ಭ್ರಷ್ಟರನ್ನು ಜೈಲಿಗೆ ಕಳಿಸುವುದಾಗಿ ಹೇಳಿದ್ದ ಸಿಎಂ ಸಿದ್ದರಾಮಯ್ಯ ಮೌನವಾಗಿದ್ದಾರೆ; ಜೆಡಿಎಸ್ ಆರೋಪ

Date:

ನಾರಾಯಣಪುರ ಬಲದಂಡೆ ನಾಲೆ (ಎನ್‌ಆರ್‌ಬಿಸಿ) ಕಾಮಗಾರಿಯಲ್ಲಿ ಅಕ್ರಮ ಎಸಗಿದ ಮಾನಪ್ಪ ವಜ್ಜಲ್ ಮತ್ತು ದೇವದುರ್ಗದ ಮಾಜಿ ಶಾಸಕ ಕೆ ಶಿವನಗೌಡ ನಾಯಕ ಅವರನ್ನು ಜೈಲಿಗೆ ಕಳುಹಿಸುವದಾಗಿ ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ನ್‌ಆರ್‌ಬಿಸಿ ಅಕ್ರಮದ ವಿಚಾರದಲ್ಲಿ ಅವರು ಮೌನವಾಗಿದ್ದಾರೆ ಎಂದು ಜೆಡಿಎಸ್‌ ಕಾರ್ಯಾಧ್ಯಕ್ಷ ಹನುಮಂತಪ್ಪ ಆಲ್ಕೋಡ್ ಆರೋಪಿಸಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಚುನಾವಣಾ ಪ್ರಚಾರಕ್ಕಾಗಿ ರಾಯಚೂರಿಗೆ ಬಂದಿದ್ದ ಸಿದ್ದರಾಮಯ್ಯ, ‘ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಎನ್‌ಆರ್‌ಬಿಸಿ ಕಾಮಗಾರಿಯಲ್ಲಿ ಅಕ್ರಮ ಎಸಗಿದವರನ್ನು 24 ಗಂಟೆಯಲ್ಲಿ ಜೈಲಿಗೆ ಕಳಿಸುತ್ತೇವೆ’ ಎಂದಿದ್ದರು. ಆದರೆ, ಭ್ರಷ್ಟಾಚಾರ ಮಾಡಿದವರ ವಿರುದ್ಧ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಆರೋಪಿಸಿದರು.

“ನಾರಾಯಣಪುರ ಬಲದಂಡೆ ಕಾಲುವೆ ಅಧುನೀಕರಣದಹೆಸರಿನಲ್ಲಿ ಮುಖ್ಯ ಕಾಲುವೆ ಹಾಗೂ ಉಪ ಕಾಲುವೆ ಟೆಂಡರ್‌ನಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್‌ ನಾಯಕರೇ ಆರೋಪಿಸಿದ್ದರು. ಈಗ ಅವರೇ ಮೌನವಾಗಿದ್ದಾರೆ. ಈ ಮೌನಕ್ಕೆ ಕಾರಣವೇನು” ಎಂದು ಅವರು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ರಾಮ ಪಂಚಾಯ್ತಿಗಳು ಕುಡಿಯುವ ನೀರಿನ ಟ್ಯಾಂಕ್ ಸ್ವಚ್ಚಗೊಳಿಸದೇ ಇರುವದರಿಂದ ಜನರು ಕಲುಷಿತ ನೀರು ಕುಡಿಯುವಂತಾಗಿದೆ. ಸರ್ಕಾರ ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಸುತ್ತಿಲ್ಲ” ಎಂದು ಕಿಡಿಕಾರಿದರು.

“ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್‌ನಲ್ಲಿ ಜಿಲ್ಲೆಯೇ ಯಾವುದೇ ಅನುದಾನ ನೀಡಿಲ್ಲ. 5ಎ ಕಾಲುವೆ, 6ಎ ಕಾಲುವೆ ವಿಸ್ತರಣೆ ಹಾಗೂ ಇತರೆ ನೀರಾವರಿ ಯೋಜನೆಗಳ ಸಮಸ್ಯೆ ನಿವಾರಿಸಿಗೆ ಅನುದಾನ ನೀಡಿಲ್ಲ. ಕೇವಲ ಐದು ಗ್ಯಾರಂಟಿ ಯೋಜನೆಗಳಿಗೆ ಮಹತ್ವ ನೀಡಲಾಗಿದೆ. ಉಳಿದೆಲ್ಲವನ್ನು ಮರೆತು ಬಿಟ್ಟಿದ್ದಾರೆ” ಎಂದು ದೂರಿದರು.

“ರಾಯಚೂರು ಜಿಲ್ಲೆಯಲ್ಲಿ ಕೆಲಸವಿಲ್ಲದೇ ಜನರು ಗುಳೆ ಹೋಗುತ್ತಿದ್ದಾರೆ. ಮಳೆ ಕಡಿಮೆಯಾಗಿದ್ದು, ಬರಗಾಲ ಪರಸ್ಥಿತಿಯಿದ್ದರೂ ಇನ್ನೂ ಬರ ಘೋಷಣೆ ಮಾಡಿಲ್ಲ. ಪರಿಹಾರ ಕಾರ್ಯ ಕೈಗೊಳ್ಳಲು ಸರ್ಕಾರ ಮುಂದಾಗುತ್ತಿಲ್ಲ. ಈ ಬಗ್ಗೆ ಸದನದಲ್ಲಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನವನ್ನೂ ಜಿಲ್ಲೆಯ ಶಾಸಕರು ಮಾಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ಅಧಿಕಾರಿಗಳು ಯಾರೂ ಕೂಡ ಜನರ ಕೆಲಸ ಮಾಡದೇ ಬೆಂಗಳೂರಿಗೆ ತೆರಳುತ್ತಿದ್ದಾರೆ. ವರ್ಗಾವಣೆ ಅನಿರ್ವಾಯವಾದರೂ ಪರಸ್ಥಿತಿ ಗಂಭೀರತೆ ಅರಿತು ಸರ್ಕಾರ ಕಾರ್ಯನಿರ್ವಹಿಸಬೇಕು. ಎಸ್‌ಇಪಿ ಮತ್ತು ಟಿಎಸ್‌ಪಿ ಅನುದಾನದಲ್ಲಿ ಭಾರಿ ಭ್ರಷ್ಟಚಾರ ನಡೆದಿದೆ. ಶೀಘ್ರದಲ್ಲಿ ದಾಖಲೆ ಸಹಿತ ಬಹಿರಂಗಪಡಿಸುತ್ತೇವೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...