ರಾಯಚೂರು | ನೆರೆ ಸಂತ್ರಸ್ತರಿಗೆ ವಸತಿ ಹಕ್ಕುಪತ್ರ ಕಲ್ಪಿಸಲು ದಲಿತ ಸಂಘಟನೆ ಒತ್ತಾಯ

Date:

2009ರಲ್ಲಿ ಸುರಿದ ಧಾರಾಕಾರ ಮಳೆಯಿಂದ ಅನೇಕರು ಮನೆ ಕಳೆದುಕೊಂಡಿರುವ ನೆರೆ ಸಂತ್ರಸ್ತರನ್ನು ಗುರುತಿಸಿ ಪುನರ್‌ ವಸತಿ ಹಕ್ಕುಪತ್ರ ವಿತರಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘಟನೆಯಿಂದ ರಾಯಚೂರು ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಸಲ್ಲಿಸಿದರು.

“ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೇರುಂಡಿ ಗ್ರಾಮದಲ್ಲಿ 2009ರ ಅಕ್ಟೋಬರ್ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ಮನೆಗಳು ಬಿದ್ದು ನೆಲಸಮವಾಗಿದ್ದು, ಗ್ರಾಮಲೆಕ್ಕಾಧಿಕಾರಿ ಸರ್ವೆ ಮಾಡಿದರೂ ಕೂಡಾ ಸರ್ಕಾರದಿಂದ ಈವರೆಗೆ ನೆರೆ ಸಂತ್ರಸ್ತರಿಗೆ ಪುನರ್ವಸತಿ ಹಂಚಿಕೆ ಮಾಡಿಲ್ಲ” ಎಂದು ಆಗ್ರಹಿಸಿದರು.

“ಆ ವರ್ಷದಲ್ಲಿ(2009)ರಲ್ಲಿ ಸರ್ವೆ ಮಾಡಿ ಗುರುತಿಸಲಾದ ಫಲಾನುಭವಿಗಳನ್ನು ಬಿಟ್ಟು, ಹೊಸದಾಗಿ ಫಲಾನುಭವಿಗಳ ಪಟ್ಟಿಯನ್ನು ತಯಾರಿಸಿದ್ದು, ಅನರ್ಹರಿಗೆ ನೆರೆ ಸಂತ್ರಸ್ತರ ಮನೆಗಳನ್ನು ಹಂಚಲು ಹುನ್ನಾರ ನಡೆಸಿರುವುದು ಕಂಡುಬಂದಿದೆ. ರಾಜಕೀಯ ಕೈವಾಡದಿಂದ ನೆರೆ ಸಂತ್ರಸ್ತರಿಗೆ ಮನೆಗಳನ್ನು ಹಂಚುವಲ್ಲಿ ತಾರತ್ಯಮ ಮಾಡಿದ್ದು, ನಿಜವಾಗಿಯೂ ಮನೆ ಕಳೆದುಕೊಂಡ ನೆರೆ ಸಂತ್ರಸ್ತರಿಗೆ ಮನೆಗಳನ್ನು ವಿತರಣೆ ಮಾಡಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆಲವು ಸ್ಥಳೀಯ ಅಧಿಕಾರಿಗಳು ದುಡ್ಡಿನ ಆಮಿಷಕ್ಕೆ ಒಳಗಾಗಿ ಪಟ್ಟಿಯಲ್ಲಿ ಸೇರಿಸಲಾದ ಫಲಾನುಭವಿಗಳನ್ನು ಕೈಬಿಟ್ಟು ತಮಗೆ ಮನಸ್ಸಿಗೆ ಬಂದಂತೆ ಸಂತ್ರಸ್ತರಲ್ಲದ ವ್ಯಕ್ತಿಗಳಿಗೆ ಹಕ್ಕುಪತ್ರ ನೀಡಿರುವುದು ಖಂಡನೀಯ” ಎಂದರು.

“ಮೇಲಧಿಕಾರಿ ಜಿಲ್ಲಾಧಿಕಾರಿಯವರು ಮರಳಿ ಪರಿಶೀಲನೆ ಮಾಡಿ, ಒಟ್ಟು ಫಲಾನುಭವಿಗಳ 159 ಮನೆಗಳು ಮಂಜೂರಾಗಿದ್ದು, ಆ ಪೈಕಿ 109 ಮನೆಗಳು ನಿರ್ಮಾಣವಾಗಿರುತ್ತವೆ. ಆದ್ದರಿಂದ ಇನ್ನು 50 ಮನೆಗಳು ಖಾಲಿಯಿದ್ದು, ಅವುಗಳಲ್ಲಿ ಊರಿನ ಕಡುಬಡವರಿಗೆ ಅವರ ಪರಿಸ್ಥಿತಿಯನ್ನು ಅವಲೋಕನ ಮಾಡಿ ನಿಜವಾದ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಪಾಸ್‌ಪೋರ್ಟ್‌ ಅರ್ಜಿ ತಿರಸ್ಕಾರ; ವಾಸ್ತುಶಿಲ್ಪಿ ಕೆ ಜಿ ಶ್ರೀಧರ್ ಏಕಾಂಗಿ ಧರಣಿ

“ಒಂದು ವೇಳೆ ನಿರ್ಲಕ್ಷ್ಯ ವಹಿಸಿದರೆ ಕಾರ್ಯಾಲಯದ ಮುಂದೆ ಎಲ್ಲ ಫಲಾನುಭವಿಗಳನ್ನು ಕರೆದುಕೊಂಡು ತೀವ್ರ ಚಳವಳಿ ಮಾಡುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಜಿಲ್ಲಾ ಮುಖಂಡ ಹನುಮಂತಪ್ಪ ಮನ್ನಾಪುರ, ಹೊನ್ನಪ್ಪ ಗುಂಡುಗುರ್ತಿ, ಲಕ್ಷ್ಮಣ ಮಸರಕಲ್, ಆಂಜನೇಯ, ಯಲ್ಲಪ್ಪ ಸೇರಿದಂತೆ ಗ್ರಾಮದ ಮುಖಂಡರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...