ರಾಯಚೂರು | ಅಕ್ರಮ ಕಲ್ಲಿದ್ದಲು ಸಾಗಾಟ; ಸೂಕ್ತ ಕ್ರಮಕ್ಕೆ ದಲಿತ ಸೇನೆ ಒತ್ತಾಯ

Date:

ವೈಟಿಪಿಎಸ್‌ ಥರ್ಮಲ್ ಪವರ್ ಕಾರ್ಖಾನೆಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲಿದ್ದಲು ಸಾಗಾಟದಲ್ಲಿ ಶಾಮೀಲಾಗಿರುವ ಅಧಿಕಾರಿಗಳನ್ನು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ದಲಿತ ಸೇನೆ ಸಂಘಟನೆಯ ಕಾರ್ಯಕರ್ತರು ಒತ್ತಾಯಿಸಿ ಜಿಲ್ಲಾಧಿಕಾರಿ ನಿತೀಶ್‌ ಕೆ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ರಾಯಚೂರು ತಾಲ್ಲೂಕಿನ ವೈಟಿಪಿಎಸ್ ಥರ್ಮಲ್ ಪವರ್ ಕಾರ್ಖಾನೆಗೆ ಸಂಬಂಧಪಟ್ಟಂತೆ ನಡೆಯುತ್ತಿರುವ ಅಕ್ರಮ ಕಲ್ಲಿದ್ದಲು ಸಾಗಾಟ ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಹೊರಗಡೆ ಲಕ್ಷಾಂತರ ರೂಪಾಯಿಗೆ ಸಣ್ಣ ಕಾರ್ಖಾನೆಗಳಿಗೆ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಕೋಟ್ಯಾಂತರ ಭ್ರಷ್ಟಾಚಾರ ನಡೆದಿದೆ ಎಂದು ಸಂಘಟನಾಕಾರರು ಆರೋಪಿಸಿದರು.

ಈ ಕುರಿತು ಮಾತನಾಡಿದ ದಲಿತ ಸೇನೆ ಜಿಲ್ಲಾಧ್ಯಕ್ಷ ಮಾರುತಿ ಚಿಕ್ಕಸೂಗೂರು, ವೈಟಿಪಿಎಸ್ ಕಾರ್ಖಾನೆಯೊಳಗೆ ಬರುವ ಕಲ್ಲಿದ್ದಲು ಸಾಗಾಟದಲ್ಲಿ ಗಂಭೀರ ಅಕ್ರಮಗಳು ನಡೆಯುತ್ತಿದ್ದು, ಕಾರ್ಖಾನೆಗೆ ಬಂದ ಕಲ್ಲಿದ್ದಲು ವ್ಯಾಗನ್‌ಗಳನ್ನು ಪೂರ್ಣ ಪ್ರಮಾಣದಲ್ಲಿ ಖಾಲಿ ಮಾಡದೆ, ಅಲ್ಪ ಪ್ರಮಾಣ ಉಳಿಸಿಕೊಂಡು ಕಾರ್ಖಾನೆಯ ಹೊರಗಡೆ ತಂದು ಯರಮರಸ್ ರೈಲ್ವೇ ನಿಲ್ದಾಣದ ಬಳಿ ಸಂಪೂರ್ಣ ಖಾಲಿ ಮಾಡಿ ಕೆಲವು ಸಣ್ಣ ಕಾರ್ಖಾನೆಗಳಿಗೆ ಲಕ್ಷಾಂತರ ರೂಪಾಯಿಗಳಿಗೆ ಕಲ್ಲಿದ್ದಲು ಮಾರಾಟ ಮಾಡಲಾಗುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಅಕ್ರಮ ವ್ಯವಹಾರದಲ್ಲಿ ವೈಟಿಪಿಎಸ್‌ನ ಹಿಂದಿನ ಕಾರ್ಯನಿರ್ವಾಹಕ ನಿರ್ದೇಶಕರಾದ ಗಂಗಾಧರ (ಹಾಲಿ ಟಿ.ಡಿ., ಬೆಂಗಳೂರು), ಸೆಕ್ಯೂರಿಟಿ ಇನ್‌ಚಾರ್ಜ್ ಎಇಇ ರವೀಶ್ ಹಾಗೂ ಪವರ್‌ಮ್ಯಾಕ್ ಕಂಪನಿ ಇನ್‌ಚಾರ್ಜ್ ಸುರೇಂದ್ರ ಅವರು ಪರಸ್ಪರ ಕೈಜೋಡಿಸಿ ನೇರವಾಗಿ ಪಾಲುದಾರರಾಗಿದ್ದಾರೆ. ಇಂತಹ ಆರೋಪಗಳ ನಡುವೆಯೂ ಗಂಗಾಧರ ಅವರಿಗೆ ಟಿ.ಡಿ. ಹುದ್ದೆಗೆ ಮುಂಬಡ್ತಿ ನೀಡಿರುವುದು ಕಾನೂನುಬಾಹೀರ ಮತ್ತು ಅನುಮಾನಾಸ್ಪದವಾಗಿದೆ ಎಂದರು.

ವೈಟಿಪಿಎಸ್ ಮತ್ತು ಆರ್‌ಟಿಪಿಎಸ್ ಥರ್ಮಲ್ ಪವರ್ ಘಟಕಗಳು ರಾಷ್ಟ್ರಮಟ್ಟದಲ್ಲಿ ಐಎಎಸ್ ಅಧಿಕಾರಿಗಳ ಆಡಳಿತ ವ್ಯಾಪ್ತಿಗೆ ಒಳಪಟ್ಟಿದ್ದರೂ, ಜಿಲ್ಲಾಮಟ್ಟದಲ್ಲಿ ಯಾವುದೇ ಅಹಿತಕರ ಘಟನೆಗಳು ಹಾಗೂ ಕುಂದುಕೊರತೆಗಳಿಗೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ದಂಡಾಧಿಕಾರಿಗಳೇ ನೇರ ಹೊಣೆಗಾರರಾಗುತ್ತಾರೆ. ಆದ್ದರಿಂದ ಕಲ್ಲಿದ್ದಲು ಸಾಗಾಟ, ಪವರ್‌ಮ್ಯಾಕ್ ಕಂಪನಿಗೆ ಅಕ್ರಮವಾಗಿ ಸಂದಾಯವಾಗಿರುವ ಬೋಗಸ್ ಬಿಲ್ಲುಗಳು ಹಾಗೂ ಕಾರ್ಖಾನೆಯ ನಿರ್ವಹಣೆಯಲ್ಲಿ ನಡೆದಿರುವ ಹಗರಣಗಳ ಕುರಿತು ಸಮಗ್ರ, ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ವಿಡಿಯೋ ವೀಕ್ಷಣೆ; ಯುವಕ ಬಂಧನ

ಈ ಸಂದರ್ಭದಲ್ಲಿ ದಲಿತ ಸೇನೆ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ.ಜಾವೀದ್ ಖಾನ್, ಸುರೇಶಬಾಬು, ಬಾಬು, ಬಾವುದ್ದೀನ್ ಸೇರಿದಂತೆ ಇನ್ನಿತರರು ಇದ್ದರು

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...