ರಾಯಚೂರು | ಮೂಲಸೌಕರ್ಯ ಒದಗಿಸುವಂತೆ ಆಗ್ರಹ

Date:

ರಾಯಚೂರು ನಗರದ ವಾರ್ಡ್ ನಂ.29ರಲ್ಲಿ ಕುಡಿಯುವ ನೀರು ಮತ್ತು ಬಳಕೆಯ ನೀರಿನ ಸಮಸ್ಯೆ ಎದುರಾಗಿದ್ದು, ಚರಂಡಿಗಳಿಂದ ದುರ್ವಾಸನೆ ಹೆಚ್ಚಿದೆ. ಇವುಗಳನ್ನು ಸ್ವಚ್ಛಗೊಳಿಸಬೇಕು ಎಂದು ರಾಷ್ಟ್ರೀಯ ಸಮಾಜ ಪರಿವರ್ತನಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಖಾಲಿ ಕೊಡಗಳೊಂದಿಗೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

“ನಗರದ ವಾರ್ಡ್ ನಂ.29ರಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಬಡಾವಣೆ ನಿವಾಸಿಗಳು ತತ್ತರಿಸಿ ಹೋಗಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ವಾರ್ಡ್‌ನಲ್ಲಿರುವ ಬೋರ್‌ವೆಲ್ ದುರಸ್ತಿ ಹಾಗೂ ನೀರಿನ ಪೈಪ್‌ಲೈನ್ ದುರಸ್ತಿ ಮಾಡದೇ ನೀರಿನ ಸಮಸ್ಯೆ ಪರಿಹರಿಸಲು ವಿಫಲರಾಗಿದ್ದಾರೆ” ಎಂದು ಪ್ರತಿಭಟನಾಕಾರು ದೂರಿದರು.

“ನಿತ್ಯ ಕೈಗಾರಿಕಾ ಕಂಪನಿಗಳಿಗೆ ಅಕ್ರಮವಾಗಿ ಕೃಷ್ಣಾ ನದಿಯಿಂದ ಬರುವ ಮುಖ್ಯ ಪೈಪ್‌ಲೈನ್ ಮೂಲಕ ನೀರಿನ ಸಂಪರ್ಕ ಕಲ್ಪಿಸಿಕೊಟ್ಟಿದ್ದು, ಅತಿ ಹೆಚ್ಚು ನೀರನ್ನು ಸರಬರಾಜು ಮಾಡಲಾಗುತ್ತಿದೆ. ಇದರಿಂದಾಗಿ ನಗರದ ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆ ಉಂಟಾಗಿದೆ. ನಿರ್ಲಕ್ಷ್ಯ ವಹಿಸಿದ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ತೆಗೆದುಕೊಂಡು ಅಮಾನತು ಮಾಡಬೇಕು. ಕುಡಿಯುವ ನೀರು ಒದಗಿಸಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಾರ್ಡಿನಲ್ಲಿ ಚರಂಡಿ ಕಾಲುವೆಗಳು ಇರುವುದರಿಂದ ಸ್ವಚ್ಛತೆ ಮಾಡದ ಕಾರಣ ದುರ್ವಾಸನೆ ಹೆಚ್ಚಾಗಿ ಇದರಿಂದ ನಿವಾಸಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಸೊಳ್ಳೆಗಳು ಹೆಚ್ಚಾಗಿ ಇವುಗಳಿಂದ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಚರಂಡಿ ಹೂಳೆತ್ತಿ ಸ್ವಚ್ಛತೆ ಮಾಡಬೇಕು ಹಾಗೂ ಬೀದಿದೀಪಗಳ ದುರಸ್ತಿಗೆ ಮುಂದಾಗಬೇಕು” ಎಂದು ಒತ್ತಾಯಿಸಿದರು.

“ಮೂಲಸೌಕರ್ಯಕ್ಕಾಗಿ ನಗರಸಭೆಗೆ ಸರ್ಕಾರದಿಂದ ಸಾಕಷ್ಟು ಅನುದಾನ ಬಂದರೂ ಕೂಡ ರಾಯಚೂರು ನಗರದಲ್ಲಿ ನೀರಿನ ಸಮಸ್ಯೆಯನ್ನು ಪರಿಹರಿಸಿಲ್ಲ. ಜಿಲ್ಲೆಯಲ್ಲಿ ದಿನದ 24 ಗಂಟೆಯೂ ಕುಡಿಯುವ ನೀರಿನ ಯೋಜನೆ, ಮನೆ ಮನೆಗೆ ಶುದ್ಧ ನೀರು ತಲುಪಿಸುವ ಯೋಜನೆ ಕೇವಲ ಹೆಸರಿಗೆ ಮಾತ್ರವಾಗಿದೆ. ನೀರಿಗಾಗಿ ರಾತ್ರಿಯೆಲ್ಲಾ ನಿದ್ದೆಗೆಟ್ಟು ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಎಚ್ಚೆತ್ತುಕೊಂಡು ಕ್ರಮ ವಹಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ರಸೀದಿಯಿಲ್ಲದೇ ಆಭರಣಗಳ ಸಾಗಾಟ-ಮಾರಾಟ ಮಾಡುವಂತಿಲ್ಲ: ಜಿಲ್ಲಾಧಿಕಾರಿ

ಈ ಸಂದರ್ಭದಲ್ಲಿ ವಿಭಾಗೀಯ ಅಧ್ಯಕ್ಷ ಶ್ರೀನಿವಾಸ ಕೊಪ್ಪರ, ಮುಖಂಡ ಶಂಶಾವಲಿ, ಮಲ್ಲಿಕಾರ್ಜುನ, ರಂಗನಾಥ, ಮೈಲಾರಿ, ಗಿರಿಜಮ್ಮ, ಲಕ್ಷ್ಮಿ, ಮಾಲಾ ಬೀ, ಡಿ ಕೆ ರಾಜು ಲಕ್ಕಂದಿನ್ನಿ ಸೇರಿದಂತೆ ಬಹುತೇಕರು ಇದ್ದರು.

ವರದಿ : ಹಫೀಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...