ರಾಯಚೂರು | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ವರುಣಾದಿಂದ ವಿಧಾನಸೌಧದವರೆಗೆ ಪಾದಯಾತ್ರೆ; ಸರ್ಕಾರಕ್ಕೆ ಎಚ್ಚರಿಕೆ

Date:

ಮುಖ್ಯಮಂತ್ರಿ ಸಿದ್ಧರಾಮಯ್ಯನವರ ನೇತೃತ್ವದಲ್ಲಿ ಸರ್ಕಾರ ತೆಗೆದುಕೊಂಡ ಕಾಲಾವಕಾಶದೊಳಗೆ ಒಳಮೀಸಲಾತಿ ಜಾರಿಗೊಳಿಸಬೇಕು. ಇಲ್ಲದಿದ್ದರೆ ಮೈಸೂರು ನಗರದ ವರುಣಾ ಕ್ಷೇತ್ರದಿಂದ ಬೆಂಗಳೂರಿನ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸಿ, ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಮಾದಿಗ ದಂಡೋರಾ ಮಾದಿಗ ಮೀಸಲಾತಿ ಹೋರಾಟ ಸಮಿತಿ(ಎಂಆರ್‌ಎಚ್‌ಎಸ್) ರಾಜ್ಯಾಧ್ಯಕ್ಷ ನರಸಪ್ಪ ದಂಡೋರಾ ಎಚ್ಚರಿಸಿದರು.

ರಾಯಚೂರು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳಮೀಸಲಾತಿ ಜಾರಿಗೆ ಎರಡು ತಿಂಗಳು ಕಾಲಾವಕಾಶವನ್ನು ಪಡೆದಿದ್ದಾರೆ. ಒಂದು ತಿಂಗಳೊಳಗಾಗಿ ಜನಸಂಖ್ಯಾ ಆಧಾರದ ಅನುಗುಣವಾಗಿ ಮೀಸಲಾತಿಯನ್ನು ಜಾರಿಗೊಳಿಸಬೇಕು” ಎಂದು ಆಗ್ರಹಿಸಿದರು.

ಎಂಆರ್‌ಎಚ್‌ಎಸ್ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗ ಅವರ ನೇತೃತ್ವದಲ್ಲಿ ಕಳೆದ 30 ವರ್ಷಗಳ ನಿರಂತರ ಹೋರಾಟದ ಫಲವಾಗಿ ಸುಪ್ರೀಂಕೋರ್ಟ್ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಪರವಾಗಿ ತೀರ್ಪು ನೀಡಿದೆ. ಒಳಮೀಸಲಾತಿ ಜಾರಿಗೆ ಕಾಂಗ್ರೆಸ್‌ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಜಿ ಪರಮೇಶ್ವರ, ಎಚ್ ಸಿ ಮಹಾದೇವಪ್ಪ ಅವರೇ ಆಕ್ಷೇಪಿಸುತ್ತಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪರಿಸ್ಥಿತಿ ನಿರ್ಮಾಣಗೊಂಡರೆ, ಮಾದಿಗ ಸಮುದಾಯದ ಕಾಂಗ್ರೆಸ್ ಪಕ್ಷದ ನಾಯಕ ಕೆ ಎಚ್ ಮುನಿಯಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಕೆರೆ ಅಭಿವೃದ್ಧಿಗೆ ಸರ್ವೆ ಕಾರ್ಯ; ಸುತ್ತಮುತ್ತಲ ಬಡವರಿಗೆ ವಸತಿ ಕಲ್ಪಿಸಲು ಒತ್ತಾಯ

“ಒಳಮೀಸಲಾತಿಯನ್ನು ಕಾಂಗ್ರೆಸ್ ಪಕ್ಷ ಕಡೆಗಣಿಸಿದರೆ, ಮಾದಿಗ ಸಮುದಾಯಕ್ಕೆ ಅನ್ಯಾಯವೆಸಗಿದಂತಾಗುತ್ತದೆ” ಎಂದು ಹೇಳಿದರು.

ಸಂಘಟನೆಯ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ಜೆ ಎಂ ದೇವರಾಜ, ಜಿಲ್ಲಾ ಘಟಕ ಅಧ್ಯಕ್ಷ ಮಾನಪ್ಪ ಮೇಸ್ತ್ರೀ, ಪದಾಧಿಕಾರಿಗಳಾದ ದುಳ್ಳಯ್ಯ ಗುಂಜಳ್ಳಿ, ರಂಜೀತ್ ದಂಡೋರಾ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...