ರಾಯಚೂರು | ಡಿ.21 ನದಾಫ್–ಪಿಂಜಾರ ಸಮುದಾಯದ ಸಮಸ್ಯೆ, ಬೇಡಿಕೆಗಳ ಕುರಿತ ವಿಶೇಷ ಕಾರ್ಯಕ್ರಮ; ಮೌಲಾಲಿ

Date:

ನದಾಫ್–ಪಿಂಜಾರ ಸಮುದಾಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ಅಭಿವೃದ್ಧಿಯ ಅಗತ್ಯತೆ ಕುರಿತು ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಡಿ.21 (ರವಿವಾರ) ರಂದು ಲಿಂಗಸೂಗೂರು ತಾಲ್ಲೂಕು ಹಟ್ಟಿ ಚಿನ್ನ ಗಣಿಯ ಸ್ವರ್ಣ ಭವನದಲ್ಲಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ನದಾಫ್–ಪಿಂಜಾರ ಸಂಘದ ಹಟ್ಟಿ ಘಟಕದ ಅಧ್ಯಕ್ಷ ಮೌಲಾಲಿ ಹೇಳಿದ್ದಾರೆ.

ಶುಕ್ರವಾರ ಲಿಂಗಸೂಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿ ಪಟ್ಟಣದ ಪತ್ರಿಕಾ ಭವನದಲ್ಲಿ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಸರಿಸುಮಾರು 25 ರಿಂದ 30 ಲಕ್ಷದವರೆಗೆ ನದಾಫ್–ಪಿಂಜಾರ ಸಮಾಜದ ಜನಸಂಖ್ಯೆ ಇದ್ದರೂ, ಪ್ರಸ್ತುತ ವಿಧಾನಸಭೆಯಲ್ಲಿ ಸಮಾಜದಿಂದ ಒಬ್ಬರೂ ಶಾಸಕರು ಇಲ್ಲದಿರುವುದು ವಿಷಾದನೀಯ. ಇತ್ತ ರಾಜ್ಯದಲ್ಲಿ ಕೇವಲ 5 ಲಕ್ಷ ಜನಸಂಖ್ಯೆ ಇರುವ ಕೆಲ ಸಮಾಜಗಳಿಗೆ ಹಲವಾರು ಶಾಸಕರು ಇರುವ ಉದಾಹರಣೆಗಳಿದ್ದು, ಇದರ ಪರಿಣಾಮವಾಗಿ ನದಾಫ್–ಪಿಂಜಾರ ಸಮಾಜವು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಬಹಳ ಹಿಂದೆ ಉಳಿದಿದೆ ಎಂದು ಹೇಳಿದರು.

ಇಂತಹ ಸಂದರ್ಭದಲ್ಲಿ ನದಾಫ್–ಪಿಂಜಾರ ಸಮುದಾಯದ ಅಭಿವೃದ್ಧಿ ಕುರಿತು ವಿಧಾನಸಭೆಯಲ್ಲಿ ಧ್ವನಿ ಎತ್ತಿ ಸರ್ಕಾರದ ಗಮನ ಸೆಳೆದ ಶಾಸಕ ಲಕ್ಷ್ಮಣ ಸವದಿ ಅವರ ಕಾರ್ಯ ಶ್ಲಾಘನೀಯವಾಗಿದೆ. ರಾಯಚೂರು ಜಿಲ್ಲೆಯಲ್ಲಿ ಮಾತ್ರವೇ ಸುಮಾರು 2 ಲಕ್ಷಕ್ಕೂ ಹೆಚ್ಚು ನದಾಫ್–ಪಿಂಜಾರ ಸಮಾಜದ ಜನಸಂಖ್ಯೆಯಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯ ಉಸ್ತುವಾರಿ ಸಚಿವರು, ಸಂಸದರು, ಲಿಂಗಸುಗೂರು ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಆಗಮಿಸುತ್ತಿದ್ದಾರೆ. ಜಿಲ್ಲೆಯ ನದಾಫ್–ಪಿಂಜಾರ ಸಮಾಜದ ಬಂಧುಗಳು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮನರೇಗಾ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ

ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಪಿಂಜಾರ ನದಾಫ್ ಸಂಘಟನೆಯ ಉಪಾಧ್ಯಕ್ಷ ಅಮೀನ್, ಉಪಾಧ್ಯಕ್ಷ ಖಾಜಾ ಬಂಗಾರಿ, ಪ್ರಧಾನ ಕಾರ್ಯದರ್ಶಿ ಸೈಫುಲ್, ಕಾರ್ಯದರ್ಶಿ ಮುಕ್ತಾರ್, ರಾಜ್ ಮೊಹಮ್ಮದ್‌ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...