ರಾಯಚೂರು | ಸಿಎಂ ಪ್ರವಾಸ ರದ್ದು – ಹಟ್ಟಿ ಚಿನ್ನದ ಗಣಿಯಲ್ಲಿ ಸಮಾರಂಭ ಮುಂದೂಡಿಕೆ

Date:

ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ಗಣಿ ಕಾರ್ಮಿಕರ ಸಮುಚ್ಚಯ ಅಡಿಗಲ್ಲು ಹಾಗೂ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಸಿ.ಎಂ ಸಿದ್ದರಾಮಯ್ಯ ಕಾರ್ಯಕ್ರಮ ಹವಾಮಾನ ವೈಪರೀತ್ಯದಿಂದ ರದ್ದುಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿ ಕೆ.ಚಿರಂಜೀವಿ ಅವರು ಪ್ರಕಟಣೆ ಮೂಲಕ ತಿಳಿಸಿದ್ದು ವರದಿಯಾಗಿದೆ.

ಸುಮಾರು 998 ರೂ ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಸಣ್ಣ ನೀರಾವರಿ ಸಚಿವ ಎನ್ ಎಸ್ ಬೋಸರಾಜು ಸೇರಿದಂತೆ ವಿವಿಧ ಇಲಾಖೆಯ ಸಚಿವರು ಹಾಗೂ ಗಣ್ಯರು ಆಗಮಿಸುತ್ತಿದ್ದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಹಟ್ಟಿ ಪಟ್ಟಣದಲ್ಲಿ ಸಂಜೆ 5:30 ರಿಂದ ರಾತ್ರಿ 7 ಗಂಟೆಯವರೆಗೆ ಸತತ ಮಳೆ ಸುರಿದಿದೆ ಹಾಗೂ ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯಲ್ಲಿ ಮುಂದಿನ 5 ದಿನ ಮಳೆ ಸುರಿಯಲಿದ್ದು ಹವಾಮಾನ ಇಲಾಖೆಯಿಂದ ಎಲ್ಲೋ ಅಲೆರ್ಟ್ ಎಂದು ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರ ಕೊಪ್ಪಳ ಹಾಗೂ ರಾಯಚೂರು ಜಿಲ್ಲಾ ಪ್ರವಾಸ ರದ್ದುಪಡಿಸಲಾಗಿದೆ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...