ರಾಯಚೂರು | ಗ್ರಾ.ಪಂ. ವ್ಯಾಪ್ತಿಯ ಸರ್ಕಾರಿ ಆಸ್ತಿ ಸಮೀಕ್ಷೆ ವಿಳಂಬ; ಪಿಡಿಒಗಳಿಗೆ ನೋಟೀಸ್

Date:

ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿರುವ ಸರ್ಕಾರಿ ಆಸ್ತಿಗಳ ಬಗ್ಗೆ ಸಮೀಕ್ಷೆ ನಡೆಸಿ, ತಂತ್ರಾಂಶದಲ್ಲಿ ದಾಖಲಿಸಲಾಗಿಲ್ಲ ಎಂದು ಜಿಲ್ಲೆಯ ಎಲ್ಲ ಪಿಡಿಒಗಳನ್ನು ಜಿಲ್ಲಾ ಪಂಚಾಯತಿ ಸಿಇಒ ಪಾಂಡ್ವೆ ರಾಹುಲ್ ತುಕಾರಾಂ ತರಾಟೆಗೆ ತೆಗೆದುಕೊಂಡಿದ್ದಾರೆ. 2 ದಿನಗಳಲ್ಲಿ ಸಮೀಕ್ಷಾ ಮಾಹಿತಿ ನೀಡದಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ನೋಟೀಸ್‌ ಜಾರಿ ಮಾಡಿದ್ದಾರೆ,

ರಾಯಚೂರಿನಲ್ಲಿ ತಾಲೂಕು ಪಂಚಾಯತಿ ಇಒ ಮತ್ತು ಗ್ರಾಮ ಪಂಚಾಯತಿ ಪಿಡಿಒಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. “ಜಿಲ್ಲೆಯ 179 ಗ್ರಾಮ ಪಂಚಾಯತಿಗಳಲ್ಲಿ ಕೇವಲ ಬೆರಳೆಣಿಕೆಷ್ಟು ಮಾತ್ರ ಸಮೀಕ್ಷೆ ನಡೆಸಿ, ಬೇಕಾಬಿಟ್ಟಿಯಾಗಿ ತಂತ್ರಾಂಶದಲ್ಲಿ ಅಳವಡಿಸಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸಕಾಲದಲ್ಲಿ ಅರ್ಜಿಗಳ ವೀಲೇವಾರಿ ಮಾಡಲಾಗಿಲ್ಲ. ಬಾಕಿ ಉಳಿದಿರುವ ಎಲ್ಲ ಅರ್ಜಿಗಳನ್ನು ಮುಂದಿನ ಸಭೆಯೊಳಗೆ ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಘನತ್ಯಾಜ್ಯ ವೀಲೆವಾರಿ ಮಾಡಿ ಒಂದಡೆ ಸಂಗ್ರಹಿಸಬೇಕು. ಘನತ್ಯಾಜ್ಯ ಸಂಗ್ರಹ ಶೆಡ್‌ ಇಲ್ಲದಿದ್ದರೆ, ತಾತ್ಕಾಲಿಕವಾಗಿ ಶೆಡ್ ನಿರ್ಮಾಣ ಮಾಡಿ ಸಂಗ್ರಹಿಸಬೇಕು” ಎಂದು ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಸ ಸಂಗ್ರಹಿಸುವ ವಾಹನಗಳ ಮಹಿಳಾ ಚಾಲಕರಿಗೆ ಕಳೆದ 1 ವರ್ಷದಿಂದ ವೇತನ ನೀಡಿಲ್ಲ. ಉದ್ಬಾಳ ಗ್ರಾಮ ಪಂಚಾಯತಿಯಲ್ಲಿ 4 ತಿಂಗಳ ವೇತನ ನೀಡಿಲ್ಲ. ಜಾನೇಕಲ್‌ನಲ್ಲಿ 4 ತಿಂಗಳ ವೇತನ ನೀಡಿಲ್ಲ. ನಕ್ಕುಂದಿ, ತಲೇಖಾನ್ ಗ್ರಾಮ ಪಂಚಾಯತಿಯಲ್ಲಿ 1 ವರ್ಷದಿಂದ ವೇತನ ನೀಡಿಲ್ಲ” ಎಂದು ಕಿಡಿಕಾರಿದರು.

“ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಇಂಡಸ್ಟ್ರಿಗಳು ತೆರಿಗೆ ನೀಡಿಲ್ಲ. ಅಂತಹ ಇಂಡಸ್ಟ್ರಿಗಳು ಮತ್ತು ಕಡಿಮೆ ತೆರಿಗೆ ನೀಡಿದ ಇಂಡಸ್ಟ್ರಿಗಳಿಗೆ ನೋಟಿಸ್ ನೀಡಬೇಕು” ಎಂದು ತಿಳಿಸಿದರು.

  • ಸಿಟಿಜನ್‌ ಜರ್ನಲಿಸ್ಟ್‌, ಹಫೀಜುಲ್ಲ ರಾಯಚೂರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...