ರಾಯಚೂರು | ಮೈಕ್ರೋ ಫೈನಾನ್ಸ್ ವಿರುದ್ಧ ಕ್ರಮ ಜರುಗಿಸುವಂತೆ ಸಿಪಿಐಎಂಎಲ್‌ ಆಗ್ರಹ

Date:

ಮೈಕ್ರೋ ಫೈನಾನ್ಸ್ ಕಂಪೆನಿಗಳು ಭದ್ರತೆ ಇಲ್ಲದೇ ಅಮಾಯಕ ಮಹಿಳೆಯರಿಗೆ ನಕಲಿ ದಾಖಲಾತಿ ಸೃಷ್ಠಿ ಮಾಡಿ ಸಾಲ ನೀಡಿ, ಸಾಲ ಮರುಪಾವತಿಗಾಗಿ ಕಿರುಕುಳ ನೀಡುವ ಖಾಸಗಿ ಬ್ಯಾಂಕ್‌ಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಿಪಿಐಎಂಎಲ್ ಲಿಬರೇಶನ್ ವತಿಯಿಂದ ರಾಯಚೂರು ನಗರದ ಅಂಬೇಡ್ಕರ್ ಸರ್ಕಲ್‌ನಲ್ಲಿ ಪ್ರತಿಭಟಿಸಿದರು.

“ಫೈನಾನ್ಸ್ ಗುಂಪಿನಲ್ಲಿ ಹತ್ತು ಮಂದಿಯಿರುವ ಗುಂಪಿನಲ್ಲಿ, ಸಾಲ ಪಡೆದ ಒಬ್ಬರು ಮರುಪಾವತಿ ಮಾಡದಿದ್ದರೆ, ಉಳಿದ ಒಂಬತ್ತು ಮಂದಿಯವರ ಮನೆ ಮುಂದೆ ನಿಂತು ಸಾಲ ವಸೂಲಿ ಮಾಡಬೇಕಾಗುತ್ತದೆ. ಹೀಗೆ ಸಾಲ ಮರುಪಾವತಿ ಕಿರುಕುಳ ಶುರುವಾಗುತ್ತದೆ. ಇದರಿಂದ ಬೇಸತ್ತ ಸಾಲಗಾರರು ಆತ್ಮಹತ್ಯೆಗೆ ಗುರಿಯಾಗುತ್ತಿದ್ದಾರೆ” ಎಂದು ಸಿಪಿಐಎಂಎಲ್ ಲಿಬರೇಶನ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

“ಸಂಸ್ಥೆಗಳಿಂದ ನೇಮಕಗೊಂಡಿರುವ ವಸೂಲಿಗಾರರ ಕಿರುಕುಳ ಹಾಗೂ ದಾಳಿಯ ಕಾರಣಕ್ಕೆ ರಾಜ್ಯದಲ್ಲಿ ಹಲವು ನೆಲೆಯ ಹೋರಾಟಗಳು ಶುರುವಾಗಿವೆ. ಮೈಕ್ರೋ ಫೈನಾನ್ಸ್‌ ಹೆಸರಿನಲ್ಲಿ ಕೆಲವು ಬೃಹತ್‌ ಸಂಸ್ಥೆಗಳು ತಮ್ಮ ಕಪ್ಪುಹಣವನ್ನು ಬಿಳಿ ಮಾಡಿಕೊಳ್ಳುವ ಪ್ರಕ್ರಿಯೆಯಲ್ಲಿ ತೊಡಗಿವೆ. ಅಂತಹ ಹಲವು ಸಂಸ್ಥೆಗಳು ಮೈಕ್ರೋ ಫೈನಾನ್ಸ್‌ ಘಟಕಗಳನ್ನು ತೆರೆದು ಹಳ್ಳಿಗಳಿಗೆ ಲಗ್ಗೆ ಇಡುತ್ತಿವೆಂದು ಹೇಳಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅವಿಭಜಿತ ಆಂಧ್ರಪ್ರದೇಶದಲ್ಲಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಹಾವಳಿ ಮಿತಿಮೀರಿದ್ದರಿಂದ, 2010ರಲ್ಲಿ ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ನಿಯಂತ್ರಣ ಕಾಯ್ದೆಯನ್ನು ಜಾರಿಗೆ ತರಲಾಯಿತು. ಈ ಕಾಯ್ದೆಯ ಕಟ್ಟುನಿಟ್ಟಿನ ಅನುಷ್ಠಾನದಿಂದಾಗಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಆಂಧ್ರದಿಂದ ಕಾಲ್ಕಿತ್ತವು. ಅಂತಹ ಅನೇಕ ಸಂಸ್ಥೆಗಳು ಕರ್ನಾಟಕದಲ್ಲಿ ತಮ್ಮ ಅಂಗಡಿಗಳನ್ನು ತೆರೆದಿವೆ. ಮುಂಬರುವ ದಿನಗಳಲ್ಲಿ ನಮ್ಮ ರಾಜ್ಯದಲ್ಲಿಯೂ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಪಡೆದ ಸಾಲ ತೀರಿಸಲಾಗದೆ, ಸಾಲ ವಸೂಲಾತಿಯ ಕಟ್ಟುಪಾಡುಗಳಿಂದ ತೀವ್ರ ತೊಂದರೆ ಅನುಭವಿಸುವವರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ನಿಚ್ಚಳವಾಗಿದೆ. ಆಂಧ್ರ ಸರ್ಕಾರ ಜಾರಿಗೊಳಿಸಿದ ಮೈಕ್ರೋ ಫೈನಾನ್ಸ್‌ ನಿಯಂತ್ರಣ ಕಾಯ್ದೆಯ ಮಾದರಿಯಲ್ಲಿ ನಮ್ಮ ರಾಜ್ಯ ಸರ್ಕಾರವೂ ಈ ಫೈನಾನ್ಸ್‌ ಸಂಸ್ಥೆಗಳ ಚಟುವಟಿಕೆಗಳ ಮೇಲೆ ನಿಯಂತ್ರಣ ಹೇರಬೇಕಿದೆ” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಸರ್ಕಾರಿ ಶಾಲೆ ಮುಚ್ಚಲು ಮುಂದಾಗಿರುವ ಕಾಂಗ್ರೆಸ್‌ ನಡೆಗೆ ಎಐಡಿಎಸ್‌ಒ ವಿರೋಧ

ಮೈಕ್ರೋ ಫೈನಾನ್ಸ್ ಕಂಪನಿಗಳು ಭದ್ರತೆಯಿಲ್ಲದೆ ಅಮಾಯಕ ಮಹಿಳೆಯರಿಗೆ ನಕಲಿ ದಾಖಲಾತಿ ಸೃಷ್ಟಿಮಾಡಿ ಸಾಲ ನೀಡಿ, ಸಾಲ ಮರುಪಾವತಿಗಾಗಿ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಮೈಕ್ರೋ ಫೈನಾನ್ಸ್ ಖಾಸಗಿ ಬ್ಯಾಂಕ್‌ಗಳ ಎಷ್ಟು ಪರವಾನಗಿ ತೆಗೆದುಕೊಂಡಿದ್ದಾರೆ. ಎಷ್ಟು ಅನಧಿಕೃತವಾಗಿ ನಡೆಯುತ್ತಿವೆ ಎಂಬುದರ ಕುರಿತು ಸಮಗ್ರ ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿ ಬಂಧಿಸಬೇಕು” ಎಂದು ಆಗ್ರಹಿಸಿದರು.

ಈ ವೇಳೆ ಅಜೀಜ್ ಜಾಗಿರದಾರ, ಜಿಲ್ಲಾ ಕಾರ್ಯದರ್ಶಿ ನಾಗರಾಜ ಪೂಜಾರ್, ಚಾಂದಾಸಾಬ್ ಬೆಳ್ಳಿಗಿನೂರು ದೇವರಾಜ ಮಡಿವಾಳ, ಶ್ರೀನಿವಾಸ ಬುಕ್ಕನ್ನಟ್ಟಿ, ನರಸಮ್ಮ ಮಸ್ಕಿ, ಬಸವರಾಜ್ ಹಿರೇದಿನ್ನಿ, ರವಿ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...