ರಾಯಚೂರು | ಕೆರೆಗಳಿಗೆ ರಾಸಾಯನಿಕ ಮಿಶ್ರಣ ಶಂಕೆ; ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

Date:

ರಾಯಚೂರು ತಾಲೂಕಿನ ಮಲಿಯಾಬಾದ್ ಗ್ರಾಮದ ಮಲ್ಲಾರ ಕೆರೆ ಮತ್ತು ಸಮುದ್ರದ ಕೆರೆಗಳಿಗೆ ವಿಷಪೂರಿತ ರಾಸಾಯಿನಿಕ ಮಿಶ್ರಣ ಮಾಡಿದ್ದು, ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮಕ್ಕೆ ಮುಂದಾಗಬೇಕು ಹಾಗೂ ಕೆರೆಯನ್ನು ಸ್ವಚ್ಛಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಶೀರುದ್ದೀನ್ ಅವರು ಜಿಲ್ಲಾಧಿಕಾರಿ ನಿತೀಶ್ ಕೆ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಮಲಿಯಾಬಾದ್ ಗ್ರಾಮದ ಮಲ್ಲಾರ ಕೆರೆ ಮತ್ತು ಸಮುದ್ರ ಎಂಬ ಎರಡು ಕೆರೆಗಳು ರೈತರ ಜೀವನ ಹಾಗೂ ದನಕರುಗಳಿಗೆ ಕುಡಿಯಲು ಆಧಾರವಾಗಿವೆ. ಯಾರೋ ದುಷ್ಕರ್ಮಿಗಳು ವಿಷ ಪೂರಿತ ರಾಸಾಯಿನಿಕ ಕೆರೆಗೆ ಹಾಕಿರುವುದರಿಂದ ನೀರು ಅಶುದ್ದವಾಗಿದೆ ಹಾಗೂ ನೀರಿನ ಬಣ್ಣ ಸಂಪೂರ್ಣ ಹಸಿರಾಗಿದ್ದು, ಇದರಿಂದಾಗಿ ಮಲಿಯಾಬಾದ್ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ರೈತರು ಭಯಭೀತರಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಕೆರೆಯ ನೀರು ಹಸಿರು ಬಣ್ಣಕ್ಕೆ ತಿರುಗಿರುವುದನ್ನು ನೋಡಿ ದನಕರುಗಳು ಕುಡಿದರೆ ಸಾವು ಸಂಭವಿಸುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ಇದನ್ನು ಸ್ವಚ್ಛಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೂಡಲೇ ಜಿಲ್ಲಾಧಿಕಾರಿಗಳು, ಸಣ್ಣ ನೀರಾವರಿ ಇಲಾಖೆ , ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿಗಳು , ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಗಮನಹರಿಸಿ ಸ್ಥಳಕ್ಕೆ ಭೇಟಿ ನೀಡಬೇಕು. ನೀರಿನ ತಪಾಸಣೆ ಮಾಡಿ ದನಕರುಗಳಿಗೆ ಕುಡಿಯಲು ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ಇದನ್ನು ಓದಿದ್ದೀರಾ? ತಮಿಳುನಾಡು | ಸದ್ಗುರು ಜಗ್ಗಿಯ ಇಶಾ ಫೌಂಡೇಶನ್‌ಗೆ 150 ಪೊಲೀಸರ ದಾಳಿ – ಪರಿಶೀಲನೆ

ಈ ಬಾರಿ ಮಳೆಗಾಲ ಹೆಚ್ಚಿನ ಪ್ರಮಾಣದಲ್ಲಿ ಆಗಿದ್ದರಿಂದ ಎರಡು ಕೆರೆಗಳು ತುಂಬಿ ತುಳುಕುತ್ತಿದೆ. ಆದರೆ ದುಷ್ಕರ್ಮಿಗಳು ನೀರಿಗೆ ವಿಷಪೂರಿತ ಕೆಮಿಕಲ್ ಸುರಿದಿರುಂತೆ ಕಂಡು ಬರುತ್ತಿದೆ. ಕೂಡಲೇ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದ್ದಾರೆ. ಅಲ್ಲದೇ, ಕೆರೆಯ ನೀರಿನ ಮಾದರಿ(ಸ್ಯಾಂಪಲ್‌) ಅನ್ನು ಕೂಡ ಜಿಲ್ಲಾಧಿಕಾರಿಗಳಿಗೆ ಇದೇ ವೇಳೆ ನೀಡಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...