುತ್ತಿದ್ದಾರೆ. ನಿಗದಿಗಿಂತ ಮತ್ತು ಹೆಚ್ಚಿನ ವಿದ್ಯಾರ್ಥಿಗಳು ಸೇರಿದ್ದರಿಂದ ಮಂಚಗಳನ್ನು ಹೊರಗೆ ಹಾಕಿ ನೆಲದ ಮೇಲೆ ಹಾಸಿಗೆ ಹಾಕಿದ್ದಾರೆ. ಬಹುತೇಕ ಹಾಸಿಗೆ ಬಟ್ಟೆಗಳು ಹರಿದಿದ್ದರೂ ಬದಲಾಯಿಸುತ್ತಿಲ್ಲ. ವಸತಿ ನಿಲಯದ ಸಮಸ್ಯೆಗಳ ಬಗ್ಗೆ ವಾರ್ಡನ್‌ಗೆ ಹೇಳಿದರೆ ಸ್ಪಂದಿಸುತ್ತಿಲ್ಲವೆಂದು ವಿದ್ಯಾರ್ಥಿಗಳು ಹಲವು ಬಾರಿ ದೂರು ನೀಡಿದರೂ ತಪ್ಪಿತಸ್ತರ ವಿರುದ್ಧ ಕ್ರಮವಾಗಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಸತಿ ನಿಲಯಗಳ ನಿರ್ವಹಣೆಯ ಹೊಣೆಹೊತ್ತವರು ಸರಿಯಾದ ಸವಲತ್ತು ನೀಡದೇ ಪ್ರಶ್ನೆ ಮಾಡಿದ‌ ವಿದ್ಯಾರ್ಥಿಗಳ ನಡುವೆ ಗುಂಪುಗಾರಿಕೆ ಮಾಡಿ ಎತ್ತಿಕಟ್ಟಲಾಗುತ್ತಿದೆ. ಅನೇಕ ವಸತಿ ನಿಲಯಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿಯೇ ಇಲ್ಲ ಮತ್ತು ಇದ್ದರೂ ಸಹ ಕಾರ್ಯರೂಪದಲ್ಲಿಲ್ಲ. ಸುಸಜ್ಜಿತವಾಗಿ ನಿರ್ವಹಣೆ ಮಾಡದಿರುವದ ಕಾರಣ ಅಳಸಿದ ಅನ್ನ, ತ್ಯಾಜ್ಯ ಎಲ್ಲೆಂದರಲ್ಲಿ ಹಾಕುತ್ತಿರುವುದರಿಂದ ತ್ಯಾಜ್ಯ ತಿನ್ನಲು ವಸತಿನಿಲಯಕ್ಕೆ ಬರುತ್ತಿರುವ ಮಂಗಗಳು, ನಾಯಿಗಳ ಹಾವಳಿ ಹೆಚ್ಚಾಗಿದೆ” ಎಂದರು.

“ವಸತಿ ನಿಲಯಗಳಲ್ಲಿ ಸರಿಯಾಗಿ ಕುಡಿಯಲು ನೀರಿನ ಸೌಕರ್ಯವಿಲ್ಲ. ಪ್ರತಿಯೊಂದು ವಸತಿ ನಿಲಯದಲ್ಲಿ ನೀರಿನ ಘಟಕ ಇರಬೇಕೆಂಬ ನಿಯಮವಿದ್ದರೂ ಪಾಲನೆ ಮಾಡುತ್ತಿಲ್ಲ. ಹೊರಗಡೆ ಖಾಸಗಿ ಕುಡಿಯುವ ನೀರಿನ ಘಟಕಕ್ಕೆ ಹೋಗಿ ಕ್ಯಾನ್ ಹೊತ್ತು ತರಬೇಕಾದ ಪರಿಸ್ಥಿತಿಯಿದೆಯೆಂದು ವಿದ್ಯಾರ್ಥಿಗಳು ನೀರಿನ ಸಮಸ್ಯೆ ತಿಳಿಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಹಾಸ್ಟೆಲ್‌ಗಳ ಅಡುಗೆ ಸಿಬ್ಬಂದಿಯವರು ದುಡಿಮೆಗೆ ಸರಿಯಾದ ತಿಂಗಳ ವೇತನ ಸಿಗದಿದ್ದಕ್ಕೆ ಅವರೂ ಕೂಡಾ ಬೇಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿರುವುದಾಗಿ ತಿಳಿದುಬಂದಿದೆ. ಆಯಾ ವಸತಿ ನಿಲಯಗಳ ವಾರ್ಡನ್‌ಗಳಿಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಕುಮ್ಮಕ್ಕಿನಿಂದ ಅಮಾಯಕ ವಿದ್ಯಾರ್ಥಿಗಳು ಬಲಿಪಶುಗಳಾಗುವ ದುಃಸ್ಥಿತಿ ಬಂದಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ವೈಭವಯುತ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ

“ಜಿಲ್ಲಾಧಿಕಾರಿಗಳು ಯಾವುದೇ ರೀತಿ ಮುನ್ಸೂಚನೆ ನೀಡದೆ ವಾರಕ್ಕೆ ಒಂದು ವಸತಿ ನಿಲಯಕ್ಕೆ ದಿಢೀರನೆ ಭೇಟಿ ಕೊಟ್ಟು ಅಲ್ಲಿನ ವಸ್ತುಸ್ಥಿತಿಯನ್ನು ಅರಿಯಬೇಕು. ವಸತಿ ನಿಲಯಗಳ‌ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಚರ್ಚಿಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಆರ್‌ವೈಎಫ್‌ಐ ಜಿಲ್ಲಾ ಮುಖಂಡ ಅಜೀಜ್ ಜಾಗೀರ್ದಾರ್, ನಿರಂಜನ್ ಕುಮಾರ್, ರವಿಚಂದ್ರಯಲ್ಲಪ್ಪ, ಹನೀಫ್ ಅಬಕಾರಿ ರೈತ ಮುಖಂಡ, ಮಹೇಂದ್ರ ಸೇರಿದಂತೆ ಇತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...