ರಾಯಚೂರು | ಎಡೆದೊರೆ ನಾಡು ಜಿಲ್ಲಾ ಉತ್ಸವದ ಅಂಗವಾಗಿ ಫೆ.2 & 3 ರಂದು ಮಕ್ಕಳ ಹಬ್ಬ; ಕೃಷ್ಣ ಶಾವಂತಗೇರಾ

Date:

ಎಡೆದೊರೆ ನಾಡು ಜಿಲ್ಲಾ ಉತ್ಸವದ ಅಂಗವಾಗಿ ಫೆಬ್ರವರಿ ೨ ಮತ್ತು ೩ ರಂದು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಮಕ್ಕಳ ಹಬ್ಬವನ್ನು ಆಯೋಜಿಸಲಾಗಿದೆ ಎಂದು ಉತ್ಸವ ಸಮಿತಿ ಸದಸ್ಯ ಕೃಷ್ಣ ಶಾವಂತಗೇರಾ ತಿಳಿಸಿದರು.

ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ದಿನಗಳ ಮಕ್ಕಳ ಹಬ್ಬಕ್ಕೆ ಜಿಲ್ಲೆಯ ಪ್ರತಿಯೊಂದು ತಾಲೂಕಿನಿಂದ ಐದು ವಾಹನಗಳ ಮೂಲಕ ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳನ್ನು ಕರೆತರಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು. ಫೆ. ೨ ರಂದು ಜಿಲ್ಲಾ ಉಸ್ತುವಾರಿ ಸಚಿವರು ಮಕ್ಕಳ ಹಬ್ಬಕ್ಕೆ ಚಾಲನೆ ನೀಡಲಿದ್ದು, ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ವಿವಿಧ ಮನರಂಜನಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಮಕ್ಕಳ ಹಬ್ಬದ ಅಂಗವಾಗಿ ರೋಬೋಟಿಕ್ ಶೋ, ಕುದ್ರೋಳಿ ಗಣೇಶ ಅವರಿಂದ ಜಾದೂ ಪ್ರದರ್ಶನ ನಡೆಯಲಿದ್ದು, ನಾಲ್ಕು ಹಂತಗಳಲ್ಲಿ ಮುಖವಾಡ ತಯಾರಿ, ಗೂಡುದೀಪ, ಮಣ್ಣಿನ ಮೂರ್ತಿ ನಿರ್ಮಾಣ ಕಾರ್ಯಾಗಾರಗಳನ್ನು ಆಯೋಜಿಸಲಾಗಿದೆ. ಸಂಜೆ ನಾಲ್ಕು ಗಂಟೆಗೆ ಮಾವಿನ ಕೆರೆ ಬಳಿ ಕೆರೆ ಹಬ್ಬ ನಡೆಯಲಿದ್ದು, ಪಟಾಕಿ ಹಾರಾಟ, ಗಾಳಿಪಟ ಪ್ರದರ್ಶನಗಳು ನಡೆಯಲಿವೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಲ್ಲದೆ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ನೃತ್ಯಗಳು, ಆಟೋಟಗಳು ನಡೆಯಲಿದ್ದು, ಅಶೋಕ ಪಳಲಿ ಅವರಿಂದ ಕೋಳಿ ನೃತ್ಯ ಹಾಗೂ ವರ್ಚುವಲ್ ಶೋಗಳಿಗೂ ವ್ಯವಸ್ಥೆ ಮಾಡಲಾಗಿದೆ ಎಂದರು. ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಸಹಕಾರದೊಂದಿಗೆ ಎರಡು ದಿನಗಳ ಕಾಲ ಮಕ್ಕಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಮಕ್ಕಳು ಹಾಗೂ ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳ ಹಬ್ಬವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕತ್ತು ಕೊಯ್ದು ಸೊಸೆಯನ್ನು ಕೊಂದ ಮಾವ

ಈ ಸಂದರ್ಬದಲ್ಲಿ ಡಯಟ್ ಕಾಲೇಜಿನ ಪ್ರಾಚಾರ್ಯ ಚಂದ್ರಶೇಖರ ಭಂಡಾರಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ರೆಡ್ಡಿ, ಪ್ರೌಢಶಾಲಾ ಶಿಕ್ಷಕರ ಸಂಘದ ಹಕ್, ಖಾಸಗಿ ಶಾಲೆಗಳ ಆಡಳಿತ ಮಂಡಳಿ ಅಧ್ಯಕ್ಷ ಕೇಶವರೆಡ್ಡಿ, ರಾಜಾ ಶ್ರೀನಿವಾಸ, ಎಸ್.ಕೆ.ನಾಗಿರೆಡ್ಡಿ, ಶೇಖರ ರಾಂಪೂರ, ರವಿ ಮನ್ಸಲಾಪುರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...