ರಾಯಚೂರು | ಬೆಲೆ ಏರಿಕೆ ವಿರುದ್ಧ ಸಿಪಿಐಎಂಎಲ್ ಪ್ರತಿಭಟನೆ

Date:

ಕೇಂದ್ರದ ಎನ್‌ಡಿಎ ಒಕ್ಕೂಟ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರ ಮೇಲಿಂದ ಮೇಲೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡುತ್ತಿರುವುದನ್ನು ಖಂಡಿಸಿ ಸಿಪಿಐಎಂಎಲ್ ಲಿಬರೇಷನ್ ರಾಯಚೂರು ತಾಲೂಕು ಘಟಕ ಪ್ರತಿಭಟನೆ ನಡೆಸಿತು.

ನಿರಂತರ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸಿ ಹೋಗಿದ್ದಾರೆ. ಎರಡೂ ಸರ್ಕಾರಗಳು ಕೂಡಲೇ ಬೆಲೆ ಏರಿಕೆ ಹಿಂಪಡೆಯಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್‌ ಮೂಲಕ ಮನವಿ ಸಲ್ಲಿಸಲಾಯಿತು.

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ನಾನು ಮೇಲು ನೀನು ಮೇಲೆಂದು ಮನಬಂದಂತೆ ಇಂಧನ ಬೆಲೆ ಹೆಚ್ಚಿಸುವುದರಿಂದ ಸಾರಿಗೆ, ಸರಕು ಸಾಗಣೆ, ವ್ಯಾಪಾರ ವಹಿವಾಟು, ಕೃಷಿ, ಕೈಗಾರಿಕೆ ಸೇರಿ ಇನ್ನಿತರೆ ವಲಯಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದರಿಂದ ಜನಸಾಮಾನ್ಯರು ಮತ್ತಷ್ಟು ಸಂಕಷ್ಟ ಎದುರಿಸತ್ತಿದ್ದಾರೆ ಎಂದು ಸಂಘಟನೆಯ ಮುಖಂಡರು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಹಾಲು, ನೀರು, ವಿದ್ಯುತ್, ಡೀಸೆಲ್ ಮತ್ತು ಮೆಟ್ರೋ ದರ ಸೇರಿದಂತೆ ಹಲವಾರು ಅಗತ್ಯ ಸೇವೆಗಳ ಬೆಲೆ ಏರಿಕೆ ಮಾಡಿದೆ. ಜೊತೆಗೆ, ತ್ಯಾಜ್ಯ ಸಂಗ್ರಹ, ಟೋಲ್ ಶುಲ್ಕ ಮತ್ತು ಆಸ್ತಿ ತೆರಿಗೆಯ ಮೇಲಿನ ತೆರಿಗೆಗಳನ್ನೂ ಸಹ ಹೆಚ್ಚಿಸಲಾಗಿದೆ. ಬೆಲೆ ಏರಿಕೆಯಿಂದ ಸರ್ಕಾರಗಳು ಬಡವರು ಮತ್ತು ಮಧ್ಯಮ ವರ್ಗದವರನ್ನು ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ. ಆರ್ಥಿಕ ನೀತಿಗಳು ಜಾರಿ ಮಾಡವ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಮೋದಿ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆಯು ಈ ಕೋಮು ಮತ್ತು ಸಾಂವಿಧಾನಿಕ ವಿರೋಧಿಯಾಗಿದೆ. ಈ ಶಾಸನವು ಸ್ಪಷ್ಟವಾಗಿ ಪೂರ್ವಾಗ್ರಹ ಪೀಡಿತವಾಗಿದೆ ಮತ್ತು ಸಂವಿಧಾನವು ಖಾತರಿಪಡಿಸಿದಂತೆ ಮುಸ್ಲಿಂ ಸಮುದಾಯ ಮತ್ತು ಅವರ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ನೇರ ದಾಳಿಯಾಗಿದೆ. ಈ ಮಸೂದೆಯು ಧರ್ಮಾಂಧ ಕಾನೂನು ರಚನೆಯ ಸ್ಪಷ್ಟ ಕೃತ್ಯವಾಗಿದೆ. ನ್ಯಾ. ರಾಜಿಂದರ್ ಸಾಚಾರ್ ಸಮಿತಿಯ 2006ರ ವರದಿಯು ವಕ್ಫ್‌ಗಳನ್ನು ಕಲ್ಯಾಣ ಚಟುವಟಿಕೆಗಳಲ್ಲಿ ತೊಡಗಿರುವ ಸಾಮಾಜಿಕ-ಧಾರ್ಮಿಕ ಸಂಸ್ಥೆಗಳಾಗಿ ಗುರುತಿಸಿತು ಮತ್ತು ಸಾಕಷ್ಟು ಆರ್ಥಿಕ ಮತ್ತು ಕಾನೂನು ಬೆಂಬಲದೊಂದಿಗೆ ವಕ್ಫ್ ಮಂಡಳಿಗಳನ್ನು ಆಡಳಿತಾತ್ಮಕವಾಗಿ ಬಲಪಡಿಸುವ ಅಗತ್ಯವನ್ನು ಎತ್ತಿ ತೋರಿಸಿತು. ಇದಕ್ಕೆ ತದ್ವಿರುದ್ಧವಾಗಿ, ಪ್ರಸ್ತಾವಿತ ಮಸೂದೆಯು ಹಿಂದುತ್ವದ ರಾಜಕೀಯ ಸಿದ್ಧಾಂತವನ್ನು ಕಾನೂನಿನಲ್ಲಿ ಎನ್ಕೋಡ್ ಮಾಡಲು ಪ್ರಯತ್ನಿಸುತ್ತದೆ. ಈ ಕೊಡಲೇ ವಕ್ಫ್ ತಿದ್ದುಪಡಿ ಕಾಯ್ದೆ ರದ್ದುಗೊಳಿಸಬೇಕೆಂದು” ಒತ್ತಾಯಿಸಿದರು.

ಇದನ್ನೂ ಓದಿ: ರಾಯಚೂರು | ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಪ್ರತಿಭಟನೆಯಲ್ಲಿ ಸಿಪಿಐಎಂಎಲ್ ಲಿಬರೇಶನ್ ತಾಲೂಕು ಮುಖಂಡ ಬಸವರಾಜ ಕೊಂಡೆ, ಆರ್.ಎಚ್ ಕಲಮಂಗಿ, ಶ್ರೀನಿವಾಸ ಬುಕ್ಕನ್ನಟ್ಟಿ, ಅಜು, ಸಾದಿಕ್, ಹುಸೇನ್, ರಹೀಮ್ ಬಸವರಾಜ ಅರಳಹಳ್ಳಿ, ಹುಸೇನಪ್ಪ, ರಮೇಶ್, ಯಮನೂರಪ್ಪ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...