ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

Date:

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ, ಹಾದಿ ಕಾಲೋನಿ ಹಾಗೂ ಶಾಂತಿ ಕಾಲೋನಿಗಳ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ನೆರವೇರಿಸಲಾಯಿತು.

ಸುಮಾರು 3.00 ಕೋಟಿ ರೂಪಾಯಿಗಳ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಯೋಜನೆಯ ಅನುದಾನದಡಿ ಕೈಗೊಳ್ಳಲಾಗಿರುವ ಈ ಕಾಮಗಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ ಮತ್ತು ನಗರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಶಿವರಾಜ ಪಾಟೀಲ್ ಭಾನುವಾರ ಅಡಿಗಲ್ಲು ಇಟ್ಟರು.

ಕಾಮಗಾರಿ ಉದ್ಘಾಟಿಸಿ ಮಾತನಾಡಿದ ಎ.ವಸಂತಕುಮಾರ ಅವರು ರಾಯಚೂರು ನಗರದಲ್ಲಿ ಹಲವಾರು ಬಡಾವಣೆಗಳು ಮೂಲಭೂತ ಸೌಕರ್ಯಗಳಿಂದ ವಂಚಿತಗೊಂಡಿವೆ. ಆದ್ದರಿಂದ‌ ಹಂತ ಹಂತವಾಗಿ ಮೂಲಭೂತ ಸೌಕರ್ಯ ಒದಗಿಸಲಾಗುವುದು ಎಂದು ಹೇಳಿದರು.

ಸದರಿ ಬಡಾವಣೆಗಳಲ್ಲಿ ದಶಕಗಳಿಂದ ಮೂಲಭೂತ ಸೌಕರ್ಯಗಳಿಲ್ಲದೇ ಜನತೆ ಸಂಕಷ್ಟ ಅನುಭವಿಸುತ್ತಿರುವುದನ್ನು ಪರಿಶೀಲಿಸಿ ಸರಕಾರದಿಂದ ಅಲ್ಪಸಂಖ್ಯಾತ ಕಾಲೋನಿ ಅಭಿವೃದ್ಧಿ ಯೋಜನೆಯಡಿಯಲ್ಲಿ ಸುಮಾರು 3.00 ಕೋಟಿ‌ ರೂ ಅನುದಾನ ಮಂಜೂರು ಮಾಡಿ ಕಾಮಗಾರಿಗೆ ಅಡಿಗಲ್ಲು ಹಾಕಲಾಯಿತು. ಇನ್ನು ಸ್ಥಳೀಯವಾಗಿ ಮತಗಟ್ಟೆ ಕೇಂದ್ರ ಸ್ಥಾಪನೆ, ಕುಡಿಯುವ ನೀರಿನ ಸಮಸ್ಯೆ ಹಾಗೂ ಒಳಚರಂಡಿ ಸಮಸ್ಯೆಗಳನ್ನೂ ಸಹ ಆದಷ್ಟು ಬೇಗ ಬಗೆಹರಿಸುವುದಾಗಿ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ನವಜಾತ ಶಿಶು ಪತ್ತೆ : ಜಿಲ್ಲೆಯಲ್ಲಿ ಮೂರು ಪ್ರಕರಣಗಳು

ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರ ಡಾ.ರಝಾಕ ಉಸ್ತಾದ, ನಗರಸಭೆ ಸದ್ಯರಾದ ತಮ್ಮಪ್ಪ ನಾಯಕ, ಬಸವರಾಜ ದರೂರು, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಬ್ದುಲ್ ಕರೀಮ, ಮೊಹಮ್ಮದ ಉಸ್ಮಾನ, ಮುರಳಿ ಯಾದವ, ಶ್ರಿನಿವಾಸ ಶಿಂದೆ, ಅಂಜಿನಯ್ಯ ಹಾಗೂ ಸ್ಥಳಿಯ ನಿವಾಸಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...