ರಾಯಚೂರು | ಚಿಕ್ಕಲಪರ್ವಿ ಬ್ರಿಡ್ಜ್ ಕಮ್ ಬ್ಯಾರೇಜ್ ಕಾಮಗಾರಿ ಶೀಘ್ರವೇ ಆರಂಭ: ಸಚಿವ ಬೋಸರಾಜು

Date:

ಕರ್ನಾಟಕ ಮತ್ತು ಆಂಧ್ರಪ್ರದೇಶಕ್ಕೆ ಕಡಿಮೆ ಅಂತರದಲ್ಲಿ ಸಂಪರ್ಕ ಕಲ್ಪಿಸುವ ತುಂಗಭದ್ರಾ ನದಿಗೆ ಅಡ್ಡಲಾಗಿ ಚಿಕ್ಕಲಪರ್ವಿ ಬಳಿ ಬಂದರು ಸಹಿತ ಸೇತುವೆ ನಿರ್ಮಾಣಕ್ಕೆ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಮಂಜೂರಾತಿ ದೊರಕಿದ್ದು, ಶೀಘ್ರದಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಬೋಸರಾಜು ಹೇಳಿದರು.

ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಚಿಕ್ಕಲಪರ್ವಿ ಬಳಿ ತುಂಗಭದ್ರಾ ನದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಂತರ ಮಾತನಾಡಿದ ಅವರು, ಅಡ್ಡಲಾಗಿ ಬಂದರ್ ಸೇತುವೆ ನಿರ್ಮಾಣ ಮಾಡಲು ಕಳೆದ ಬಜೆಟ್‌ನಲ್ಲಿ ಘೋಷಣೆ ಮಾಡಿದನ್ವಯ 397.50 ಕೋಟಿ ವೆಚ್ಚದ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದರು.

ಸಿಂಧನೂರು – ಮಾನ್ವಿ ಮಾರ್ಗವಾಗಿ ಆಂಧ್ರಪ್ರದೇಶದ ಮಂತ್ರಾಲಯ, ಆದೋನಿ, ಕರ್ನೂಲ್ ಹಾಗೂ ಬೆಂಗಳೂರಿಗೆ ಪ್ರಯಾಣ ಬೆಳೆಸುವವರಿಗೆ ಮೊದಲು ಸುತ್ತು ಹಾಕಿ ಹೋಗಬೇಕಾಗಿತ್ತು. ಆದರೆ ಚಿಕ್ಕಲಪರ್ವಿ ಸೇತುವೆ ನಿರ್ಮಾಣವಾಗುವುದರಿಂದ ಈ ಮಾರ್ಗವಾಗಿ ಸಂಚಾರದ ಪ್ರಯಾಣ ಕಡಿಮೆಯಾಗಲಿದ್ದು, ಸಮಯ ಹಾಗೂ ಹಣದ ಉಳಿತಾಯ ಆಗಲಿದೆ. ಆ ಮೂಲಕ ಜನರಿಗೆ ಅನುಕೂಲವಾಗಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಡಿಯುವ ನೀರು, ಅಂತರ್ಜಲ ಅಭಿವೃದ್ಧಿಗೂ ಪ್ರಯೋಜನವಾಗಲಿದೆ. ಹೀಗಾಗಿ ತಮ್ಮ ಇಲಾಖೆಯಿಂದ ಕೈಗೆತ್ತಿಕೊಂಡ 397 ಕೋಟಿ. ರೂ. ಮೊತ್ತದ ಯೋಜನೆಗೆ ಸಂಪುಟ ಅನುಮೋದನೆ ನೀಡಿದೆ. ನಿರ್ಮಾಣ ಮಾಡಲು ಉದ್ದೇಶಿಸಿರುವ ಬಂದರು ಸಮೇತ ಸೇತುವೆ ಮೂಲಕ ಸಂಚರಿಸಿದರೆ ದೂರ ಕಡಿಮೆಯಾಗಲಿದ್ದು, ಸಂಚಾರದ ಸಮಯ ಸಹ ಉಳಿಯಲಿರುವ ಕಾರಣ ಬಹುದಿನದ ಈ ಭಾಗದ ಜನರ ಬೇಡಿಕೆಗೆ ಸಂಪುಟ ಈಡೇರಿಸಿದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ರಾಯಚೂರು | ಸಹಜ ಸಾವಿಗಿಂತ ಅಧಿಕ ಮಂದಿ ರಸ್ತೆ ಅಪಘಾತದಲ್ಲಿ ಸಾಯುತ್ತಿದ್ದಾರೆ : ಎಸ್‌ಪಿ ಪುಟ್ಟಮಾದಯ್ಯ

ಸರ್ಕಾರಕ್ಕೆ ಬಂದರು ಸಮೇತ ಸೇತುವೆ ನಿರ್ಮಾಣ ಮಾಡಲು ಈ ಭಾಗದ ಜನರ ಬೇಡಿಕೆ ಈಡೇರಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗಿತ್ತು. ಅದರನ್ವಯ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಂಡು ಸಂಪುಟದಲ್ಲಿ ಅನುಮೋದನೆ ಪಡೆಯಲಾಗಿದೆ ಎಂದು ಸಚಿವ ಎನ್.ಎಸ್ ಬೋಸರಾಜು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಹಂಪಯ್ಯ ನಾಯಕ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಶಾತಂಪ್ಪ, ಗಪೂರ್ ಸಾಬ್, ದೊಡ್ಡ ಬಸಪ್ಪಗೌಡ, ಅಕ್ಬರ ಪಾಷ, ಎ.ಬಾಲಸ್ವಾಮಿ ಕೊಡ್ಲಿ, ಶರಣಯ್ಯ ನಾಯಕ, ಖಾಲಿದ್ ಖಾದ್ರಿ, ಬಿ.ಕೆ. ಅಮರೇಶಪ್ಪ, ರಾಜಾ ಸುಭಾಷ ಚಂದ್ರ ನಾಯಕ, ಕೆ. ಬಸವಂತಪ್ಪ, ಚಂದ್ರಶೇಖರ ಕುರ್ಡಿ, ತಿಪ್ಪಣ ಬಾಗಲವಾಡ, ಹನುಮೇಶ ಮದ್ಲಾಪೂರು, ದೇವೇಂದ್ರಪ್ಪ್ಪ, ಸಲಾಂ ಪಾಷ, ಸಬ್ಜಲಿ ಸಾಬ್, ಶರಣಬಸವ ಗವಿಗಟ್ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...