ರಾಯಚೂರು | ಇ-ಖಾತಾ ವಿಳಂಬ, ಲಂಚ ಬೇಡಿಕೆ ಆರೋಪ; ಜಂಟಿ ಸಂಘಟನೆಗಳ ಪ್ರತಿಭಟನೆ

Date:

ಮಸ್ಕಿ ತಾಲ್ಲೂಕು ಬಳಗಾನೂರು ಪಟ್ಟಣ ಪಂಚಾಯಿತಿಯಲ್ಲಿ ಇ–ಖಾತ ನೀಡುವಲ್ಲಿ ಅತಿಯಾದ ವಿಳಂಬ ಮಾಡಿ, ಒಂದು ಹಂತದ ಲಂಚ ಸ್ವೀಕರಿಸಿ ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಅಧ್ಯಕ್ಷ ಹಾಗೂ ಮುಖ್ಯಾಧಿಕಾರಿಗಳ ವಿರುದ್ಧ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಹಾಗೂ ಸಾಮಾಜಿಕ ನ್ಯಾಯ ಸಂಸ್ಥೆ ಸೇರಿದಂತೆ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪಟ್ಟಣದ ಸಂತೆಬಜಾರಿನಿಂದ ಪಂಚಾಯಿತಿ ಕಚೇರಿವರಗೆ ಅಣಕು ಭಿಕ್ಷಾಟನೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಸಾರ್ವಜನಿಕ ಸೇವೆಗಳ ಹೆಸರಿನಲ್ಲಿ ಭ್ರಷ್ಟಾಚಾರ ಜಾರಿಗೊಳ್ಳುತ್ತಿರುವುದನ್ನು ತೀವ್ರವಾಗಿ ಖಂಡಿಸಿದರು.

ಕೆಲವು ತಿಂಗಳುಗಳ ಹಿಂದೆ ಸಿಂಧನೂರಿನ ರಿಯಲ್ ಎಸ್ಟೇಟ್ ಉಧ್ಯಮಿ ಖಾಜಾಸಾಬ್ ಮತ್ತು ಪಾಲುದಾರರು ನಮೋನೆ 3 ಕೋರಿ ಬಳಗಾನೂರಿನಲ್ಲಿ ನೂತನವಾಗಿ ನಿರ್ಮಿಸಿರುವ  ಬಡಾವಣೆಯ ನಿವೇಶನಗಳ ನಮೂನೆ ಮೂರನ್ನು ಕೋರಿ ಅರ್ಜಿ ಸಲ್ಲಿಸಿದ್ದರು,ಅದನ್ನು ಕೇಳಲು ಪಟ್ಟಣ ಪಂಚಾಯ್ತಿಯ ಕಾರ್ಯಾಲಯಕ್ಕೆ ಹೋದಾಗ ಐದು ಲಕ್ಷ ಲಂಚನೀಡಿದರೆ ಮಾತ್ರ ನಮೂನೆ ಮೂರನ್ನು ಕೊಡುತ್ತೇವೆ ಇಲ್ಲವಾದರೆ ಇಲ್ಲವೆಂದು ಮಾತಿನ ಚಕಮಕಿ ನಡೆದು ದೈಹಿಕ ಹಲ್ಲೆಯೂ ಆಗಿ ಬಳಗಾನೂರು ಠಾಣೆಯಲ್ಲಿ ದೂರು ಪ್ರತಿದೂರುಗಳು ದಾಖಲಾಗಿ ತನಿಖೆ ಪ್ರಗತಿಯಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆ ಉದ್ದೇಶಿಸಿ ಕೆಆರ್‌ಎಸ್ ಪಕ್ಷದ ಮುಖಂಡ ಕೆ. ನಿರುಪಾದಿ ಗೋಮರ್ಸಿ ಮಾತನಾಡಿ, ಪಟ್ಟಣ ಪಂಚಾಯಿತಿಯಲ್ಲಿ ಸಾರ್ವಜನಿಕರ ಯಾವುದೇ ಕೆಲಸ ಮಾಡಿಸಿಕೊಳ್ಳಲು ಲಂಚ ನೀಡುವುದು, ಅಥವಾ ಎಂಪಿ–ಎಂಎಲ್‌ಎಗಳ ಶಿಫಾರಸು ಕಡ್ಡಾಯವಾದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲದಿದ್ದರೆ ಅಧಿಕಾರಿಗಳ ಕೈಕಾಲು ಹಿಡಿದು ಕೋರಿಕೆಯಿಡಬೇಕಾದ ಸ್ಥಿತಿ ಉಂಟಾಗಿದೆ ಎಂದು ಆರೋಪಿಸಿದರು.

ಪಟ್ಟಣ ಪಂಚಾಯಿತಿಯಲ್ಲಿ ಸಾರ್ವಜನಿಕ ಸೇವೆಗಳ ಹೆಸರಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ದಿನೇದಿನೇ ಮಿತಿಮೀರಿದ್ದು, ಅಧಿಕಾರಿಗಳು ಜನಪ್ರತಿನಿಧಿಗಳು ಹಾಗೂ ರಾಜಕಾರಣಿಗಳ ಅಡಿಯಾಳುಗಳಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಜಿಲ್ಲಾಧ್ಯಕ್ಷ ಎಸ್. ನಜೀರ್ ಆಕ್ರೋಶ ವ್ಯಕ್ತಪಡಿಸಿದರು.

“ಸಾರ್ವಜನಿಕರ ಸೇವಕರಾಗಬೇಕಾದ ಸಿಬ್ಬಂದಿ ಜನರ ರಕ್ತ ಹೀರುವ ರಕ್ತಪಿಪಾಸುಗಳಾಗಿ ವರ್ತಿಸುತ್ತಿದ್ದಾರೆ. ಸಾಮಾನ್ಯ ನಾಗರಿಕರು ಕೆಲಸಕ್ಕಾಗಿ ದೂರವಾಣಿ ಮಾಡಲಾದರೂ ಕರೆ ಸ್ವೀಕರಿಸುವುದಿಲ್ಲ. ಆದರೆ ‘ಲಂಚ ಕೊಡುತ್ತೇವೆ ಸರ್’ ಎಂದರೆ ಕ್ಷಣಾರ್ಧದಲ್ಲಿ ಹಾಜರಾಗುತ್ತಾರೆ ಎಂದು ಅವರು ವಾಗ್ದಾಳಿ ನಡೆಸಿದರು.

ನಂತರ ನೂತನವಾಗಿ ಬಂದಿರುವ ಮುಖ್ಯಾಧಿಕಾರಿ ಗೋಪಾಲನಾಯಕರಿಗೆ ಮನವಿ ಪತ್ರ ನೀಡಿ ಶೀಘ್ರ ನಮೂನೆ ಮೂರನ್ನು ನೀಡುವಂತೆ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ದಲಿತ ಯುವಕನ ಹತ್ಯೆ ಪ್ರಕರಣ; ಆರೋಪಿತರ ಬಂಧನಕ್ಕೆ ಭೀಮ್‌ ಆರ್ಮಿ ಆಗ್ರಹ

ಪ್ರತಿಭಟನೆಯಲ್ಲಿ ಖಾಜಾಸಾಬ್, ಎಂ ಡಿ ಖಾಜಾ ಶೇಡ್ಮಿ, ಬಸವರಾಜ ಹಿರೇಕಡುಬೂರು, ನಿರುಪಾದಿ ಮುರಾರಿ, ಹುಸೇನ್ ಸಾಬ್, ಸೇರಿದಂತೆ ಹಲವರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...