ರಾಯಚೂರು ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ, ನವಜಾತ ಶಿಶು ಸಾವು

Date:

ಹೆರಿಗೆಯಾಗಿ ನಾಲ್ಕು ದಿನಗಳ ಬಳಿಕ ನವಜಾತ ಶಿಶು ಸಾವನ್ನಪ್ಪಿದ್ದು, ಅತಿಯಾದ ರಕ್ತಸ್ರಾವದಿಂದ ಬಾಣಂತಿಯೂ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಶಿವಲಿಂಗಮ್ಮ(21) ಮೃತ ಬಾಣಂತಿ ಎಂದು ಗುರುತಿಸಿದ್ದು, ದೇವದುರ್ಗ ತಾಲೂಕಿನ ಮಸೀದಾಪುರ ಗ್ರಾಮದವರು ಎನ್ನಲಾಗಿದೆ.

ಹೆರಿಗೆ ಕಾರಣದಿಂದ ಡಿಸೆಂಬರ್ 27ರಂದು ರಾಯಚೂರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಸಿಸೇರಿಯನ್ ಮೂಲಕ ಹೆರಿಗೆಯಾಗಿತ್ತು ಎಂದು ತಿಳಿದುಬಂದಿದೆ. ಹೆರಿಗೆ ಬಳಿಕ ರಕ್ತದೊತ್ತಡ ಹೆಚ್ಚಾಗಿರುವುದು ಕಂಡುಬಂದಿದ್ದು, ಇದರ ಹಿನ್ನೆಲೆಯಲ್ಲಿ ಬಾಣಂತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ 4 ದಿನಗಳ ಕಾಲ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದು ಬುಧವಾರ ಮಧ್ಯರಾತ್ರಿ ಮಗು ಸಾವನ್ನಪ್ಪಿದ್ದು, ಕೆಲವೇ ಗಂಟೆಗಳ ಬಳಿಕ ಬಾಣಂತಿ ಶಿವಲಿಂಗಮ್ಮ ಕೂಡ ಸಾವನ್ನಪ್ಪಿದ್ದಾರೆಂದು ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ರೈಲಿನಲ್ಲಿ ಅಸ್ವಸ್ಥಗೊಂಡ ಮಹಿಳೆ ಸಾವು

ಗ್ರಾಮದ ನಿವಾಸಿ ಹೋರಾಟಗಾರ ಶಾಂತ ಕುಮಾರ ಮಾತನಾಡಿ, “ವೈದ್ಯರ ನಿರ್ಲಕ್ಷ್ಯ ಕಾರಣದಿಂದ ಬಾಣಂತಿಯ ಸಾವಾಗಿದೆ. ಕಳೆದ ವರ್ಷ ಜಿಲ್ಲೆಯಲ್ಲಿ ಒಟ್ಟು 11 ಮಂದಿ ಬಾಣಂತಿಯರು ಮೃತಪಟ್ಟಿದ್ದು, ಜಿಲ್ಲೆಯನ್ನೇ ಬೆಚ್ಚಿಬೀಳಿಸಿದೆ. ಆದರೂ ಸಂಬಂಧಪಟ್ಟ ಇಲಾಖೆ ಎಚ್ಚೆತ್ತುಕೊಂಡಿಲ್ಲ. ಆರೋಗ್ಯ ಇಲಾಖೆ ಹಾಗೂ ಸರ್ಕಾರಿ ವೈದ್ಯರು ಗರ್ಭಿಣಿಯರಿಗೆ‌ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಅವರನ್ನು ಆರೈಕೆ ಮಾಡಿ ಇಂತಹ ಸಾವು ನೋವುಗಳಿಗೆ ಕಡಿವಾಣ ಹಾಕಬೇಕು” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...