ರಾಯಚೂರು | ಪಡಿತರದಲ್ಲಿ ತೊಗರಿ ಬೇಳೆ, ಎಣ್ಣೆ ವಿತರಿಸುವಂತೆ ಆಗ್ರಹ

Date:

ರೈತರು ಮತ್ತು ಕಾರ್ಮಿಕರ ಹಿತ ದೃಷ್ಠಿಯಿಂದ ಪೌಷ್ಠಿಕಾಂಶದ ಕೊರತೆ ನಿವಾರಣೆಗೆ ಆಯಾ ಪ್ರದೇಶಕ್ಕನುಗುಣವಾಗಿ ಪಡಿತರ ಅಕ್ಕಿಯೊಂದಿಗೆ ಪ್ರತಿ ವ್ಯಕ್ತಿಗೆ ರಾಗಿ ಮತ್ತು 1 ಕೆಜಿ ತೊಗರಿ ಬೇಳೆ, 1 ಕೆಜಿ ಅಡುಗೆ ಎಣ್ಣೆಯನ್ನು ಅನುಕೂಲಕರ ದರದಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ ಕಲ್ಪಿಸುವಂತೆ ಗ್ರಾಮೀಣ ಕೂಲಿ ಕಾರ್ಮಿಕ ಸಂಘದ ಕಾರ್ಯಕರ್ತರು ಆಗ್ರಹಿಸಿದರು.

ರಾಯಚೂರು ನಗರ ಅಂಬೇಡ್ಕರ್ ವೃತ್ತದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆ ಕಾರ್ಯಕರ್ತರು ನಡೆಸಿದ ಆಹೋರಾತ್ರಿ ಧರಣಿ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಶರಣ ಪ್ರಕಾಶ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು.

“ರೈತರು ಬೆಳೆಯುವ ಆಹಾರ ಧಾನ್ಯಗಳು ಸ್ಥಳೀಯವಾಗಿ ಸೂಕ್ತ ಮಾರುಕಟ್ಟೆಯ ಲಭ್ಯತೆ, ಗ್ರಾಮೀಣ ಭಾಗದಲ್ಲಿ ಆಹಾರ ಸಂಸ್ಕರಣ ಘಟಕಗಳಿಗೆ ಪ್ರೋತ್ಸಾಹ, ಕಾರ್ಮಿಕರಿಗೆ, ವಿಶೇಷವಾಗಿ ಅಪೌಷ್ಟಿಕತೆ ಹೆಚ್ಚುತ್ತಿರುವ ಮಹಿಳೆಯರು ಮತ್ತು ಮಕ್ಕಳ ಅಪೌಷ್ಠಿಕತೆ ನೀಗಿಸುವ ಪೌಷ್ಠಿಕ ಆಹಾರ ಸಿಕ್ಕಂತಾಗುತ್ತದೆ. ಆಹಾರ ಭದ್ರತೆಗೆ ಸರಿಯಾದ ಅರ್ಥ ಬರುತ್ತದೆ” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಮನರೇಗಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ಆಹಾರ ಧಾನ್ಯ ಪಡಿತರಕ್ಕೆ ಒತ್ತಾಯ

“ಉದ್ಯೋಗ ಖಾತ್ರಿಯಲ್ಲಿ 90 ದಿನಗಳಿಗೂ ಹೆಚ್ಚಿನ ಮಾನವ ದಿನಗಳನ್ನು ಮುಗಿಸಿದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಗಾಗಿ ಬಿಒಸಿಡಬ್ಲ್ಯೂ ಅಡಿಯಲ್ಲಿ ಕಾರ್ಮಿಕರ ಚೀಟಿಗಳನ್ನು ನೀಡಬೇಕು. ಇವೆರಡೂ ಅಪೌಷ್ಠಿಕತೆ ನೀವಾರಣೆಗೆ ಆಹಾರ ಭದ್ರತೆ ಮತ್ತು ಆರೋಗ್ಯಕ್ಕೆ ಶಿಕ್ಷಣದ ಸಾಮಾಜಿಕ ಭದ್ರತೆಯ ಯೋಜನೆಗಳಾಗಿದ್ದು, ರೈತರು ಮತ್ತು ಕಾರ್ಮಿಕರಿಗೆ ಏಕಕಾಲಕ್ಕೆ ಪ್ರಯೋಜನವಾಗಿರುವ ಜನಪರ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಗುರುರಾಜ್, ಶಾಂಭವಿ, ಮಾರಮ್ಮ, ವಿರೂಪಮ್ಮ, ಬಸವರಾಜ್, ಈರಣ್ಣ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...