ರಾಯಚೂರು | ಜೂನ್ 28,29 ಅಖಿಲ್ ಭಾರತ್ ದಲಿತ ಸಾಹಿತ್ಯ ಸಮ್ಮೇಳನ ; ತಾಯರಾಜ್

Date:

ಜೂನ್ 28,29 ರಂದು ಜಿಲ್ಲೆಯಲ್ಲಿ ನಡೆಯಲಿರುವ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನವನ್ನು ಜಿಲ್ಲೆಯ ದಲಿತ ಪರ ಹೋರಾಟಗಾರರು ,ವಿವಿಧ ಸಂಘ ಸಂಸ್ಥೆಗಳು ,ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕು ಹಾಗೂ ಸಮ್ಮೇಳನದ ಸಮಿತಿಯ ಸದಸ್ಯರು ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ದಲಿತ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷರು ಹಾಗು ಸಮ್ಮೇಳನ ಸಂಯೋಜಕರಾದ ತಾಯರಾಜ್ ಹೇಳಿದರು. 

ನಗರದ ಸರ್ಕಾರಿ ನೌಕರರ ಭವನದಲ್ಲಿ ಎರಡು ದಿನದ  ಸಮ್ಮೇಳನ ಕಾರ್ಯಕ್ರಮದ ಬಗ್ಗೆ ಪದಾಧಿಕಾರಿಗಳನ್ನು ಪೂರ್ವಭಾವಿ ಸಭೆ ಕರೆದು ಮಾತನಾಡಿದರು.

ರಾಯಚೂರು ಜಿಲ್ಲೆಯು ಚಳುವಳಿ,ಹೋರಾಟಗಾರರ ಕೇಂದ್ರ ಬಿಂದು ಎಂದು ಹೆಸರಾಗಿದೆ. ಹಲವು ವರ್ಷಗಳ ನಂತರ ಜಿಲ್ಲೆಯಲ್ಲಿ ನಡೆಯಲಿರುವ ದಲಿತ ಸಾಹಿತ್ಯ ಸಮ್ಮೇಳನಕ್ಕೆ ಸಹಕರಿಸಿ ಯಶಸ್ವಿಯಾಗುವುದಕ್ಕೆ ಎಲ್ಲರೂ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ಮಾತನಾಡಿದ ರಾಜ್ಯ ಮುಖಂಡ ಡಾ.ಅರ್ಜುನ ಗೊಳಸಂಗಿ ಸಭೆಯನ್ನು ಉದ್ದೇಶಿಸಿ ಸಮ್ಮೇಳನ ಸಲುವಾಗಿ ರಚಿಸಿದ ವಿವಿಧ ಸಮಿತಿಗಳ ಕಾರ್ಯ ಮತ್ತು ಆರ್ಥಿಕ ಕ್ರೋಢೀಕರಣ ಬಹುಮುಖ್ಯವಾಗಿರುತ್ತದೆ. ಸಮ್ಮೇಳನ ಯಶಸ್ವಿ ಆಗಬೇಕಾದರೆ ನಮ್ಮ ವೈಯಕ್ತಿಕ ಕೆಲಸಗಳನ್ನು  ಕೆಲವು ದಿನಗೋಸ್ಕರ ಬದಿಗೊತ್ತಿ ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸುವ ಹಿರಿಯ ಮುಖಂಡರಿಗೆ ವಸತಿ ವ್ಯವಸ್ಥೆ ಸೇರಿದಂತೆ ಯಾವುದು ಲೋಪವಾಗದಂತೆ ಎಚ್ಚರ ವಹಿಸಿ ಅತಿಥೋಪಚಾರ ನೋಡಿಕೊಳ್ಳುವ ಜವಾಬ್ದಾರಿ ನಿಭಾಯಿಸಬೇಕು.ಎಲ್ಲಾ ಪದಾಧಿಕಾರಿಗಳು ಒಟ್ಟಿಗೆ ಕಾರ್ಯ ನಿರ್ವಹಣೆ ಮೂಲಕ ಸಮ್ಮೇಳನದ ಸಂದೇಶ ಸಾರೋಣ ಎಂದು ತಿಳಿಸಿದರು.

ಸಭೆಯಲ್ಲಿ ದಲಿತ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷ ನರಸಿಂಹ ಭೈರವ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಧರ್ಮಾವತಿ ಎಸ್.ನಾಯಕ,ರಾಯಚೂರು ಯುವ ಘಟಕದ ಜಿಲ್ಲಾಧ್ಯಕ್ಷ ಪಾರ್ಥ ಸಿರವಾರ, ರಾಯಚೂರು ತಾಲೂಕು ಅಧ್ಯಕ್ಷ ನರಸಿಂಹಲು ಪಿ, ಮಹಿಳಾ ಘಟಕ ಅಧ್ಯಕ್ಷೆ ಲಕ್ಷ್ಮಿ , ಮಾನ್ವಿ ತಾಲ್ಲೂಕಿನ ಅಧ್ಯಕ್ಷ ಆರ್.ಕೆ ಈರಣ್ಣ, ಕಾರ್ಯದರ್ಶಿ ಡಾ.ಬಸವರಾಜ ಸುಂಕೇಶ್ವರ, ಲಿಂಗಸುಗೂರು ತಾಲ್ಲೂಕ ಅಧ್ಯಕ್ಷ ಅಮರೇಶ ವೆಂಕಟಪುರ ,ಕಾರ್ಯದರ್ಶಿ ಡಾ.ಮಹಾಂತಗೌಡ ಪಾಟೀಲ್, ಡಾ.ಪರಮಾನಂದ, ಲಿಂಗಸುಗೂರು ತಾಲ್ಲೂಕಿನ ಯುವ ಘಟಕದ ಅಧ್ಯಕ್ಷ ಸುರೇಶ್ ಹಟ್ಟಿ, ಮಲ್ಲಿಕಾರ್ಜುನ ಕಡೆಚೂರು, ಸಿಂಧನೂರು ತಾಲ್ಲೂಕು ಕಾರ್ಯದರ್ಶಿ ರಾಮಣ್ಣ ಹಿರೇಬೇರಿಗಿ, ಸದಸ್ಯರಾದ ಯಂಕಪ್ಪ ಪಿರಂಗಿ,ಈರಪ್ಪ ಕೊಂಬಿನ್,ಮಲ್ಲೇಶ್ ಭೈರವ ರಾಯಚೂರು ತಾಲೂಕ ದಲಿತ ವಿದ್ಯಾರ್ಥಿ ಪರಿಷತ್ತಿನ ಪಾಲರಾಜ್,ರವಿ ಮುಂತಾದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...