ರಾಯಚೂರು | ಆನ್ವರಿ ಗ್ರಾಮಕ್ಕೆ ರೈತ ಸಂಪರ್ಕ ಕೇಂದ್ರ ಮಂಜೂರು ಮಾಡುವಂತೆ ಆಗ್ರಹ

Date:

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಆನ್ವರಿ ಗ್ರಾಮಕ್ಕೆ ರೈತ ಸಂಪರ್ಕ ಕೇಂದ್ರ ಮಂಜೂರು ಮಾಡಬೇಕು ಎಂದು ಹಲವು ವರ್ಷಗಳಿಂದ ಆನ್ವರಿ ಗ್ರಾಮದ ಜನರ ಬೇಡಿಕೆಯಾಗಿದೆ.

ಅನ್ವರಿ ಗ್ರಾಮದ ಸುಮಾರು 20 ಕೀಮೀ ವ್ಯಾಪ್ತಿಯಲ್ಲಿ 4 ಗ್ರಾಮ ಪಂಚಾಯಿತಿಗಳು ಸೇರಿದಂತೆ ಸುಮಾರು 20 ಗ್ರಾಮಗಳು ಸೇರುತ್ತವೆ. ಅನ್ವರಿ ಗ್ರಾಮದ ರೈತರು ಹೊಲದಲ್ಲಿ ಬೆಳೆಯುವುದಕ್ಕೆ ಬೀಜಗಳು, ಗೊಬ್ಬರ, ಕೃಷಿ ಸಾಮಾಗ್ರಿಗಳು ಸೇರಿದಂತೆ ಇತರ ಸಾಮಗ್ರಿಗಳು ಬೇಕಾದರೆ ಅನ್ವರಿ ಗ್ರಾಮದಿಂದ ಸುಮಾರು 30 ಕಿಮೀ ಗುರುಗುಂಟ ಗ್ರಾಮಕ್ಕೆ ತೆರಳುವ ಪರಿಸ್ಥಿತಿ ಇದೆ.

“ಆನ್ವರಿ ಗ್ರಾಮದಿಂದ ಗುರುಗುಂಟ ಗ್ರಾಮಕ್ಕೆ ತೆರಳಬೇಕಾದರೆ ಹಟ್ಟಿ ಪಟ್ಟಣದಿಂದ ಸಾಗಿ ಹೋಗಬೇಕು. ಎರಡ್ಮೂರು ಬಸ್ ಬದಲಾವಣೆ ಮಾಡಬೇಕು. ಇಲ್ಲದಿದ್ದರೆ ಲಿಂಗಸಗೂರು ತಾಲೂಕಿಗೆ ಹೋಗಿ ಅಲ್ಲಿಂದ ಹೋಗಬೇಕಾಗುವ ಅನಿವಾರ್ಯವಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ಸಂಪರ್ಕ ಕೇಂದ್ರದಲ್ಲಿ ಸ್ಥಳೀಯ ರೈತರು ಬೆಳಗಿನ ಜಾವ ಸಾಲಾಗಿ ನಿಂತಿರುತ್ತಾರೆ. ನಾವು ಬಸ್ ವ್ಯವಸ್ಥೆ ಇಲ್ಲದೆ ಗುರುಗುಂಟ ಗ್ರಾಮಕ್ಕೆ ತೆರಳುವಷ್ಷರಲ್ಲಿ ಸರಿ ಸುಮಾರು ಮಧ್ಯಾಹ್ನವಾಗಿರುತ್ತದೆ. ಸಾಲಿನಲ್ಲಿ ನೂರಾರು ರೈತರು ಇರುತ್ತಾರೆ. ನಾವು ಸಂಜೆವರೆಗೂ ಕೂತು ಕಾದು ಕಾದು ಖಾಲಿ ಕೈಯಿಂದ ಬರುವಂತಾಗಿದೆ. ಜನ ದಟ್ಟಣೆಯಿಂದ ಸರ್ಕಾರದ ಕೃಷಿ ಇಲಾಖೆಯ ಯೋಜನೆಗಳಿಂದ ವಂಚಿತರಾಗುತ್ತಿದ್ದಾರೆ.

ಗ್ರಾಮದ ಸಾಮಾಜಿಕ ಕಾರ್ಯಕರ್ತ ಹಾಗೂ ಹಿರಿಯ ಮುಖಂಡ ಜಿಲಾನಿಪಾಷಾ ಆನ್ವರಿ ಅವರು ಮಾತನಾಡಿ‌, “ಅನ್ವರಿ ಗ್ರಾಮದಲ್ಲಿ ರೈತ ಸಂಪರ್ಕ ಕೇಂದ್ರ ಅತಿ ಅವಶ್ಯಕತೆ ಇರುತ್ತದೆ .ರೈತ ಸಂಪರ್ಕ ಕೇಂದ್ರ ಪ್ರಾರಂಭಿಸಿದರೆ ಸುತ್ತಮುತ್ತಲಿನ ಗ್ರಾಮಗಳ ರೈತರಿಗೆ ಬಹಳ ಅನುಕೂಲವಾಗುತ್ತದೆ. ರೈತರಿಗೆ ಕೃಷಿಗೆ ಸಂಬಂಧಪಟ್ಟ ಸರ್ಕಾರದಿಂದ ಏನಾದರೂ ಸಿಗಬೇಕಾದರೆ ಗ್ರಾಮದ ಜನರು ತಮ್ಮ ಕೆಲಸವನ್ನು ಬಿಟ್ಟು ಗುರುಗುಂಟ ಗ್ರಾಮಕ್ಕೆ ತೆರಳುವಂತಿದೆ”‌ ಎಂದರು.

“ಸದ್ಯ ಗುರುಗುಂಟಾ ಗ್ರಾಮದಲ್ಲಿರುವ ರೈತ ಸಂಪರ್ಕ ಕೇಂದ್ರದವನ್ನು ಸುಮಾರು 40 ಗ್ರಾಮಗಳಿಗಿಂತ ಹೆಚ್ಚು ರೈತರು ಅವಲಂಬಿಸಿರುತ್ತಾರೆ. ಇದರಿಂದ ಗುರುಗುಂಟಾ ರೈತ ಸಂಪರ್ಕ ಕೇಂದ್ರದಲ್ಲಿ ದಟ್ಟಣೆ ಹೆಚ್ಚಾಗಿ ರೈತರು ಕೃಷಿ ಇಲಾಖೆಯ ಯೋಜನೆಗಳಿಂದ ವಂಚಿತರಾಗುತ್ತಿದ್ದಾರೆ” ಎಂದರು.

“ರೈತರು ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ವಾರಗಟ್ಟಲೆ ಬೀಜ, ಗೊಬ್ಬರ ಸೇರಿದಂತೆ ಇತರ ಕೃಷಿ ಸಲಕರಣೆಗಳನ್ನು ಪಡೆಯಲು ಸಂಪೂರ್ಣ ಕೆಲಸ ಕಾರ್ಯಗಳನ್ನು ಬಿಟ್ಟು ಗುರುಗುಂಟಾ ರೈತ ಸಂಪರ್ಕ ಕೇಂದ್ರಕ್ಕೆ ಅಲೆಯಬೇಕಾಗಿದೆ. ಆದ್ದರಿಂದ 30-35ಸಾವಿರ ಜನಸಂಖ್ಯೆ ಹೊಂದಿದ ಆನ್ವರಿ ಗ್ರಾಮದಲ್ಲಿ ಹೊಸದಾಗಿ ರೈತ ಸಂಪರ್ಕ ಕೇಂದ್ರ ಆರಂಭಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಸಿಎಂ ಆಗಿದ್ದಾಗ ಕ್ಷೇತ್ರಕ್ಕೆ ಏನೂ ಕೊಡುಗೆ ನೀಡದ ಬೊಮ್ಮಾಯಿ: ಜಿ ಎಸ್‌ ಪಾಟೀಲ ಟೀಕೆ

“ಸಂಬಂಧಪಟ್ಟ ಇಲಾಖೆ ಆದಷ್ಟು ಬೇಗ ಇದನ್ನು ಬಗೆಹರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಆನ್ವರಿ ಗ್ರಾಮದ ಜನರು ಮುತ್ತಿಗೆ ಹಾಕುವ ಸಮಯ ಬರುತ್ತದೆ” ಎಂದು ಎಚ್ಚರಿಕೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...