ರಾಯಚೂರು | ಬೀಳುವಂತಿರುವ ಶಾಲಾ ಕೊಠಡಿಗಳು; ವಿದ್ಯಾರ್ಥಿಗಳಿಗೆ ಬಯಲೇ ಪಾಠಶಾಲೆ!

Date:

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೇಮನಾಳ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಂಪೂರ್ಣ ಶಿಥಿಲಗೊಂಡಿದ್ದು, ಇವತ್ತೋ, ನಾಳೆಯೋ ಬೀಳುವಂತಿದೆ. ಹೀಗಿದ್ದರೂ ಶಾಲಾ ಕಟ್ಟಡ ದುರಸ್ತಿಗೆ ಶಿಕ್ಷಣ ಇಲಾಖೆ ನಿರಾಸಕ್ತಿ ಹೊಂದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಒಂದನೇ ತರಗತಿಯಿಂದ ಎಂಟನೇ ತರಗತಿವರೆಗೆ 170ಕ್ಕೂ ಅಧಿಕ ವಿದ್ಯಾರ್ಥಿಗಳು ಇಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಶಾಲಾ ಕಟ್ಟಡದಲ್ಲಿ, 8 ಕೊಠಡಿಗಳಿದ್ದು, ಹೊಸದಾಗಿ ನಿರ್ಮಿಸಿರುವ 2 ಕೊಠಡಿಗಳಿವೆ. 6 ಕೊಠಡಿಗಳು ಪೂರ್ಣ ಶಿಥಿಲಗೊಂಡಿದ್ದು, ಮಳೆಗಾಲದ ಸಮಯದಲ್ಲಿ ಕಟ್ಟಡ ಸೋರುತ್ತದೆ. ಹಳೆ ಕಟ್ಟಡ ಇರುವುದರಿಂದ ಈ ಶಾಲೆಗೆ ಮಕ್ಕಳನ್ನು ಕಳುಹಿಸಲು ಪಾಲಕರು ಹಿಂಜರಿಯುತ್ತಿದ್ದಾರೆ.

ಒಂದು ಕೊಠಡಿಯಲ್ಲಿ ಒಂದರಿಂದ ಮೂರನೇ ತರಗತಿವರೆಗೆ ವಿದ್ಯಾರ್ಥಿಗಳು ಕುಳಿತುಕೊಳ್ಳಬೇಕು. ಇನ್ನೊಂದು ಕೊಠಡಿಯಲ್ಲಿ ನಾಲ್ಕು ಹಾಗೂ ಐದನೇ ತರಗತಿ ವಿದ್ಯಾರ್ಥಿಗಳು ಕೂರಬೇಕು. ಇನ್ನು ಕೆಲವು ತರಗತಿ ವಿದ್ಯಾರ್ಥಿಗಳಿಗೆ ಬಯಲೇ ಪಾಠ ಶಾಲೆಯಾಗಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಮೇಲ್ಛಾವಣಿ

ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ಸ್ವಾತಿ ಮಾತನಾಡಿ, “ಶಾಲೆಯಲ್ಲಿ ಮೂಲಸೌಕರ್ಯಗಳು ಸರಿಯಾಗಿಲ್ಲ. ಕೊಠಡಿಗಳಿಲ್ಲದೆ ಎಲ್ಲರೂ ಒಂದೇ ತರಗತಿಯಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿಯಿದೆ. ಒಂದನೇ ತರಗತಿಯವರೂ ಕೂಡ 8ನೇ ತರಗತಿ ಪಾಠ ಕೇಳುವ ಸ್ಥಿತಿಯಿದೆ” ಎಂದು ಹೇಳಿದರು.

ಗ್ರಾಮದ ನಿವಾಸಿ ರಾಚಣ್ಣ ನಾಯಕ ಮಾತನಾಡಿ, “ಶಾಲೆಯ ಕೊಠಡಿಗಳು ಸರಿಯಿಲ್ಲದ ಕಾರಣ ಸುಮಾರು ಆರೇಳು ವರ್ಷ ಬಯಲೇ ಪಾಠ ಶಾಲೆಯಾಗಿದೆ. ಕೊಠಡಿಗಳ ಮೇಲ್ಛಾವಣಿ ಬಿದ್ದು ಕೆಲವು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹಲವು ಬಾರಿ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೂ ಅಧಿಕಾರಿಗಳು ಸರಿಯಾಗಿ ಸ್ಪಂದಿಸಿಲ್ಲ” ಎಂದರು.

ಹೇಮನಾಳ ಶಾಲೆ

“ಶಾಲೆಯ ಹಿಂದೆ ಕೆರೆಯಿದೆ. ಅದರಲ್ಲಿ ಮೂರು ಮೊಸಳೆಗಳು ಸೇರಿಕೊಂಡಿವೆ. ಮಕ್ಕಳು ಮಲಮೂತ್ರ ವಿಸರ್ಜನೆ ಮಾಡಲು ಹೋದರೆ ಆತಂಕದಲ್ಲಿ ಇರಬೇಕಾಗಿದೆ. ಇದರ ಬಗ್ಗೆಯೂ ಸಂಬಂಧಪಟ್ಟ ಆಧಿಕಾರಿಗಳ ಗಮನಕ್ಕೆ ತಂದರೂ ತಮಗೆ ಸಂಬಂಧವಿಲ್ಲದಂತೆ ಇದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಲೋಕಸೇವಾ ಆಯೋಗದ(ಕೆಪಿಸಿಸಿ) ರಾಜ್ಯಾಧ್ಯಕ್ಷ ಶಿವ ಶಂಕರಪ್ಪ ಸಾಹುಕಾರ ಮಾತನಾಡಿ, “ಗ್ರಾಮದಲ್ಲಿರುವ ಸರ್ಕಾರಿ ಶಾಲೆ ಶಿಥಿಲಗೊಂಡಿದ್ದು, ಮಳೆಗಾಲದಲ್ಲಿ ಸುತ್ತಲೂ ಸೋರುತ್ತಿದೆ. ಶಾಲೆಯ ಗೋಡೆಗಳು ಬೀಳುವ ಹಂತಕ್ಕೆ ತಲುಪಿವೆ. ಶಾಲೆಯ ಸ್ಥಿತಿ ನಿಜಕ್ಕೂ ಹೇಳತೀರದಾಗಿದೆ. ಶಾಲಾ ಕೊಠಡಿಯಲ್ಲಿ ನಿಂತು ನೋಡಿದರೆ ಒಡೆದ ಹಂಚಿನಿಂದ ಆಕಾಶ ಕಾಣುತ್ತದೆ. ಮಳೆ ಬಂದರೆ ಮಕ್ಕಳು ಪಾಠ ಕೇಳಲು ಹರಸಾಹಸ ಪಡುವಂತಾಗಿದೆ‌. ಬಿರುಕುಬಿಟ್ಟ ಗೋಡೆಯಿಂದ ನೀರು ತೊಟ್ಟಿಕ್ಕಲು ಆರಂಭವಾಗುತ್ತದೆ. ಇದರಿಂದ ವಿದ್ಯಾರ್ಥಿಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಐತಿಹಾಸಿಕ ಈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕಾಯಕಲ್ಪ ಬೇಕಾಗಿದೆ” ಎಂದರು.

ಶಾಲೆಯ ಮುಖ್ಯೋಪಾಧ್ಯಾಯ ಶಾಂತ ಸುಗರಯ್ಯ ಸ್ವಾಮಿ ಮಾತನಾಡಿ, “ಶಾಲೆಯ 8 ಕೊಠಡಿಗಳಲ್ಲಿ 6 ಕೊಠಡಿಗಳು ಶಿಥಿಲಗೊಂಡಿವೆ. ಕೊಠಡಿ ಇಲ್ಲದ ಕಾರಣ ಬಯಲಲ್ಲೇ ಪಾಠ ಹೇಳುವ ಸ್ಥಿತಿಯಿದೆ. ಒಳಗಡೆ ಕೂರಿಸೋಣವೆಂದರೆ ಮೇಲ್ಛಾವಣಿ ಯಾವಾಗ ಕುಸಿದು ಬೀಳುತ್ತದೆಯೋ ಎಂಬ ಆತಂಕ. ಹಾಗಾಗಿ ಕೆಲವು ತರಗತಿಗಳನ್ನು ಒಟ್ಟಿಗೆ ಸೇರಿಸಿ ಪಾಠ ಹೇಳುತ್ತಿದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ದ್ವೇಷವಿರುವ ಸಮಾಜದಲ್ಲಿ ಮಾನವೀಯ ಸಾಹಿತ್ಯ ಅನುವಾದ, ಸೇತುವೆ ನಿರ್ಮಾಣವಿದ್ದಂತೆ: ರಹಮತ್ ತರೀಕೆರೆ

“ಶಾಲೆಗೆ ₹3 ಕೋಟಿ ಅನುದಾನ ಬಿಡುಗಡೆಯಾಗಿತ್ತು. ಗ್ರಾಮದ ಕೆಲವು ರಾಜಕೀಯ ಪ್ರಭಾವಗಳಿಂದ ಬೇರೆ ಶಾಲೆಗೆ ವರ್ಗಾವಣೆಯಾಯಿತು. ಶಾಲೆ ಶಿಥಿಲಗೊಂಡಿರುವುದನ್ನು ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಅವರೂ ಕೂಡ ಬಂದು ಶಾಲೆಯ ಸ್ಥಿತಿಯನ್ನು ವೀಕ್ಷಿಸಿದ್ದಾರೆ. ಇದನ್ನು ಮತ್ತೆ ಅಧಿಕಾರಿಗಳಿಗೆ ಹೇಳಲಾಗುವುದು” ಎಂದರು.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...