ರಾಯಚೂರು | ಹಟ್ಟಿ ಚಿನ್ನದ ಗಣಿ ಹೊಸ ಬಸ್‌ ನಿಲ್ದಾಣದ ಡ್ರೈನೇಜ್ ದುರಸ್ತಿಗೆ ಒತ್ತಾಯ

Date:

ಹಟ್ಟಿ ಚಿನ್ನದ ಗಣಿ ಪಟ್ಟಣದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ಡ್ರೈನೇಜ್ ನೀರು ಸಂಗ್ರಹವಾಗಿ ದುರ್ವಾಸನೆ ಬೀರುತ್ತಿದ್ದು, ಬಸ್ ನಿಲ್ದಾಣಕ್ಕೆ ಬರುವ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಹಟ್ಟಿ ಪಟ್ಟಣ ನಾಗರಿಕ ಸಮಿತಿ ಮತ್ತು ಆಟೋ ಚಾಲಕರ ಸಂಘ ವತಿಯಿಂದ ಹಟ್ಟಿ ಚಿನ್ನದ ಗಣಿ ವ್ಯವಸ್ಥಾಪಕರಿಗೆ ಮನವಿ ಪತ್ರ ಸಲ್ಲಿಸಿ ಸಮಸ್ಯೆಯನ್ನು ತಕ್ಷಣವೇ ಪರಿಹರಿಸಬೇಕೆಂದು ಆಗ್ರಹಿಸಿದರು.

ಹೊಸ ಬಸ್ ನಿಲ್ದಾಣದ ಸಮೀಪದಲ್ಲಿರುವ ಡ್ರೈನೇಜ್ ಬಹು ದಿನಗಳಿಂದ ನಿರ್ವಹಣೆಯಿಲ್ಲದೆ ಹಾಳಾಗಿರುವುದರಿಂದ ಈ ಡ್ರೈನೇಜ್‌ನಿಂದ ಸಾರ್ವಜನಿಕರು ಹಲವಾರು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಅಲ್ಲದೆ, ಪಕ್ಕದಲ್ಲಿಯೇ ಸಾರ್ವಜನಿಕರಿಗೆ ಕುಡಿಯುವ ನೀರಿನ ನಲ್ಲಿಯಿರುವುದರಿಂದ ದುರ್ವಾಸನೆಯಿಂದ ನೀರು ಬಳಕೆಗೆ ಅಸಮಾಧಾನ ಉಂಟಾಗುತ್ತಿದೆ ಎಂದರು.

ಬಸ್ ನಿಲ್ದಾಣದ ಪಕ್ಕದಲ್ಲೇ ಆಟೋ ನಿಲ್ದಾಣವಿದ್ದು, ಅಲ್ಲಿನ ಆಟೋ ಚಾಲಕರಿಗೂ ಕ್ರಿಮಿಕೀಟಗಳ ಕಾಟ ಹೆಚ್ಚಾಗಿದೆ. ಇದರಿಂದ ರೋಗಗಳು ಹರಡುವ ಭೀತಿ ಎದುರಾಗಿದ್ದು, ಸಾರ್ವಜನಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಂಡು ಡ್ರೈನೇಜ್ ವ್ಯವಸ್ಥೆಯನ್ನು ದುರಸ್ತಿ ಮಾಡಿ ಸಾರ್ವಜನಿಕರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಹಟ್ಟಿ ಪಟ್ಟಣ ನಾಗರಿಕ ಸಮಿತಿ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಮದ್ಯಪಾನ ನಿಷೇಧಕ್ಕೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ಈ ವೇಳೆ ಸಂಘದ ಮುಖಂಡ ಲಾಲ್‌ ಪೀರ್‌, ಸುರೇಶ ಗುರಿಕಾರ, ಸದ್ದಾಂ, ಶಿವಪ್ಪ, ಶರೀಫ್‌ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...