ರಾಯಚೂರು | ವಿದ್ಯುತ್‌ ದರ ಏರಿಕೆ ಹಿಂಪಡೆಯುವಂತೆ ಆಗ್ರಹ

Date:

ಎಪಿಎಂಸಿ ಕಾಯ್ದೆ ತಿದ್ದುಪಡಿ ಹಿಂಪಡೆಯಬೇಕು ಮತ್ತು ಕೆಇಆರ್‌ಸಿ ಹಾಗೂ ಕರ್ನಾಟಕ ವಿದ್ಯುತ್ ನಿಗಮಗಳು ವಿದ್ಯುತ್ ಶುಲ್ಕ ಹೆಚ್ಚಿಸಿರುವುನ್ನು ಸರ್ಕಾರ ಕೈಬಿಡಬೇಕು ಎಂದು ಒತ್ತಾಯಿಸಿ ಕಾಟನ್ ಮಿಲ್ಲರ್ಸ್ ಅಸೋಸಿಯೇಷನ್ ವತಿಯಿಂದ ರಾಯಚೂರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಲಾಯಿತು.

“ಹತ್ತಿ ಗಿರಣಿದಾರರಿಗೆ ಕೃಷಿ ಮಾರುಕಟ್ಟೆಯ ಯಾವುದೇ ಸೌಕರ್ಯದ ಬಳಕೆ ಅವಶ್ಯಕತೆ ಇಲ್ಲವಾದ್ದರಿಂದ ಹತ್ತಿ ಗಿರಣಿ  ಉದ್ದಿಮೆದಾರರನ್ನು ಕಾಯ್ದೆಯ ವ್ಯಾಪ್ತಿಯಿಂದ ಹೊರಗಿಡಬೇಕು” ಎಂದು ಪ್ರತಿಭಟನಾಕಾರರು ಮನವಿ ಮಾಡಿದರು.

“ರಾಜ್ಯದ ರೈತರಿಗೆ ಮತ್ತು ಸಣ್ಣ ಕೈಗಾರಿಕೆಗಳಾದ ಹತ್ತಿ ಗಿರಣಿಗಳ ಹಿತಾಸಕ್ತಿಗೆ ಪ್ರತಿಕೂಲವಾಗಿದ್ದಲ್ಲಿ ಹತ್ತಿಗಿರಣಿಗಳು ಕಾರ್ಯನಿರ್ವಹಿಸದೇ ಸ್ಥಗಿತಗೊಳ್ಳುವ ಅನಿವಾರ್ಯತೆ ಸೃಷ್ಟಿಯಾಗುತ್ತದೆ.  ಅನುಕೂಲ ಮತ್ತು ಅನಾನುಕೂಲಗಳ ಬಗ್ಗೆ ಚರ್ಚಿಸಲು ಕಾಯ್ದೆಯನ್ನು ತಿದ್ದುಪಡಿ ಮಾಡುವ ಮೊದಲು ಸರ್ಕಾರದೊಂದಿಗೆ ಚರ್ಚಿಸಲು ಅವಕಾಶ ಕಲ್ಪಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೋವಿಡ್‌ನಿಂದಾಗಿ ಸಾಕಷ್ಟು ಇಂಡಸ್ಟ್ರಿಗಳಲ್ಲಿ ಉತ್ಪಾದನಾ ಚಟುವಟಿಕೆಗಳಿಲ್ಲದೆ ಬ್ಯಾಂಕ್‌ ಸಾಲ ಕಟ್ಟಲಾಗದೇ ಕೈಗಾರಿಕೋದ್ಯಮಿಗಳು ಬಹಳಷ್ಟು ತೊಂದರೆಗಳನ್ನು ಅನುಭವಿಸಿದ್ದು, ಸಾಕಷ್ಟು ನಷ್ಟ ಎದುರಿಸುವಂತಾಗಿದೆ. ಇದರಿಂದ ಹೊರಬರಲು ಬಹಳಷ್ಟು ಕಷ್ಟವಾಗಿದೆ” ಎಂದು ಅವಲತ್ತುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? 25 ಪೊಲೀಸರ ವರ್ಗಾವಣೆ ಕೋರಿ ಐಜಿಪಿಗೆ ಶಾಸಕ ಬಸವರಾಜ ರಾಯರೆಡ್ಡಿ ಪತ್ರ: ವರ್ಗಾವಣೆ ದಂಧೆ ಆರೋಪ

ಕೆಇಆರ್‌ಸಿ ಹಾಗೂ ಕರ್ನಾಟಕ ವಿದ್ಯುತ್ ನಿಗಮಗಳ ವತಿಯಿಂದ ವಿದ್ಯುತ್ ಬಿಲ್‌ಗಳ ದರಗಳನ್ನು ಹೆಚ್ಚಳ ಮಾಡಿದ್ದು, ಕೈಗಾರಿಕೋದ್ಯಮಗಳಿಗೆ ಹೊರೆಯಾಗಿದ್ದು, ಕೈಗಾರಿಕೆ ನಡೆಸುವುದು ಕಷ್ಟವಾಗಿದೆ. ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಕೂಡಲೇ ವಿದ್ಯುತ್ ದರ ಇಳಿಕೆ ಮಾಡಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕಾಟನ್ ಮಿಲ್ಲರ್ಸ್ ಅಸೋಸಿಯೇಷನ್ ಅಧ್ಯಕ್ಷ ವಿ ಲಕ್ಷ್ಮಿರೆಡ್ಡಿ, ಗೌರವ ಕಾರ್ಯದರ್ಶಿ ಶೈಲೇಶ್‌ಕುಮಾರ ದೋಖಾ, ಗಂಗಾಧರ, ಗೋಪಾಲ, ನಾಗನಗೌಡ ಹರವಿ ಮಂಜುನಾಥ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...