ರಾಯಚೂರು | ಹಟ್ಟಿ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಏ.2ರಂದು ಸಿಐಟಿಯು ಪ್ರತಿಭಟನೆ

Date:

ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿಯ ಭೂ ಕೆಳಮೈನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಕ್ರಮವಹಿಸಬೇಕು ಎಂದು ಆಗ್ರಹಿಸಿ ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯುನಿಯನ್‌ (ಸಿಐಟಿಯು) ಏ.2ರಂದು ಪ್ರತಿಭಟನಾ ಧರಣಿ ಆಯೋಜಿಸಿದೆ.

ಹಟ್ಟಿಯ ಭೂ ಕೆಳಮೈನಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರು ನಿರಂತರ ಕೃತಕ ವಿಷ ಗಾಳಿ, ಧೂಳು ಸೇವನೆಯಿಂದ ಹೃದಯ ಸಂಬಂಧೀ ರೋಗ, ಬಿಪಿ, ಶುಗರ್‌, ಪ್ಯಾರಾಲಿಸಿಸ್‌ ಸಿಲಿಕೋಸಿಸ್‌ ಸೇರಿದಂತೆ ನಾನಾ ಬಗೆಯ ಭಯಂಕರ ಮಾರಣಾಂತಿಕ ರೋಗಗಳಿಗೆ ತುತ್ತಾಗುತ್ತಿದ್ದು, ಅವರಿಗೆ ಸೂಕ್ತ ಆರೋಗ್ಯ ತಪಾಸಣೆ, ಚಿಕಿತ್ಸೆ, ವಿಮೆಯಂತಹ ಪರಿಹಾರಗಳನ್ನು ರೂಪಿಸಬೇಕು. ಕಾರ್ಮಿಕರ ಮಕ್ಕಳಿಗೆ ಉದ್ಯೋಗ ನೀಡಬೇಕು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಸಿಐಟಿಯು ಮುಖಂಡರು, ಕಂಪನಿಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ಬಹದ್ದೂರು ಅವರಿಗೆ ಮನವಿ ಸಲ್ಲಿಸಿದರು.

ಗಣಿ ಅಡಳಿತ ಮಂಡಳಿ ನಿರ್ದೇಶಕರ ಮಂಡಳಿ ಸಭೆಯಲ್ಲಿ ಯಾವುದೇ ಷರತ್ತುಗಳನ್ನು ವಿಧಿಸದೆ ಅನುಮೋದನೆ ಪಡೆದು ಗಣಿ ಕಾರ್ಮಿಕರ ಮಕ್ಕಳಿಗೆ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿ ಏ.2ರಂದು ಹಟ್ಟಿಯ ಕ್ಯಾಂಪ್ (ಹಳೆ ಬಸ್ ನಿಲ್ದಾಣ)ನಲ್ಲಿ ಬಹಿರಂಗ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಈ ವೇಳೆ ಸಿಐಟಿಯು ತಾಲೂಕು ಮುಖಂಡ ರಮೇಶ ವೀರಾಪೂರು, ತಾಲೂಕು ಸಂಚಾಲಕ ಹನೀಫ್, ಹಟ್ಟಿ ಘಟಕದ ಅಧ್ಯಕ್ಷ ಫಕ್ರುದ್ದೀನ್, ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಗೋರ್ಕಲ್, ಸಹ ಕಾರ್ಯದರ್ಶಿಗಳಾದ ಅಲ್ಲಾಬಕ್ಷ ದೇವಪೂರು, ಎಂ.ಡಿ. ರಫಿ ಕೆ, ಲಿಂಗಸೂರು, ಶ್ರೀಧರ್ ಪೆಂಚಲಯ್ಯ, ಅಮರೇಶ, ರಾಜರತ್ನಂ, ಮಲ್ಲಿಕಾರ್ಜುನ್, ಅಲ್ಲಾಭಕ್ಷ ಸಾಶಿಹಾಳ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...