ರಾಯಚೂರು | ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಕಾಂಗ್ರೆಸ್ ನಾಯಕರಿಂದ ಸ್ವಾಗತ!

Date:

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶ ಚತುರ್ಥಿ ವಿಸರ್ಜನಾ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು ಮುಖ್ಯ ಅತಿಥಿಯಾಗಿ ಸ್ವಾಗತಿಸಿದ್ದು, ಸಾರ್ವಜನಿಕರಲ್ಲಿ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಛತ್ರಪತಿ ಶಿವಾಜಿ ಯುವಕರ ಸೇನೆ ಆಯೋಜಿಸಿರುವ ಗಣೇಶೋತ್ಸವ ಸಂಭ್ರಮಾಚರಣೆಯಲ್ಲಿ ಕಾಂಗ್ರೆಸ್ ನಾಯಕರೇ ಬಿಜೆಪಿ ಶಾಸಕರನ್ನು ಆಹ್ವಾನಿಸಿರುವುದು ಕಾಂಗ್ರೆಸ್‌ನ ಕೆಲವು ನಾಯಕರಲ್ಲಿ ಅಸಮಾಧಾನ ಉಂಟು ಮಾಡಿದೆ.

ಮಾನ್ವಿ ನಗರದಲ್ಲಿ ವಿವಿಧ ಮುಖ್ಯ ರಸ್ತೆಗಳಲ್ಲಿ ಹರೀಶ್ ಪೂಂಜಾ ಅವರನ್ನು ಸ್ವಾಗತಿಸಿ ಹಾಕಿರುವ ಫ್ಲೆಕ್ಸ್‌ನಲ್ಲಿ ಜಿಲ್ಲೆಯ ಸಚಿವರಾದ ಎನ್ ಎಸ್ ಬೋಸರಾಜ, ಅವರ ಮಗ ರವಿ ಬೋಸರಾಜ್, ಮಾನ್ವಿ ಶಾಸಕ ಹಂಪಯ್ಯ ನಾಯಕ, ಎಂಎಲ್‌ಸಿ ಬಸನಗೌಡ ಬಾದರ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಮುಖ್ಯ ಸಂಘಟಕರಾಗಿರುವ ಎಂಎಲ್‌ಸಿ ಬಸನಗೌಡ ಬಾದರ್ಲಿ ಹಾಗೂ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಸಹಪಾಠಿಗಳು(ಕ್ಲಾಸ್‌ಮೇಟ್ಸ್‌) ಎನ್ನಲಾಗಿದೆ. ಹೀಗಾಗಿ, ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕರೆದಿದ್ದಾರೆ ಎಂಬ ಮಾತುಗಳು ಸ್ಥಳೀಯವಾಗಿ ಕೇಳಿಬಂದಿದೆ.

ಸದಾ ವಿವಾದಾತ್ಮಕ ಹೇಳಿಕೆ ಹಾಗೂ ಮುಸ್ಲಿಂ ಸಮುದಾಯ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕರ ವಿರುದ್ಧ ದ್ವೇಷ ಭಾಷಣ ಮಾಡುವುದರಿಂದಲೇ ಗುರುತಿಸಿಕೊಂಡಿರುವ ಬಿಜೆಪಿಯ ಶಾಸಕ ಹರೀಶ್ ಪೂಂಜಾರನ್ನು ಕಾಂಗ್ರೆಸ್ ನಾಯಕರು ಫ್ಲೆಕ್ಸ್ ಹಾಕಿ ಸ್ವಾಗತ ಕೋರಿರುವುದು, ವ್ಯಾಪಕ ಆಕ್ರೋಶಕ್ಕೂ ವ್ಯಕ್ತವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...